ನವದೆಹಲಿ: ಅಯೋಧ್ಯೆ ಪ್ರಕರಣದ ಸಂಬಂಧ ಸುಪ್ರೀಂ ಕೋರ್ಟ್ ತೀರ್ಪು ಪ್ರಶ್ನಿಸಿ ಜಮಿಯತ್- ಉಲಮಾ-ಎ ಹಿಂದ್ 217 ಪುಟಗಳ ಮೇಲ್ಮನವಿ ಸಲ್ಲಿಸಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಜಮಿಯತ್-ಉಲಮಾ-ಎ ಹಿಂದ್ ಪರ ವಕೀಲರೊಬ್ಬರು, ಅಯೋಧ್ಯೆ ಪ್ರಕರಣದ ಬಗ್ಗೆ ಸೂಕ್ಷ್ಮವಾಗಿ ಯೋಚನೆ ಮಾಡಿದ್ದೇವೆ ಹಾಗೂ ಅರ್ಥ ಮಾಡಿಕೊಂಡಿದ್ದೇವೆ. ದೇಶದಲ್ಲಿ ಶಾಂತಿ ಹಾಗೂ ಸುವ್ಯವಸ್ಥೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಂಡಿದ್ದೇವೆ. ಸುಪ್ರೀಂಕೋರ್ಟ್ ನೀಡಿದ ತೀರ್ಪಿನಲ್ಲಿ ಮುಸ್ಲಿಂ ಸಮುದಾಯಕ್ಕೆ ನ್ಯಾಯ ಸಿಕ್ಕಿಲ್ಲ. ಹೀಗಾಗಿ ಮೇಲ್ಮನವಿ ಸಲ್ಲಿಸಿದ್ದೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ರಾಮನಿಗೆ `ಪುರಾತತ್ವ’ ಆಧಾರ – 5 ಶತಮಾನಗಳ ವಿವಾದಕ್ಕೆ ಷರಾ ಬರೆದ ಸುಪ್ರೀಂ
Advertisement
Zafaryab Jilani, All India Muslim Personal Law Board (AIMPLB): We are not going to file the review petition (in the Ayodhya case) before Supreme Court today. We have prepared the review petition and we can do it any day before 9th December. pic.twitter.com/wrujXqrQUc
— ANI (@ANI) December 2, 2019
Advertisement
ಸುಪ್ರೀಂಕೋರ್ಟ್ ಬಾಬ್ರಿ ಮಸೀದಿಯ ನಾಶಕ್ಕೆ ಅವಕಾಶ ನೀಡಿದೆ. ಮುಸ್ಲಿಮರಿಗೆ 5 ಎಕರೆ ಜಾಗವನ್ನು ನೀಡುವ ನಿಟ್ಟಿನಲ್ಲಿ ಸಂವಿಧಾನದ 142 ವಿಧಿಯನ್ನು ತಪ್ಪಾಗಿ ಬಳಸಲಾಗಿದೆ. ಹೀಗೆ ಅನೇಕ ವಿಚಾರವಾಗಿ ಒಟ್ಟು 217 ಪುಟಗಳ ಮೇಲ್ಮನವಿ ಸಲ್ಲಿಸಿದ್ದೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ:ಅಶೋಕ್ ಸಿಂಘಾಲ್‍ಗೆ ‘ಭಾರತ ರತ್ನ’ ನೀಡಿ: ಸುಬ್ರಮಣಿಯನ್ ಸ್ವಾಮಿ
Advertisement
ಇದೇ ವಿಚಾರವಾಗಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಸುನ್ನಿ ವಕ್ಫ್ ಬೋರ್ಡ್ ವಕೀಲರಾದ ಜಫ್ರಯಾಬ್ ಗಿಲಾನಿ, ಸುಪ್ರೀಂಕೋರ್ಟ್ ಮುಂದೆ ಇಂದೇ ಮೇಲ್ಮನವಿ ಸಲ್ಲಿಸುವುದಿಲ್ಲ. ಆದರೆ ಮೇಲ್ಮನವಿ ಸಲ್ಲಿಸಲು ಸಿದ್ಧತೆ ನಡೆಸಿದ್ದು, ಡಿಸೆಂಬರ್ 9ರೊಳಗಾಗಿ ಅರ್ಜಿ ಸಲ್ಲಿಸುತ್ತೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ:ಶಿಯಾ ಮತ್ತು ನಿರ್ಮೋಹಿ ಅಖಾಡ ಸಲ್ಲಿಸಿದ್ದ ಅರ್ಜಿ ವಜಾ – ಸುಪ್ರೀಂ ಆದೇಶದಲ್ಲಿ ಏನಿದೆ?