– ಕ್ಷಮೆ ಕೇಳದಿದ್ದರೆ ಕಪ್ಪು ಪಟ್ಟಿ ಪ್ರದರ್ಶನದ ಎಚ್ಚರಿಕೆ
ನವದೆಹಲಿ: ಕಾಂಗ್ರೆಸ್ (Congress) ಪಕ್ಷದ ವಿರುದ್ಧ ಬಳಸಿರುವ `ನನ್ನ ಮಕ್ಕಳು’ ಎಂಬ ಪದಪ್ರಯೋಗಕ್ಕೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ (BK Hariprasad) ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಅವರು, ಮೂರು ದಿನಗಳೊಳಗೆ ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ ಕಾಂಗ್ರೆಸ್ ಕಾರ್ಯಕರ್ತರು ಅವರ ವಿರುದ್ಧ ಕಪ್ಪು ಪಟ್ಟಿ ಪ್ರದರ್ಶನ ನಡೆಸಲಿದ್ದಾರೆ ಎಂದು ಎಚ್ಚರಿಕೆ ನೀಡಿದ್ದಾರೆ.
ವಿಜಯೇಂದ್ರ ಅವರಿಂದ ಇದಕ್ಕಿಂತ ಹೆಚ್ಚಿನ ನಿರೀಕ್ಷೆ ಮಾಡಲು ಸಾಧ್ಯವಿಲ್ಲ. ಅವರ ತಂದೆಯ 700 ಸಹಿಗಳನ್ನು ಅವರೇ ಹಾಕಿ ಆರ್ಟಿಜಿಎಸ್ ಮೂಲಕ ಲಂಚ ಪಡೆದಿದ್ದಾರೆ ಎಂದು ಆರೋಪಿಸಿದ ಹರಿಪ್ರಸಾದ್, ಇಂತಹವರಿಂದ ಉನ್ನತ ರಾಜಕೀಯ ಸಂಸ್ಕೃತಿಯನ್ನು ನಿರೀಕ್ಷಿಸಿರಲಿಲ್ಲ ಎಂದು ಟೀಕಿಸಿದರು. ಇದನ್ನೂ ಓದಿ: ಮುಂಬರುವ ಜಿ.ಪಂ., ತಾ.ಪಂ. ಚುನಾವಣೆಗೆ ಹೊಸ ಎಸ್ಐಆರ್ ಪಟ್ಟಿ ಇಲ್ಲ: ಈಶ್ವರ್ ಖಂಡ್ರೆ
ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಕಾಂಗ್ರೆಸ್ ಪಕ್ಷದ ಬಗ್ಗೆ ಇಂತಹ ಭಾಷೆ ಬಳಸಿರುವುದು ಸರಿಯಲ್ಲ. ಇದು ಕಾಂಗ್ರೆಸ್ ಪಕ್ಷದ ಭಾಷೆಯಲ್ಲ, ಇದು ಆರ್ಎಸ್ಎಸ್ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಭಾಷೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ರಾಮಮಂದಿರ ಕಾಣಿಕೆ ಕಳವು ಪ್ರಕರಣ – ಸುಪ್ರೀಂನಲ್ಲಿ ಅರ್ಜಿಗಳ ಇತ್ಯರ್ಥ, ವಿಚಾರಣೆಗೆ ಸಹಕರಿಸಲು ಅರ್ಜಿದಾರರಿಗೆ ಅವಕಾಶ
ಇದೇ ವೇಳೆ, ಮಹಾತ್ಮ ಗಾಂಧೀಜಿ ಅವರನ್ನು ದೇಶದ್ರೋಹಿ ಎಂದು ಬಿಂಬಿಸುವ ಪ್ರಯತ್ನದ ವಿರುದ್ಧವೂ ಹರಿಪ್ರಸಾದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೇಶದ್ರೋಹಿಗಳು ಯಾರು ಎಂಬುದು ಸ್ಪಷ್ಟವಾಗಿದೆ. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ದೇಶದ್ರೋಹಿಗಳು ಎಂದರು. ಇದನ್ನೂ ಓದಿ: ದೆಹಲಿಯಲ್ಲಿ ಕಾಂಗ್ರೆಸ್ ರ್ಯಾಲಿಯಿಂದ ವ್ಯಾಪಾರಿಗಳಿಗೆ 11 ಸಾವಿರ ಕೋಟಿ ನಷ್ಟ – ಬಿಜೆಪಿಯೇ ಕಾರಣ ಎಂದ ರಾಹುಲ್ ಗಾಂಧಿ
ಗಾಂಧೀಜಿ ವಿರುದ್ಧ ಮಾತನಾಡುವವರ ವಿರುದ್ಧ ಯುಎಪಿಎ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿದ್ದಾರೆ. ಗಾಂಧೀಜಿ ವಿರುದ್ಧ ಮಾತನಾಡಲು ಅವಕಾಶ ನೀಡಿದ ಪೊಲೀಸ್ ಕಮಿಷನರ್ ಅವರ ಕ್ರಮವನ್ನೂ ಪ್ರಶ್ನಿಸಿರುವ ಅವರು, ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ರಾಷ್ಟ್ರಧ್ವಜ ಹಾಗೂ ಸಂವಿಧಾನವನ್ನು ಸುಡಲು ಅವಕಾಶ ನೀಡಬಹುದೇ ಎಂದು ಪ್ರಶ್ನಿಸಿದ್ದಾರೆ. ಗಾಂಧೀಜಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡುವವರ ವಿರುದ್ಧ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಬೇಕು. ಇಂತಹ ಕೃತ್ಯಗಳಿಗೆ ಅವಕಾಶ ನೀಡಬಾರದು ಎಂದು ಹರಿಪ್ರಸಾದ್ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಉತ್ತರಾಖಂಡ ಹೆಲಿಕಾಪ್ಟರ್ ದುರಂತ – ಒಕ್ಕಲಿಗ ಸಂಪ್ರದಾಯದಂತೆ ನೆರವೇರಿದ ತುಮಕೂರಿನ ಇಬ್ಬರ ಅಂತ್ಯಸಂಸ್ಕಾರ
