ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ಅವರನ್ನ ನೇಮಕ ಮಾಡಿ ಎಐಸಿಸಿ ಅಧಿಕೃತ ಆದೇಶ ಹೊರಡಿಸಿದೆ.

ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅಧಿಕಾರ ಸ್ವೀಕರಿದ ಬೆನ್ನಲ್ಲೇ ಕೆಪಿಸಿಸಿ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಹೀಗಾಗಿ ತೆರವಾದ ಸ್ಥಾನಕ್ಕೆ ಬಿ.ಕೆ ಹರಿಪ್ರಸಾದ್ ಅವರನ್ನ ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧಿಕೃತ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಮೇಲ್ಮನೆ ಚುನಾವಣೆ; ಬಿ.ಕೆ.ಹರಿಪ್ರಸಾದ್ ಸೇರಿ ನಾಲ್ವರಿಗೆ ಕಾಂಗ್ರೆಸ್ ಟಿಕೆಟ್ ಘೋಷಣೆ
ಅಲ್ಲದೇ ನಿರ್ಗಮಿತ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಕೊಡುಗೆಗಳನ್ನ ಪಕ್ಷವು ಶ್ಲಾಘಿಸುತ್ತದೆ ಎಂದು ಸ್ಮರಿಸಿದ್ದಾರೆ. ಇದನ್ನೂ ಓದಿ: ಡಿಸಿಎಂ ಆಗಿ ಪರಮೇಶ್ವರ್ & 12 ಶಾಸಕರು ನೂತನ ಸಚಿವರಾಗಿ ಪ್ರಮಾಣ ಸ್ವೀಕಾರ
ಬಿ.ಕೆ.ಹರಿಪ್ರಸಾದ್ ಸೇರಿ ನಾಲ್ವರಿಗೆ ಮೇಲ್ಮನೆ ಟಿಕೆಟ್
ಇದಕ್ಕೂ ಮುನ್ನವೇ ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ (Karnataka MLC Polls) ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಘೋಷಿಸಿತ್ತು. ಬಿ.ಕೆ.ಹರಿಪ್ರಸಾದ್ (B.K.Hariprasad), ಪಿ.ವಿ.ಮೋಹನ, ತಿಪ್ಪಣ್ಣ ಕಮಕನೂರು, ಮಳವಳ್ಳಿ ಶಿವಣ್ಣಗೆ ಅವರಿಗೆ ಹೈಕಮಾಂಡ್ ಟಿಕೆಟ್ ಘೋಷಣೆ ಮಾಡಿದೆ.
