ಅಯೋಧ್ಯೆ: ಹೊಸ ವರ್ಷದ ಮೊದಲ ದಿನವೇ ಅಯೋಧ್ಯೆಯಲ್ಲಿ ಜನವೋ ಜನ. ಜನವರಿ 1ರ ಸಂಜೆ 5 ಗಂಟೆಯವರೆಗೆ ಸುಮಾರು 2 ಲಕ್ಷಕ್ಕೂ ಅಧಿಕ ಜನರು ಅಯೋಧ್ಯೆಯಲ್ಲಿ ವಿರಾಜಿತ ಬಾಲಕ ರಾಮನ ದರ್ಶನ ಪಡೆದಿದ್ದಾರೆ. ಅಯೋಧ್ಯೆಯ ತುಂಬಾ ರಾಮಭಕ್ತರ ದಂಡೇ ಕಾಣಿಸುತ್ತಿದ್ದು, ತಮ್ಮ ಇಷ್ಟದೇವರನ್ನು ಕಣ್ತುಂಬಿಕೊಳ್ಳಲು ಭಕ್ತರು ಸರತಿ ಸಾಲಿನಲ್ಲಿ ನಿಂತುಕೊಂಡಿದ್ದಾರೆ.
ಜನವರಿ 1 ರಂದು ಬೆಳಗ್ಗೆ 7 ಗಂಟೆಯಿಂದ ಶ್ರೀರಾಮ ಲಲ್ಲಾನ ದರ್ಶನಕ್ಕೆ ಅನುವು ಮಾಡಿಕೊಡಲಾಗಿದೆ. ಒಟ್ಟು 5 ಸರತಿ ಸಾಲುಗಳಲ್ಲಿ ಭಕ್ತರಿಗೆ ದರ್ಶನ ವ್ಯವಸ್ಥೆ ಮಾಡಲಾಗುತ್ತಿದೆ. 2 ಲಕ್ಷ ಭಕ್ತರು ರಾಮನ ದರ್ಶನ ಪಡೆದಿದ್ದಾರೆ ಎಂದು ಶ್ರೀ ರಾಮಜನ್ಮಭೂಮಿ ತೀರ್ಥಕ್ಷೇತ್ರದ ಟ್ರಸ್ಟ್‌ನ ಸಾಮಾಜಿಕ ಜಾಲತಾಣಗಳಲ್ಲಿ ಭಕ್ತರ ಫೋಟೋಗಳನ್ನು ಅಪ್ಲೋಡ್ ಮಾಡಲಾಗಿದೆ. ಇದನ್ನೂ ಓದಿ: ದೊಡ್ಡ ಜಯ| ಮುಂಬೈ ದಾಳಿಕೋರನನ್ನು ಭಾರತಕ್ಕೆ ಹಸ್ತಾಂತರಿಸಲು ಅಮೆರಿಕ ಕೋರ್ಟ್ ಆದೇಶ
Advertisement
Advertisement
ಸಂಜೆ 5 ಗಂಟೆಯವರೆಗೆ 2 ಲಕ್ಷ ಭಕ್ತರು ಅಯೋಧ್ಯೆ ರಾಮನ ದರ್ಶನ ಪಡೆದಿದ್ದಾರೆ. ರಾತ್ರಿ 9 ಗಂಟೆಯವರೆಗೆ ಭಕ್ತರಿಗೆ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದ್ದು, ಭಕ್ತರು ಈಗಲೂ ಬಾಲಕ ರಾಮನ ದರ್ಶನ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಪ್ರಿಯಾಂಕ್ ಖರ್ಗೆ ರಾಜೀನಾಮೆ ಪಡೆಯಲು ಸಿಎಂಗೆ ಧೈರ್ಯ ಇಲ್ಲ: ಛಲವಾದಿ ನಾರಾಯಣಸ್ವಾಮಿ
Advertisement
Advertisement
ಚಳಿಗಾಲ ಮತ್ತು ರಜಾ ಸೀಸನ್ ಆಗಿರುವುದರಿಂದ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದಾರೆ ಎಂದು ರಾಮ ಟೆಂಪಲ್ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಹೇಳಿದ್ದಾರೆ. ಇದನ್ನೂ ಓದಿ: ಮೊದಲ ಕ್ಯಾಬಿನೆಟ್ ರೈತರಿಗೆ ಅರ್ಪಿಸಿದ ಮೋದಿ – ಡಿಎಪಿ ಗೊಬ್ಬರಕ್ಕೆ ಸಬ್ಸಿಡಿ
ಕಳೆದ ವರ್ಷ ಜನವರಿ 22ರಂದು ರಾಮ ಮಂದಿರದಲ್ಲಿ ಬಾಲಕರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ನೆರವೇರಿಸಲಾಗಿತ್ತು. ಕನ್ನಡಿಗರಾದ ಮೈಸೂರಿನ ಅರುಣ್ ಯೋಗಿರಾಜ್ ಅವರ ಕೆತ್ತನೆಯ ಬಾಲಕ ರಾಮನ ಮೂರ್ತಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿತ್ತು. ಇದನ್ನೂ ಓದಿ: ಶಿವಮೊಗ್ಗ| ಪತಿಯ ಸಾವಿನ ಸುದ್ದಿ ತಿಳಿದು ಪತ್ನಿ ನೇಣಿಗೆ ಶರಣು