ಅಯೋಧ್ಯೆ (ಉತ್ತರ ಪ್ರದೇಶ): ದೇವನಗರಿ ಅಯೋಧ್ಯೆಯಲ್ಲಿ ರಾಮಲಲ್ಲಾ (Ayodhya Ram Lalla) ಪ್ರಾಣಪ್ರತಿಷ್ಠಾಪನೆಗೂ ಮುನ್ನವೇ ಹತ್ತು ಹಲವು ವಿಶೇಷತೆಗಳು ಕಂಡುಬರುತ್ತಿವೆ. ಪ್ರವಾಸೋದ್ಯಮಕ್ಕೂ ಹೆಚ್ಚು ಒತ್ತು ನೀಡಲಾಗುತ್ತಿದೆ. ಹಾಗಾಗಿ ಐಷಾರಾಮಿ 7 ಸ್ಟಾರ್ ಹೋಟೆಲ್ (7 Star Luxury Hotel) ತೆರೆಯಲಾಗುತ್ತಿದ್ದು, ಅದು ಸಂಪೂರ್ಣ ಸಸ್ಯಹಾರಿ ಆಹಾರ ಪದಾರ್ಥವನ್ನು ಮಾತ್ರ ಪೂರೈಸಲಿದೆ. ಇದು ದೇಶದ ಮೊದಲ ಸಸ್ಯಹಾರಿ ಐಷಾರಾಮಿ ಹೋಟೆಲ್ ಎನಿಸಿಕೊಳ್ಳಲಿದೆ.
ಜ.22ರಂದು ರಾಮಮಂದಿರ ಉದ್ಘಾಟನೆಯಾಗುತ್ತಿರುವ ಹಿನ್ನೆಲೆಯಲ್ಲಿ ವೈವಿದ್ಯಮಯ ಚಟುವಟಿಕೆಗಳು ತಲೆ ಎತ್ತುತ್ತಿವೆ. ಮುಂಬೈ ಮೂಲದ ರಿಯಲ್ ಎಸ್ಟೇಟ್ ಸಂಸ್ಥೆಯು ಅಯೋಧ್ಯೆಯಲ್ಲಿ ಪಂಚತಾರಾ ಹೋಟೆಲ್ ಅನ್ನೂ ಸ್ಥಾಪಿಸಲಿದೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: ರಾಮಲಲ್ಲಾ ಪ್ರಾಣಪ್ರತಿಷ್ಠೆ ದಿನ ಶಾಸಕ ಅಭಯ ಪಾಟೀಲ್ ಕಡೆಯಿಂದ 5 ಲಕ್ಷ ಲಾಡು ವಿತರಣೆ
Advertisement
Advertisement
ಅಯೋಧ್ಯೆ ಉದ್ಘಾಟನೆಯು ಹಲವು ಪ್ರವಾಸೋದ್ಯಮ ಚಟುವಟಿಕೆಗಳಿಗೆ ಉತ್ತೇಜನ ನೀಡಿದೆ. ಅದಕ್ಕೆ ಪೂರಕವಾಗಿ ಪ್ರವಾಸೋದ್ಯಮ ಕೇಂದ್ರಗಳನ್ನೂ ರೂಪಿಸಲಾಗುತ್ತಿದೆ. ಈಗಾಗಲೇ ನವೀಕರಿಸಿದ ರೈಲು ನಿಲ್ದಾಣ ಕಾರ್ಯಪ್ರವೃತ್ತವಾಗಿದ್ದು, ಇದೇ ಶುಕ್ರವಾರದಿಂದ ವಿಮಾನ ನಿಲ್ದಾಣ ಸೇವೆಯೂ ಆರಂಭವಾಗಲಿದೆ. ಇದರೊಂದಿಗೆ ಅಯೋಧ್ಯೆ ನಗರವನ್ನು ಸ್ಮಾರ್ಟ್ ಸಿಟಿ (Smart City) ಮಾಡುವ ಯೋಜನೆಯನ್ನೂ ಹಾಕಿಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ರಾಮಮಂದಿರ ನಿರ್ಮಾಣವನ್ನು 74% ಮುಸ್ಲಿಮರು ಸಂಭ್ರಮಿಸ್ತಾರೆ: ಮುಸ್ಲಿಂ ರಾಷ್ಟ್ರೀಯ ಮಂಚ್
Advertisement
Advertisement
ಅಯೋಧ್ಯೆಯಲ್ಲಿ ಮನೆ ಕಟ್ಟಲು ಮುಂದಾದ ಅಮಿತಾಭ್:
ಬಾಲಿವುಡ್ (Bollywood) ಖ್ಯಾತ ನಟ ಅಮಿತಾಭ್ ಬಚ್ಚನ್ (Amitabh Bachchan) ಅಯೋಧ್ಯೆಯಲ್ಲಿ (Ayodhya) ಮನೆ ಹೊಂದಲು ನಿರ್ಧರಿಸಿದ್ದು, ನಿವೇಶನ ಖರೀದಿ ಮಾಡಿದ್ದಾರೆ. ಮುಂಬೈ ಮೂಲದ ಡೆವಲಪರ್ ಕಂಪೆನಿಯಿಂದ ಈ ನಿವೇಶನ ಖರೀದಿ ಮಾಡಿದ್ದು, ನಿವೇಶನದ ಮೌಲ್ಯ 14.5 ಕೋಟಿ ರೂಪಾಯಿ ಎಂದು ಹೇಳಲಾಗುತ್ತಿದೆ.
ಮೊನ್ನೆಯಷ್ಟೇ ಅಯೋಧ್ಯೆಯಲ್ಲಿ ನಡೆಯುತ್ತಿರುವ ರಾಮಮಂದಿರ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆ ಪಡೆದ್ದ ಅಮಿತಾಭ್, ಇದೀಗ ರಾಮನೂರಿನಲ್ಲೇ ಮನೆ ಮಾಡಲು ನಿರ್ಧಾರ ಮಾಡಿದ್ದು, ಸಹಜವಾಗಿಯೇ ಅಭಿಮಾನಿಗಳಿಗೆ ಸಂಭ್ರಮ ತಂದಿದೆ. ರಾಮ ನಿಮ್ಮನ್ನು ಕಾಪಾಡಲಿ ಎಂದು ಶುಭ ಕೋರಿದ್ದಾರೆ. ಇದನ್ನೂ ಓದಿ: ರಾಮಮಂದಿರ ಪ್ರಾಣಪ್ರತಿಷ್ಠೆಗೆ 55 ರಾಷ್ಟ್ರಗಳ 100ಕ್ಕೂ ಹೆಚ್ಚು ಗಣ್ಯರಿಗೆ ಆಹ್ವಾನ – ಯಾವ್ಯಾವ ದೇಶಕ್ಕೆ ಆಮಂತ್ರಣ?