ರಾಯಚೂರು: ಗುಲ್ಬರ್ಗಾ ವಿಶ್ವವಿದ್ಯಾಲಯ ಯಡವಟ್ಟುಗಳ ಮೇಲೆ ಯಡವಟ್ಟುಗಳನ್ನ ಮಾಡುತ್ತಿದೆ. ವಿವಿಯ ಪದವಿ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆಗಳು ಪದೇ ಪದೇ ಸೊರಿಕೆಯಾಗುತ್ತಿವೆ. ಎರಡು ದಿನಗಳ ಹಿಂದೆಯಷ್ಟೇ ಬಿ.ಕಾಂ 3ನೇ ಸೇಮಿಸ್ಟರ್ ನ ಸಂಖ್ಯಾಶಾಸ್ತ್ರ ಪತ್ರಿಕೆ ಲೀಕ್ ಆಗಿತ್ತು. ಈಗ ಪುನಃ ಬಿ.ಕಾಂ. ಮೂರನೇ ಸೆಮಿಸ್ಟರ್ ಪ್ರಶ್ನೆ ಪತ್ರಿಕೆ ಬಹಿರಂಗವಾಗಿದೆ.
ಇಂದು ಮಧ್ಯಾಹ್ನ 2 ಗಂಟೆಗೆ ನಡೆಯಬೇಕಾಗಿದ್ದ `ಸ್ಮಾಲ್ ಬಿಸಿನೆಸ್ ಮ್ಯಾನೇಜ್‍ಮೆಂಟ್’ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ. ಸೋರಿಕೆಯಾದ ಪ್ರಶ್ನೆ ಪತ್ರಿಕೆ ರಾಯಚೂರು ಸೇರಿದಂತೆ ವಿವಿ ವಿದ್ಯಾರ್ಥಿಗಳ ವಾಟ್ಸಪ್‍ನಲ್ಲಿ ಹರಿದಾಡುತ್ತಿದೆ. ಈ ಹಿಂದೆ ಸ್ಟಾಟಿಸ್ಟಿಕ್ಸ್ ಪ್ರಶ್ನೆಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ಮುಂದೂಡಲಾಗಿತ್ತು.
Advertisement
ಇಂದು ನಡೆಯಬೇಕಾಗಿದ್ದ ಪರೀಕ್ಷೆ ಪ್ರಶ್ನೆಪತ್ರಿಕೆ ಲೀಕ್ ಆಗಿದ್ದರಿಂದ ಸ್ಮಾಲ್ ಬಿಸಿನೆಸ್ ಮ್ಯಾನೇಜ್‍ಮೆಂಟ್ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಗುಲ್ಬರ್ಗಾ ವಿವಿ ಕುಲಪತಿ ಎಸ್.ನಿರಂಜನ್ ಆದೇಶ ಹೊರಡಿಸಿದ್ದಾರೆ.
Advertisement
Advertisement
Advertisement