ರಾಮನಗರ: ರೈಲಿಗೆ (Train) ತಲೆಕೊಟ್ಟು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮನಗರ (Ramanagara) ರೈಲ್ವೆ ನಿಲ್ದಾಣದ ಸಮೀಪ ನಡೆದಿದೆ.
ಬೆಂಗಳೂರಿನ ನಾಗರಬಾವಿ ಮೂಲದ ಬಿ.ಇ ಪದವೀಧರ (B.E Graduate) ಯುವಕ ಮಧು (23) ಆತ್ಮಹತ್ಯೆ ಮಾಡಿಕೊಂಡ ಯುವಕ. ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಮಧು, ಬುಧವಾರ ರಾತ್ರಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಇದನ್ನೂ ಓದಿ: ಉಕ್ಕು ಕ್ಷೇತ್ರದಲ್ಲಿ ಹಸಿರು ಕ್ರಾಂತಿ – ಪ್ರಧಾನಿ ಮೋದಿ ಕನಸು ಅನಾವರಣಗೊಳಿಸಿದ ಹೆಚ್‌ಡಿಕೆ
ರೈಲು ಹರಿದ ರಭಸಕ್ಕೆ ಯುವಕನ ದೇಹ ಛಿದ್ರ ಛಿದ್ರವಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮೃತದೇಹ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಬಳಿಕ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಒಂದು ದೇಶ, ಒಂದು ಚುನಾವಣೆ ಮಸೂದೆಗೆ ಮೋದಿ ಸಂಪುಟ ಅನುಮೋದನೆ