ಹಾವೇರಿ: ಲೋಕಸಭಾ ಚುನಾವಣೆ ಬಳಿಕ ನಾನು ಬೇಡ ಅಂದ್ರು ಸಚಿವ ಸ್ಥಾನ ಸಿಗುತ್ತೆ ಎಂದು ಹಿರೇಕೆರೂರು ಶಾಸಕ ಬಿ.ಸಿ.ಪಾಟೀಲ್ ಮಂತ್ರಿಸ್ಥಾನದ ಆಕಾಂಕ್ಷೆಯನ್ನು ಹೊರಹಾಕಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಮಂತ್ರಿ ಸ್ಥಾನ ನೀಡುವುದಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಭರವಸೆ ನೀಡಿದ್ದಾರೆ. ಕಲ್ಲು ಹೊಡೆದರೆ ಹಣ್ಣು ಬೀಳುತ್ತೆ. ನಮ್ಮವರೆಲ್ಲ ಬಾಯಿಗೆ ಬೀಗ ಹಾಕ್ಕೊಂಡು ಕೂತಿದ್ದರಿಂದ ಸಚಿವ ಸ್ಥಾನ ಸಿಗಲಿಲ್ಲ. ಈಗಿನ ಕಾಲದಲ್ಲಿ ಬಾಯಿಗೆ ಬೀಗ ಹಾಕಿಕೊಂಡಿದ್ದರೆ ಯಾವುದೇ ಸ್ಥಾನಮಾನ ಸಿಗಲ್ಲ. ಜಿಲ್ಲೆಯಲ್ಲಿ ವೀರಶೈವ ಲಿಂಗಾಯತರಲ್ಲಿ ಅನಾಥಪ್ರಜ್ಞೆ ಕಾಡುತ್ತಿದೆ ಎಂದು ಕಿಡಿಕಾರಿದರು.
Advertisement
Advertisement
ಲೋಕಸಭಾ ಚುನಾವಣಾ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಶಾಸಕರು, ಹಾವೇರಿ-ಗದಗ ಲೋಕಸಭಾ ಕ್ಷೇತ್ರದಲ್ಲಿ ವೀರಶೈವ ಲಿಂಗಾಯತ ಧರ್ಮದ 6.5 ಲಕ್ಷಕ್ಕೂ ಹೆಚ್ಚು ಮತದಾರರಿದ್ದಾರೆ. ಹೀಗಾಗಿ ವೀರಶೈವ ಲಿಂಗಾಯತರಿಗೆ ಕಾಂಗ್ರೆಸ್ ಟಿಕೆಟ್ ಕೊಟ್ಟರೆ ಗೆಲವು ಖಚಿತ. ಈ ನಿಟ್ಟಿನಲ್ಲಿ ರಾಜ್ಯ ನಾಯಕರು ಹಾಗೂ ಹೈಕಮಾಂಡ್‍ಗೆ ಒತ್ತಾಯ ಮಾಡುತ್ತೇವೆ ಎಂದು ಹೇಳಿದರು.
Advertisement
ನಾನು ಆಕಾಂಕ್ಷಿಯಲ್ಲ. ಆದರೆ ಹಾವೇರಿಯಿಂದ ಬೇರೆಯವರಿಗೆ ಟಿಕೆಟ್ ಕೊಡಬೇಡಿ ಎಂದು ಹೇಳುವುದಿಲ್ಲ. ಏಕೆಂದರೆ ವೀರಶೈವ ಲಿಂಗಾಯತರಿಗೆ ಟಿಕೆಟ್ ನೀಡಿದರೆ ಪಕ್ಷಕ್ಕೆ ಅನುಕೂಲ. ಯಾರಿಗೆ ಟಿಕೆಟ್ ಸಿಕ್ಕರೂ ಪಕ್ಷದ ಪರ ಕೆಲಸ ಮಾಡುತ್ತವೆ. ಫೆಬ್ರವರಿ 28 ರಂದು ವೀರಶೈವ ಲಿಂಗಾಯತ ಧರ್ಮದ ಸಭೆ ಮತ್ತೆ ಕರೆಯಲಾಗಿದೆ. ಆಗ ಸೂಕ್ತ ನಿರ್ಧಾರಗಳನ್ನು ತೆಗೆದುಕೊಳ್ಳುತ್ತವೆ ಎಂದರು.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv