ಅಯೋಧ್ಯೆ (ರಾಮಮಂದಿರ): ರಾಮಮಂದಿರದಲ್ಲಿ (Ram Mandir) ರಾಮಲಲ್ಲಾ (Ram Lalla) ಪ್ರಾಣ ಪ್ರತಿಷ್ಠಾಪನೆ ವಿಧಿವಿಧಾನಗಳು ನಡೆಯುತ್ತಿವೆ. ಇಂದು (ಗುರುವಾರ) ಅಯೋಧ್ಯೆಯ ರಾಮಮಂದಿರದ ಗರ್ಭಗುಡಿಯೊಳಗೆ ರಾಮನ ವಿಗ್ರಹವನ್ನು ತರಲಾಗಿದೆ.
150-200 ಕೆಜಿ ತೂಕದ ವಿಗ್ರಹವನ್ನು ಕ್ರೇನ್ ಸಹಾಯದಿಂದ ಒಳಗೆ ತರುವ ಮುನ್ನ ಗರ್ಭಗುಡಿಯಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಇದನ್ನೂ ಓದಿ: ರಾಮಮಂದಿರ ಪ್ರವೇಶಿಸಿದ ರಾಮಲಲ್ಲಾ ಮೂರ್ತಿ
Advertisement
Advertisement
ರಾಮಲಲ್ಲಾನ ವಿಗ್ರಹವನ್ನು ಬುಧವಾರ ಸಂಜೆ ಅಯೋಧ್ಯೆ ದೇವಸ್ಥಾನಕ್ಕೆ ತರಲಾಗಿತ್ತು. ಅದನ್ನು ಗರ್ಭಗುಡಿಯಲ್ಲಿ ಇರಿಸಲು ಕ್ರೇನ್ ಬಳಸಿ ಮೇಲೆತ್ತಲಾಯಿತು. ‘ಪ್ರಾಣ ಪ್ರತಿಷ್ಠೆ’ ಸಮಾರಂಭಕ್ಕೂ ಮೊದಲು ಗರ್ಭಗುಡಿಯಲ್ಲಿ ವಿಗ್ರಹವನ್ನು ಸ್ಥಾಪಿಸಲಾಗುವುದು.
Advertisement
ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಅವರು ಕಪ್ಪು ಕಲ್ಲಿನಲ್ಲಿ ಕೆತ್ತಿದ ಸುಮಾರು 150-200 ಕೆಜಿ ತೂಕದ ವಿಗ್ರಹವನ್ನು ಬುಧವಾರ ಸಂಜೆ ಮೆರವಣಿಗೆಯೊಂದಿಗೆ ದೇವಸ್ಥಾನಕ್ಕೆ ತರಲಾಗಿತ್ತು. ಮೂರ್ತಿಯನ್ನು ಒಳಗೆ ತರುವ ಮುನ್ನ ಗರ್ಭಗುಡಿಯಲ್ಲಿ ವಿಶೇಷ ಪೂಜೆ ನಡೆಯಿತು. ಇದನ್ನೂ ಓದಿ: ಮೈಸೂರಿನ ಶಿಲ್ಪಿ ಕೆತ್ತಿರುವ ರಾಮಲಲ್ಲಾ ಮೂರ್ತಿ ಇಂದು ರಾಮಮಂದಿರ ಪ್ರವೇಶ – ದೇವಾಲಯದ ಸುತ್ತ ಪ್ರದಕ್ಷಿಣೆ
Advertisement
ನಿನ್ನೆ ಸಂಜೆ ರಾಮಲಲ್ಲಾ ಅವರ ಬೆಳ್ಳಿಯ ವಿಗ್ರಹವನ್ನು ಗುಲಾಬಿ ಮತ್ತು ಚೆಂಡು ಹೂಗಳಿಂದ ಅಲಂಕರಿಸಲಾಗಿತ್ತು. ಸಂಜೆ ರಾಮಮಂದಿರದ ಆವರಣದಲ್ಲಿ ಪ್ರದಕ್ಷಿಣೆ ಹಾಕಲಾಯಿತು. ಜನವರಿ 22 ರ ಕಾರ್ಯಕ್ರಮದ ಪೂರ್ವಭಾವಿಯಾಗಿ ಆಚರಣೆಯ ಅಂಗವಾಗಿ ‘ಕಲಶ ಪೂಜೆ’ ನಡೆಯಿತು.