ನವದೆಹಲಿ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ಮಂದಿರದಲ್ಲಿ (Ayodhya Ram Mandir) ಭಕ್ತರು ಸಲ್ಲಿಸಿದ್ದ ಕಾಣಿಕೆ ಹಣ ದುರುಪಯೋಗ ಮಾಡಿಕೊಂಡಿರುವ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ (Supreme Court) ಮಹತ್ವದ ಆದೇಶ ನೀಡಿದೆ. ಪ್ರಕರಣದ ತನಿಖೆ ನಡೆಸಿರುವ ವಿಶೇಷ ತನಿಖಾ ತಂಡ ಈಗಾಗಲೇ ಕೆಳಹಂತದ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿರುವ ಹಿನ್ನೆಲೆ ಈ ಸಂಬಂಧ ಸಲ್ಲಿಕೆಯಾಗಿದ್ದ ಎಲ್ಲ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಇತ್ಯರ್ಥಪಡಿಸಿದೆ.
ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಅರ್ಜಿದಾರರಿಗೆ ಕೆಳಹಂತದ ನ್ಯಾಯಾಲಯದಲ್ಲಿ ನಡೆಯಲಿರುವ ವಿಚಾರಣೆ ವೇಳೆ ದೂರುದಾರರಾಗಿ ತಮ್ಮ ವಾದ ಮಂಡಿಸಲು ಹಾಗೂ ನ್ಯಾಯಾಲಯದ ವಿಚಾರಣೆಗೆ ಸಹಕರಿಸಲು ಅನುಮತಿ ನೀಡಿದೆ. ಇದನ್ನೂ ಓದಿ: ಉತ್ತರಾಖಂಡ ಹೆಲಿಕಾಪ್ಟರ್ ದುರಂತ – ಒಕ್ಕಲಿಗ ಸಂಪ್ರದಾಯದಂತೆ ನೆರವೇರಿದ ತುಮಕೂರಿನ ಇಬ್ಬರ ಅಂತ್ಯಸಂಸ್ಕಾರ
ವಿಚಾರಣೆ ವೇಳೆ ಉತ್ತರ ಪ್ರದೇಶ ಸರ್ಕಾರದ ಪರವಾಗಿ ಹಾಜರಾಗಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಪ್ರಕರಣದ ತನಿಖೆ ನಡೆಸಿರುವ ವಿಶೇಷ ತನಿಖಾ ತಂಡವು ಅಯೋಧ್ಯೆಯ ಕೆಳಹಂತದ ನ್ಯಾಯಾಲಯದಲ್ಲಿ ಆರೋಪಪಟ್ಟಿ ಸಲ್ಲಿಸಿದೆ ಎಂದು ನ್ಯಾಯಪೀಠಕ್ಕೆ ಮಾಹಿತಿ ನೀಡಿದರು. ಇದನ್ನು ಸುಪ್ರೀಂ ಕೋರ್ಟ್ ದಾಖಲಿಸಿಕೊಂಡಿತು. ಇದನ್ನೂ ಓದಿ: ಕೇರಳದ ಹೆಣ್ಮಗಳ ದೂರು ಎಲ್ಲಿ ಹೋಯ್ತು? ಕೃಪಾ ಆಳ್ವಾ ವಿದೇಶಕ್ಕೆ ಕಳುಹಿಸಿದ್ದು ಯಾಕೆ?- ಡಿಕೆಶಿ ಸಿಡಿ ಲಿಂಕ್ ಬಿಚ್ಚಿಟ್ಟು ಹೆಚ್ಡಿಕೆ ಬಾಂಬ್
ಮಂದಿರದಲ್ಲಿ ಭಕ್ತರು ಸಲ್ಲಿಸುವ ಕಾಣಿಕೆ ಹಣವನ್ನು ಎಣಿಕೆ ಮಾಡುವ ಸಂದರ್ಭದಲ್ಲಿ ಕೆಲವು ಸಿಬ್ಬಂದಿ ಹಣವನ್ನು ತಮ್ಮ ಬಳಿಯೇ ಇರಿಸಿಕೊಳ್ಳುತ್ತಿದ್ದರು ಎಂಬ ಆರೋಪ ಕೇಳಿಬಂದಿತ್ತು. ಹಣ ಎಣಿಕೆ ಕಾರ್ಯದಲ್ಲಿ ತೊಡಗಿದ್ದ ಕೆಲವರು ಕಾಣಿಕೆ ಹಣವನ್ನು ಬೇರೆಡೆ ಹೂಡಿಕೆ ಮಾಡಿರುವುದು ಅಥವಾ ತಮ್ಮ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡಿಕೊಂಡಿರುವುದಾಗಿ ತನಿಖೆಯ ವೇಳೆ ತಿಳಿದುಬಂದಿದೆ ಎಂದು ಉತ್ತರ ಪ್ರದೇಶ ಸರ್ಕಾರ ಈ ಹಿಂದೆ ನ್ಯಾಯಾಲಯಕ್ಕೆ ತಿಳಿಸಿತ್ತು. ಇದನ್ನೂ ಓದಿ: ಸ್ಟಿಂಗ್ ಆಪರೇಷನ್ ಕೇಸ್ – ನಿರೀಕ್ಷಣಾ ಜಾಮೀನಿಗೆ ಹೆಚ್ಡಿಕೆ ಪಿಆರ್ಒ ಪ್ರಜ್ವಲ್ ಪ್ರಸಾದ್ ಅರ್ಜಿ
ಪ್ರಕರಣದ ತನಿಖೆ ನಡೆಸಿದ್ದ ಎಸ್ಐಟಿ, ಮಂದಿರದ ಕಾಣಿಕೆ ಹಣದ ಎಣಿಕೆ ಕೊಠಡಿಯ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಹಣವನ್ನು ಅಕ್ರಮವಾಗಿ ತೆಗೆದುಕೊಂಡು ಹೋಗಿರುವ ಅಥವಾ ಮುಚ್ಚಿಟ್ಟಿರುವ 105 ಘಟನೆಗಳು ಪತ್ತೆಯಾಗಿವೆ ಎಂದು ಈ ಹಿಂದೆ ಸುಪ್ರೀಂ ಕೋರ್ಟ್ಗೆ ವರದಿ ಸಲ್ಲಿಸಿತ್ತು. ಇದನ್ನೂ ಓದಿ: ಚುನಾವಣೆಗೂ ಮುನ್ನ ಎಎಪಿಗೆ ಶಾಕ್ – ಬಿಜೆಪಿಗೆ ಸೇರಿದ ಮೂವರು ಬಂಡಾಯ ಶಾಸಕರು
ಇದೀಗ ಆರೋಪಪಟ್ಟಿ ಸಲ್ಲಿಕೆಯಾಗಿರುವ ಹಿನ್ನೆಲೆ ಪ್ರಕರಣದ ಮುಂದಿನ ಕಾನೂನು ಪ್ರಕ್ರಿಯೆಗಳು ಕೆಳಹಂತದ ನ್ಯಾಯಾಲಯದಲ್ಲಿ ನಡೆಯಲಿವೆ. ಪ್ರಕರಣದ ಆರೋಪಗಳ ಸತ್ಯಾಸತ್ಯತೆ ಕುರಿತು ಯಾವುದೇ ಅಭಿಪ್ರಾಯ ವ್ಯಕ್ತಪಡಿಸಿಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ. ಆರೋಪಗಳು ಸಾಬೀತಾಗಿವೆಯೇ ಅಥವಾ ಇಲ್ಲವೇ ಎಂಬುದನ್ನು ವಿಚಾರಣಾ ನ್ಯಾಯಾಲಯವೇ ನಿರ್ಧರಿಸಲಿದೆ. ಇದರೊಂದಿಗೆ ರಾಮಮಂದಿರ ಕಾಣಿಕೆ ಹಣ ದುರುಪಯೋಗ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ನಲ್ಲಿ ಸಲ್ಲಿಕೆಯಾಗಿದ್ದ ಎಲ್ಲ ಅರ್ಜಿಗಳ ವಿಚಾರಣೆ ಮುಕ್ತಾಯಗೊಂಡಿದೆ. ಇದನ್ನೂ ಓದಿ: ಮಂಗಳವಾರ ಚಿತ್ರದುರ್ಗಕ್ಕೆ ಸಿಎಂ ಡಿಕೆಶಿ ಭೇಟಿ – ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

