KarnatakaLatestMain Post

ರೆಸಿಡೆನ್ಷಿಯಲ್‌ ಶಾಲೆಗಳಿಗೆ ನಾಳೆ ಪ್ರತ್ಯೇಕ ಮಾರ್ಗಸೂಚಿ: ಸಚಿವ ಬಿ.ಸಿ.ನಾಗೇಶ್‌

ಬೆಂಗಳೂರು: ರಾಜ್ಯದ ಕೆಲವು ರೆಸಿಡೆನ್ಷಿಯಲ್‌ (ವಸತಿ) ಶಾಲೆಗಳ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಯಲ್ಲಿ ಕೊರೊನಾ ಪಾಸಿಟಿವ್‌ ಬಂದಿದೆ. ಮುಂಜಾಗ್ರತೆ ಕ್ರಮವಾಗಿ ರೆಸಿಡೆನ್ಷಿಯಲ್‌ ಶಾಲೆಗಳಿಗೆ ನಾಳೆ ಪ್ರತ್ಯೇಕ ಮಾರ್ಗಸೂಚಿ ಹೊರಡಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ತಿಳಿಸಿದ್ದಾರೆ.

ʼಪಬ್ಲಿಕ್‌ ಟಿವಿʼ ಜೊತೆ ಈ ಕುರಿತು ಮಾತನಾಡಿದ ಅವರು, ಕೆಲವು ವಸತಿ ಶಾಲೆಗಳಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಸಂಬಂಧಪಟ್ಟ ಶಾಲೆಗಳ ಆಡಳಿತ ಮಂಡಳಿಗೆ ಸೋಂಕು ನಿಯಂತ್ರಣಕ್ಕೆ ಸೂಕ್ತ ಕ್ರಮಕೈಗೊಳ್ಳುವಂತೆ ಸೂಚನೆ ನೀಡಿದ್ದೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ನಾಳೆಯ ಸಂಪುಟ ಸಭೆಯಲ್ಲಿ ಬಿಗಿ ನಿಯಮಗಳ ಬಗ್ಗೆ ಚರ್ಚೆ: ಬೊಮ್ಮಾಯಿ

ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಶಾಲಾ-ಕಾಲೇಜು ಬಂದ್‌ ಮಾಡುವುದಿಲ್ಲ. ಆನ್‌ಲೈನ್‌ ತರಗತಿಗಳಿಂದ ಮಕ್ಕಳ ಶೈಕ್ಷಣಿಕ ಪ್ರಗತಿ ಸುಧಾರಿಸುವುದಿಲ್ಲ. ಆದ್ದರಿಂದ ಶಾಲಾ-ಕಾಲೇಜು ಬಂದ್‌ ಮಾಡುವ ಪ್ರಶ್ನೆಯೇ ಇಲ್ಲ. ಆದರೆ ಶಾಲೆಗಳಲ್ಲಿ ಕೋವಿಡ್‌ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಸೂಚನೆ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಶಾಲಾ-ಕಾಲೇಜು ಬಂದ್‌ ಮಾಡುವುದು ಬೇಡ ಎಂದು ತಜ್ಞರ ಸಮಿತಿ ಹೇಳಿದೆ. ಕೋವಿಡ್‌ ಪರೀಕ್ಷೆಯನ್ನು ಹೆಚ್ಚಿಸಿದ್ದರೂ, ಪಾಸಿಟಿವ್‌ ಪ್ರಕರಣ ಹೆಚ್ಚಾಗಿಲ್ಲ. ಹೀಗಾಗಿ ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಆದರೆ ನಿಯಮ ಪಾಲನೆಗೆ ಕ್ರಮಕೈಗೊಳ್ಳುವಂತೆ ಶಾಲೆಗಳಿಗೆ ಸೂಚಿಸುವಂತೆ ತಜ್ಞರ ಸಮಿತಿ ಸಲಹೆ ನೀಡಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಜನರು ಉತ್ಸಾಹದಿಂದ ಲಸಿಕೆ ಹಾಕಿಸಿಕೊಳ್ತಿದ್ದಾರೆ: ಕೆ. ಸುಧಾಕರ್

ಎಷ್ಟೋ ಕಡೆ ನೂರಾರು ಮಕ್ಕಳು ಮಾಸ್ಕ್‌ ಹಾಕಿ ಶಾಲೆಗೆ ಬರುವುದೇ ಇಲ್ಲ. ಇದನ್ನು ನಾನೇ ಗಮನಿಸಿದ್ದೇನೆ. ಪೋಷಕರು ತಮ್ಮ ಮಕ್ಕಳಿಗೆ ತಿಳಿಸಿ ಹೇಳಬೇಕು. ಖಂಡಿತ ಮಕ್ಕಳು ಹೇಳಿದ ಮಾತನ್ನು ಕೇಳುತ್ತಾರೆ. ಡಿ.10ರ ನಂತರ ಶಾಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತೇನೆ ಎಂದಿದ್ದಾರೆ.

Leave a Reply

Your email address will not be published.

Back to top button