ರಿಯಲ್ ಸ್ಟಾರ್ ಉಪೇಂದ್ರ (Upendra) ಮತ್ತು ಪ್ರಿಯಾಂಕ (Priyanka Upendra) ದಂಪತಿಯ ಪುತ್ರ ಸ್ಯಾಂಡಲ್‌ವುಡ್‌ಗೆ (Sandalwood) ಎಂಟ್ರಿ ಕೊಡಲು ಸಜ್ಜಾಗಿದ್ದಾರೆ. ಆಯುಷ್ ಉಪೇಂದ್ರಗೆ ‘ಮೊದಲಾ ಸಲ’ ಚಿತ್ರದ ನಿರ್ದೇಶಕ ಪುರುಷೋತ್ತಮ್ ಆ್ಯಕ್ಷನ್ ಕಟ್ ಹೇಳಲಿದ್ದಾರೆ. ಇದನ್ನೂ ಓದಿ:ಪ್ರಭಾಸ್ ಸಿನಿಮಾದಲ್ಲಿ ನಟಿಸಲು ದೀಪಿಕಾ ಪಡುಕೋಣೆಗೆ 20 ಕೋಟಿ ಸಂಭಾವನೆ!
ಹಲವು ತಿಂಗಳುಗಳಿಂದ ಉಪೇಂದ್ರ ಪುತ್ರ ಆಯುಷ್ (Ayush) ಚಿತ್ರರಂಗಕ್ಕೆ ಬರಲಿದ್ದಾರೆ ಎಂಬ ಸುದ್ದಿ ವೈರಲ್ ಆಗಿತ್ತು. ಆದರೆ ಯಾವಾಗ ಎಂಬುದು ಕ್ಲ್ಯಾರಿಟಿ ಸಿಕ್ಕಿರಲಿಲ್ಲ. ಈ ಸುದ್ದಿ ಅಧಿಕೃತವಾಗಿ ಹೊರಬಿದ್ದಿದೆ. ಆಯುಷ್ ಸಿನಿಮಾವೊಂದಕ್ಕೆ ಬಣ್ಣ ಹಚ್ಚಲು ತಯಾರಿ ಮಾಡಿಕೊಳ್ತಿದ್ದಾರೆ. ಮಂತ್ರಾಲಯದಲ್ಲಿ ಸಿನಿಮಾದ ಸ್ಕ್ರಿಪ್ಟ್ ಪೂಜೆ ನೆರವೇರಿದೆ. ಇದನ್ನೂ ಓದಿ:ಕನ್ನಡತಿ ದಿಶಾ ಮದನ್‌ಗೆ ಕಾನ್ ಫಿಲ್ಮ್ ಫೆಸ್ಟಿವಲ್ ಆಹ್ವಾನ
ಯಶ್ ನಟಿಸಿದ ‘ಮೊದಲಾ ಸಲ’ ಚಿತ್ರ ನಿರ್ದೇಶನ ಮಾಡಿದ್ದ ಪುರುಷೋತ್ತಮ್ ಅವರು ಆಯುಷ್‌ಗೆ ನಿರ್ದೇಶನ ಮಾಡಲಿದ್ದಾರೆ. ಹಿರಿಯ ಛಾಯಾಗ್ರಾಹಕ ಹೆಚ್. ವೇಣು ಈ ಸಿನಿಮಾಗೆ ಸಿನಿಮಾಟೋಗ್ರಫಿ ಜವಾಬ್ದಾರಿ ಹೊತ್ತಿದ್ದಾರೆ. ಈ ಸಿನಿಮಾಗೆ ಸಹಾಯಕ ನಿರ್ದೇಶಕಿಯಾಗಿ ಐಶ್ವರ್ಯಾ ಉಪೇಂದ್ರ ಕಾರ್ಯನಿರ್ವಹಿಸಲಿದ್ದಾರೆ. ಒಟ್ನಲ್ಲಿ ಪೋಷಕರಂತೆಯೇ ಆಯುಷ್ ಮತ್ತು ಐಶ್ವರ್ಯಾ ಚಿತ್ರರಂಗದಲ್ಲಿ ಬೆಳೆಯಲಿ ಎಂಬುದು ಅಭಿಮಾನಿಗಳ ಹಾರೈಕೆ.