ಬೆಂಗಳೂರು: ಜಗತ್ತಿನ ಅತಿ ದೊಡ್ಡ ಆರೋಗ್ಯ ರಕ್ಷಾ ಯೋಜನೆ, ದೇಶದ 50 ಕೋಟಿ ಜನರಿಗೆ ತಲುಪಲಿರುವ `ಆಯುಷ್ಮಾನ್ ಭಾರತ್’ ಯೋಜನೆ ಕರ್ನಾಟಕದ ಜನತೆಯ ಕೈತಪ್ಪಿದ್ದು, ಈಗ ಅದನ್ನು ಅಳವಡಿಸಿಕೊಳ್ಳಲು ರಾಜ್ಯಸರ್ಕಾರ ಮುಂದಾಗಿದೆ.
ಈಗಾಗಲೇ ರಾಜ್ಯದಲ್ಲಿ ‘ಆರೋಗ್ಯ ಕರ್ನಾಟಕ’ ಯೋಜನೆ ಜಾರಿಯಲ್ಲಿದ್ದು, ಆಯುಷ್ಮಾನ್ ಭಾರತ್ ಯೋಜನೆಯೂ ಹೆಚ್ಚು ಕಡಿಮೆ ಇದೇ ರೀತಿ ಇದೆ. ಹೀಗಾಗಿ ಕೇಂದ್ರ ಸರ್ಕಾರದ ಯೋಜನೆಯ ಸಾಧಕ ಬಾಧಕಗಳನ್ನ ಅಧ್ಯಯನ ಮಾಡಲು ಸಮಯ ತೆಗೆದುಕೊಳುತ್ತೇವೆ ಎಂದು ರಾಜ್ಯ ಸರ್ಕಾರ ಪಟ್ಟು ಹಿಡಿದಿತ್ತು.
Advertisement
ಈಗ ಕೇಂದ್ರ ಸರ್ಕಾರದ ಜತೆ ಒಪ್ಪಂದ ಮಾಡಿಕೊಳ್ಳಲು ರಾಜ್ಯ ಸರ್ಕಾರ ತನ್ನ ಪ್ರಕ್ರಿಯೆಯನ್ನು ಆರಂಭಿಸಿದೆ. ಎರಡು ಯೋಜನೆಗಳನ್ನು ವಿಲೀನಗೊಳಿಸಿದ ಬಳಿಕ ಶೀಘ್ರದಲ್ಲೇ ಒಪ್ಪಂದಕ್ಕೆ ಸಹಿ ಹಾಕುವ ಸಾಧ್ಯತೆ ಇದೆ. ಇನ್ನು ಈ ಬಗ್ಗೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
Advertisement
Advertisement
ಆಯುಷ್ಮಾನ್ ಭಾರತ್ ಅಂದ್ರೆ ಏನು?
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2018ರ ಬಜೆಟ್‍ನಲ್ಲಿ ಆಯುಷ್ಮಾನ್ ಭಾರತ್ ಯೋಜನೆ ಪ್ರಾಸ್ತಾಪಿಸಿತ್ತು. ಈ ಯೋಜನೆಯ ಮುಖ್ಯ ಉದ್ದೇಶ ದೇಶದ ಅರ್ಧದಷ್ಟು (50 ಕೋಟಿ) ಜನರಿಗೆ ಅನುಕೂಲವಾಗುವಂಥ ‘ಆರೋಗ್ಯ ವಿಮೆ’ ಹಾಗೂ ‘ರಾಷ್ಟ್ರೀಯ ಆರೋಗ್ಯ ರಕ್ಷಣಾ ಯೋಜನೆ’ ಒಳಗೊಂಡ ‘ಆಯುಷ್ಮಾನ್ ಭಾರತ್ ಯೋಜನೆ’ ರೂಪಿಸಿದ್ದರು. ಅಮೆರಿಕದ ಒಬಾಮಾ ಕೇರ್ ಮಾದರಿಯಲ್ಲಿಯೇ ಈ ಯೋಜನೆಯನ್ನು ದೇಶದಲ್ಲಿ ಜಾರಿಗೆ ತರುವ ಉದ್ದೇಶವನ್ನು ಕೇಂದ್ರ ಸರ್ಕಾರ ಹೊಂದಿತ್ತು. ಇದು ಜಗತ್ತಿನಲ್ಲಿ ಅತ್ಯಂತ ದೊಡ್ಡ ಆರೋಗ್ಯ ಯೋಜನೆಯಾಗಿದೆ. ಇದನ್ನೂ ಓದಿ: ಏನಿದು ಆಯುಷ್ಮಾನ್ ಭಾರತ್ ಯೋಜನೆ? ಯಾರಿಗೆ ವಿಮೆ ಸಿಗುತ್ತೆ? ಯಾವೆಲ್ಲಾ ರೋಗಗಳಿಗೆ ಚಿಕಿತ್ಸೆ?
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv