ಹಾವೇರಿ: ಸ್ಪೀಕರ್ ತೀರ್ಪಿನಿಂದ ಅನರ್ಹಗೊಂಡ ಬಿ.ಸಿ.ಪಾಟೀಲ್ ಕ್ಷೇತ್ರದ ಕಾರ್ಯಕರ್ತರಿಗೆ ಹಾಗೂ ಅಭಿಮಾನಿಗಳಿಗೆ ಈ ತೀರ್ಪು ನ್ಯಾಯ ಸಮ್ಮತವಾಗಿಲ್ಲ, ತಲೆ ಕೆಡಿಸಿಕೊಳ್ಳಬೇಡಿ ಎಂದು ಪೋಸ್ಟ್ ಮಾಡಿ ತಿಳಿಸಿದ್ದಾರೆ.
ಅತೃಪ್ತ ಶಾಸಕರನ್ನು ಅನರ್ಹಗೊಳಿಸಿರುವ ಸ್ಪೀಕರ್ ಅವರ ತೀರ್ಪಿಗೆ ಯಾರು ತಲೆ ಕೆಡಿಸಿಕೊಳ್ಳುವ ಅವಶ್ಯಕತೆಯಿಲ್ಲ. ಈ ತೀರ್ಪು ನ್ಯಾಯ ಸಮ್ಮತವಾಗಿಲ್ಲ. ಈ ಬಗ್ಗೆ ನಾವು ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿ ನ್ಯಾಯವಾದ ತೀರ್ಪು ಪಡಿಯೋಣ. ಕ್ಷೇತ್ರದಲ್ಲಿ ಮತ್ತೊಮ್ಮೆ ಚುನಾವಣೆ ಎದುರಿಸಲು ಸಿದ್ಧರಿರೋಣ ಎಂದು ಮತದಾರರಿಗೆ ಹಾಗೂ ಅಭಿಮಾನಿಗಳಿಗೆ ಸಾಮಾಜಿಕ ಜಾಲತಾಣದ ಮೂಲಕ ಸಂದೇಶ ರವಾನಿಸಿದ್ದಾರೆ.
Advertisement
Advertisement
ಪೋಸ್ಟ್ ನಲ್ಲಿ ಏನಿದೆ?
ಆತ್ಮೀಯರೇ, ಈ ದಿನದಂದು ಸ್ಪೀಕರ್ ಅವರು ನೀಡಿದ ತೀರ್ಪು ನ್ಯಾಯ ಸಮ್ಮತವಾಗಿರುವುದಿಲ್ಲ. ಈ ತೀರ್ಪಿನ ಬಗ್ಗೆ ಯಾರು ತಲೆ ಕೆಡಿಸಿಕೊಳ್ಳುವ ಅವಶ್ಯಕತೆ ಇಲ್ಲ. ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿ ನ್ಯಾಯದ ಪರವಾಗಿರುವ ತೀರ್ಪನ್ನು ಪಡೆಯೋಣ. ತಾವೆಲ್ಲರೂ ಯಾವುದೇ ಕಾರಣಕ್ಕೂ ಧೃತಿಗೆಡದೆ ಮುಂದಿನ ನಡೆಯ ಬಗ್ಗೆ ದೃಢ ನಿರ್ಧಾರವನ್ನು ಕೈಗೊಳ್ಳೋಣ ಹಾಗೂ ಮತ್ತೊಮ್ಮೆ ಚುನಾವಣೆಯನ್ನು ಎದುರಿಸಲು ಸಿದ್ಧರಿರೋಣ. ತಮ್ಮ ಸೇವಕ, ಬಿ.ಸಿ.ಪಾಟೀಲ್ ಎಂದು ವಾಟ್ಸ್ ಆ್ಯಪ್‍ನಲ್ಲಿ ಸಂದೇಶ ಕಳುಹಿಸಿದ್ದಾರೆ.
Advertisement
Advertisement
ಇಂದು ಸ್ಪೀಕರ್ ರಮೇಶ್ ಕುಮಾರ್ ಅವರು, ಮಸ್ಕಿ ಶಾಸಕ ಪ್ರತಾಪ್‍ಗೌಡ ಪಾಟೀಲ್, ಹಿರೇಕೆರೂರು ಶಾಸಕ ಬಿ.ಸಿ.ಪಾಟೀಲ್, ಯಶವಂತಪುರ ಶಾಸಕ ಎಸ್.ಟಿ.ಸೋಮಶೇಖರ್, ವಿಜಯನಗರದ ಆನಂದ್ ಸಿಂಗ್, ರಾಜರಾಜೇಶ್ವರಿ ನಗರದ ಮುನಿರತ್ನ, ಚಿಕ್ಕಬಳ್ಳಾಪುರದ ಕೆ.ಸುಧಾಕರ್, ಹೊಸಕೋಟೆಯ ಎಂಟಿಬಿ ನಾಗರಾಜ್, ಯಲ್ಲಾಪುರದ ಶಿವರಾಂ ಹೆಬ್ಬಾರ್, ಶಿವಾಜಿನಗರದ ರೋಷನ್ ಬೇಗ್, ಕೆ.ಆರ್.ಪುರಂನ ಬೈರತಿ ಬಸವರಾಜ್, ಮಹಾಲಕ್ಷ್ಮಿ ಲೇಔಟ್ ಶಾಸಕ ಗೋಪಾಲಯ್ಯ, ಕಾಗವಾಡದ ಶ್ರೀಮಂತ್ ಪಾಟೀಲ್, ಹುಣಸೂರಿನ ಹೆಚ್.ವಿಶ್ವನಾಥ್ ಮತ್ತು ಕೆ.ಆರ್.ಪೇಟೆಯ ನಾರಾಯಣಗೌಡ ಎಲ್ಲ ಶಾಸಕರನ್ನು ಅನರ್ಹಗೊಳಿಸಿ ಆದೇಶ ನೀಡಿದ್ದಾರೆ.
ಈ ಹಿಂದೆ ಅನರ್ಹಗೊಂಡ ಮೂವರು ಶಾಸಕರಾದ ರಮೇಶ್ ಜಾರಕಿಹೊಳಿ, ಮಹೇಶ್ ಕುಮುಟಳ್ಳಿ ಹಾಗೂ ಆರ್. ಶಂಕರ್ ಬೈ ಎಲೆಕ್ಷನ್ ಗೆ ನಿಲ್ಲುವಂತಿಲ್ಲ ಎಂದು ಸ್ಪೀಕರ್ ರಮೇಶ್ ಕುಮಾರ್ ಖಡಕ್ಕಾಗಿ ತಿಳಿಸಿದ್ದಾರೆ.