DistrictsKarnatakaLatestMain PostTumakuru

ದೇಶದ ಅಭಿವೃದ್ಧಿಗಾಗಿ ಶ್ರಮಿಸೋಣ: ಥಾವರ್ ಚಂದ್ ಗೆಹ್ಲೋಟ್

ತುಮಕೂರು:ಸ್ವಾತಂತ್ರ್ಯ ಅಮೃತ ಮಹೋತ್ಸವದ ಈ ಸಂದರ್ಭದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಮತ್ತು ಸಮರ್ಪಣೆಯನ್ನು ಸ್ಮರಿಸುವುದರ ಜೊತೆಗೆ ದೇಶದ ಅಭಿವೃದ್ಧಿಗಾಗಿ ನಾವೆಲ್ಲರೂ ಶ್ರಮಿಸಬೇಕು ಎಂದು ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಹೇಳಿದರು.

“ರಾಷ್ಟ್ರೀಯ ಮಾನವ ಪರಿಸರ ಸಂರಕ್ಷಣಾ ಪಡೆ” ತುಮಕೂರು ವತಿಯಿಂದ ಭಾರತೀಯ ಸ್ವಾತಂತ್ರ್ಯೋತ್ಸವದ 75ನೇ ವರ್ಷದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಅಮೃತ ಭಾರತ ರಾಷ್ಟ್ರೀಯ ಜಾಗೃತಿ ಅಭಿಯಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಆಜಾದಿಯ ಅಮೃತ್ ಮಹೋತ್ಸವವು 75 ವರ್ಷಗಳ ಪ್ರಗತಿಪರ ಭಾರತ ಮತ್ತು ಜನರು, ಸಂಸ್ಕೃತಿ ಮತ್ತು ಸಾಧನೆಗಳ ವೈಭವದ ಇತಿಹಾಸವನ್ನು ಸ್ಮರಿಸಲು ಮತ್ತು ಆಚರಿಸಲು ಭಾರತ ಸರ್ಕಾರದ ಪ್ರಮುಖ ಕಾರ್ಯಕ್ರಮವಾಗಿದೆ. ಭಾರತೀಯರಾದ ನಮಗೆಲ್ಲ ಅಷ್ಟು ಸುಲಭವಾಗಿ ಸ್ವಾತಂತ್ರ್ಯ ಸಿಕ್ಕಿಲ್ಲ. ಈ ಸ್ವಾತಂತ್ರ್ಯಕ್ಕಾಗಿ ಅನೇಕ ದೇಶಭಕ್ತರು ಬಲಿದಾನ ಮಾಡಿದ್ದಾರೆ ಎಂದು ಹೇಳುವ ಮೂಲಕ ಸ್ವಾತಂತ್ರಕ್ಕಾಗಿ ಹೋರಾಡಿದ ದೇಶ ಭಕ್ತರನ್ನು ಸ್ಮರಿಸಿದರು.

ಅಮೃತ್ ಸ್ವಾತಂತ್ರ್ಯೋತ್ಸವವು ಭಾರತದ ಸಾಮಾಜಿಕ-ಸಾಂಸ್ಕೃತಿಕ ಮತ್ತು ಆರ್ಥಿಕ ಪ್ರಗತಿಯ ವಿಶಿಷ್ಟ ಲಕ್ಷಣವಾಗಿದೆ. ಈ ಹಬ್ಬವು ಭಾರತದ ಜನತೆಗೆ ಸಮರ್ಪಿತವಾಗಿದೆ. ಪ್ರಧಾನಿ ಮೋದಿಯವರ ಸ್ವಾವಲಂಬಿ ಭಾರತದ ಕನಸನ್ನು ನನಸಾಗಿಸುವ ಶಕ್ತಿ ಮತ್ತು ಸಾಮರ್ಥ್ಯವನ್ನು ಹೊಂದಿದ್ದಾರೆ. ಭಾರತವನ್ನು ಅದರ ಅಭಿವೃದ್ಧಿ ಪಯಣದಲ್ಲಿ ಮುನ್ನಡೆಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಹೇಳಿದರು.

ರಾಷ್ಟ್ರೀಯ ಮಾನವ ಪರಿಸರ ಸಂರಕ್ಷಣಾ ಪಡೆ ಪರಿಸರ ಸಂರಕ್ಷಣೆ, ಗೋವುಗಳ ರಕ್ಷಣೆ, ನೈತಿಕ ಶಿಕ್ಷಣ, ಸಾವಯವ ಕೃಷಿ ಉತ್ತೇಜನ, ರಾಷ್ಟ್ರೀಯತೆ ಮತ್ತು ಆರೋಗ್ಯ ಸೌಲಭ್ಯಗಳಿಗಾಗಿ ಶ್ರದ್ಧೆಯಿಂದ ಕೆಲಸ ಮಾಡುತ್ತಿರುವುದಕ್ಕೆ ಗೌರವಾನ್ವಿತ ರಾಜ್ಯಪಾಲರು ಅಭಿನಂದಿಸಿದರು.

ನಾವೆಲ್ಲರೂ ಪರಿಸರ ಮತ್ತು ಜಲ ಸಂರಕ್ಷಣೆಯ ನಿಟ್ಟಿನಲ್ಲಿ ಕೆಲಸ ಮಾಡಬೇಕಿದೆ. ಇದಕ್ಕಾಗಿ ನಾವೆಲ್ಲರೂ ಒಗ್ಗೂಡಬೇಕಿದೆ. ನಮ್ಮ ರಾಷ್ಟ್ರಧ್ವಜ ನಮ್ಮ ಗೌರವ ಮತ್ತು ಹೆಮ್ಮೆ. ದೇಶಭಕ್ತಿಯ ಮನೋಭಾವವನ್ನು ಬೆಳೆಸಲು ಮತ್ತು ಭಾರತದ ರಾಷ್ಟ್ರಧ್ವಜದ ಬಗ್ಗೆ ಜಾಗೃತಿ ಮೂಡಿಸಲು ಹರ್ ಘರ್ ತಿರಂಗಾ ಅಭಿಯಾನವನ್ನು ನಡೆಸಲಾಗುತ್ತಿದೆ. ಈ ಅಭಿಯಾನದಲ್ಲಿ ಪ್ರತಿಯೊಬ್ಬ ನಾಗರಿಕನೂ ಭಾಗವಹಿಸಬೇಕು ಎಂದು ಮನವಿ ಮಾಡುತ್ತೇನೆಂದರು. ಇದನ್ನೂ ಓದಿ: ಸ್ವಾತಂತ್ರ್ಯ ದಿನಾಚರಣೆಗೆ ಕಾಂತಾರ ಸಿನಿಮಾದಿಂದ ಮೊದಲ ಹಾಡು ಗಿಫ್ಟ್

ಕಾರ್ಯಕ್ರಮದಲ್ಲಿ ಎನ್ ಹೆಚ್ ಇಪಿಎಫ್ ನ ಸ್ಮರಣ ಸಂಚಿಕೆಯನ್ನು ಬಿಡುಗಡೆಗೊಳಿಸಿ, ವೆಬ್ ಸೈಟ್ ಅನ್ನು ಉದ್ಘಾಟಿಸಿದರು. ನಂತರ ಅಮೃತ ಮಹೋತ್ಸವದ ಅಂಗವಾಗಿ ಸಂಸ್ಥೆ ವತಿಯಿಂದ ಆಯೋಜಿಸಲಾಗಿದ್ದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಿದರು.

ಕರ್ನಾಟಕ ಸರ್ಕಾರದ ಗೌರವಾನ್ವಿತ ಉಪಲೋಕಾಯುಕ್ತ ನ್ಯಾ. ಕೆ. ಎನ್. ಫಣೀಂದ್ರ, ಸೇನಾ ಪದಕ ವಿಜೇತ, ನಿವೃತ್ತ ಸೇನಾಧಿಕಾರಿ ಕ್ಯಾಪ್ಟನ್ ಶ್ರೀ ನವೀನ್ ನಾಗಪ್ಪ ,ರಾಷ್ಟ್ರೀಯ ಮಾನವ ಪರಿಸರ ಸಂರಕ್ಷಣಾ ಪಡೆಯ ಅಧ್ಯಕ್ಷ ಶ್ರೀ ಬಸವರಾಜು, ರಾಷ್ಟ್ರೀಯ ಮಾನವ ಪರಿಸರ ಸಂರಕ್ಷಣಾ ಪಡೆಯ ಗೌರವಾಧ್ಯಕ್ಷ ಎಸ್.ಪಿ. ಚಿದಾನಂದ್ ಸೇರಿದಂತೆ ಮುಂತಾದ ಗಣ್ಯರು ಉಪಸ್ಥಿತರಿದ್ದರು.

Live Tv

Leave a Reply

Your email address will not be published.

Back to top button