ಜಿಹಾದಿ ಮೂಲಭೂತವಾದಿಗಳಿಂದ ಕೊಲೆ: ಬಿಎಲ್ ಸಂತೋಷ್ ಆಕ್ರೋಶ

Public TV
3 Min Read
B L Santhosh

ಬೆಂಗಳೂರು: ಭಜರಂಗದಳದ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ಕುರಿತಾಗಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಟ್ವೀಟ್‍ನಲ್ಲಿ ಏನಿದೆ?: ಶಿವಮೊಗ್ಗದಲ್ಲಿ ರಾಷ್ಟ್ರ ವಿರೋಧಿ, ಹಿಂದೂ ವಿರೋಧಿ ಮೂಲಭೂತವಾದಿ ಶಕ್ತಿಗಳಿಂದ ಹರ್ಷ ಹತ್ಯೆಗೀಡಾಗಿದ್ದಾನೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಇದು ಮೊದಲ ಮೊದಲ ಪುಟದಲ್ಲಿ ಸುದ್ದಿಯಾಗುವುದಿಲ್ಲ. ಯಾಕೆಂದರೆ ಅವರು ಹಿಂದೂ ಆಗಿದ್ದರು. ಅವರು ರಾಷ್ಟ್ರೀಯವಾದಿಯಾಗಿದ್ದರು. ಹರ್ಷ ಕುಟುಂಬದ ಪರವಾಗಿ ನಿಲ್ಲೋಣ ಎಂದು ಟ್ವೀಟ್ ಮಾಡಿದ್ದಾರೆ.

harsha smg

#YesToUniform_NoToHijabಅನ್ನು ಬೆಂಬಲಿಸಿದ್ದಕ್ಕಾಗಿ ಶಿವಮೊಗ್ಗದಲ್ಲಿ ಅವರ ಮನೆಯ ಮುಂದೆಯೇ ಜಿಹಾದಿ ಮೂಲಭೂತವಾದಿಗಳು ಹರ್ಷನನ್ನು ಬರ್ಬರವಾಗಿ ಕೊಂದಿದ್ದಾರೆ. ಬಲಿದಾನಗೈದ ಹರ್ಷ ಅವರಿಗೆ ನಮನಗಳು. ಈ ದುಃಖದ ಸಮಯದಲ್ಲಿ ನಾವು ಅವರ ಕುಟುಂಬದ ಬೆಂಬಲಕ್ಕೆ ನಿಲ್ಲುತ್ತೇವೆ ಎಂದು ಟ್ವೀಟ್ ಮಾಡಿದ್ದಾರೆ. ಮಂಗಳೂರು ಮುಸ್ಲಿಂ ಫೇಸ್‍ಬುಕ್ ಖಾತೆಯಲ್ಲಿ ಬರೆಯಾಗಿರವ ಒಂದು ಸ್ಕ್ರೀನ್ ಶಾರ್ಟ್ ಕೂಡ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಯುವಕನ ಕೊಲೆ ಪ್ರಕರಣ- ಓರ್ವ ಆರೋಪಿ ವಶಕ್ಕೆ, ನಾಲ್ವರಿಗಾಗಿ ಹುಡುಕಾಟ

ಫೇಸ್‍ಬುಕ್ ಪೋಸ್ಟ್‌ನಲ್ಲಿ  ಏನಿದೆ?: ಹರ್ಷ ಶಿವಮೊಗ್ಗ ಎನ್ನುವ ಹಿಂದುತ್ವದ ಭಯೋತ್ಪಾದಕ ಸಂಘನೆಯ ಕಾರ್ಯಕರ್ತನಿಂದ ಪ್ರವಾದಿ ಮಹಮ್ಮದ್ ಮುಸ್ತಫ ಸ.ಅ ಹಾಘು ಅಲ್ಲಾಹುನ ಬಗ್ಗೆ ಅಶ್ಲೀಲ ಪದಗಳಿಂದ ನಿಂದನೆ ಮಾಡಿದ್ದು, ಹಾಗೂ ಕಅಬಾದ ಫೋಟೋವನ್ನು ಅಶ್ಳೀಲವಾಗಿ ಎಡಿಟ್ ಮಾಡಿ ಸಾಮಾಜಿಕ ತಾಣಗಳಲ್ಲಿ ಹರಿಬಿಡುತ್ತಿದ್ದಾನೆ. ಶಿವಮೊಗ್ಗದ ಜನತೆ ಈತನನ್ನು ಸರಿಯಾಗಿ ವಿಚಾರಿಸಿ ಹತ್ತಿರದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಹಾಗೂ ಈತನಿಗೆ ನೀಡಬೇಕಾದ ಚಿಕಿತ್ಸೆ ನೀಡಬೇಕಾಗಿ ವಿನಂತಿ. ಕರಾವಳಿಯ ಸಹೋದರರೆ ಈತನ ಮೇಲೆ ಹಲವಾರು ಪ್ರಕರಣ ದಾಖಲಿಸಿ ಈತನನ್ನು ಜೈಲಿನಲ್ಲಿ ಕೊಳೆಯುವಂತೆ ಮಾಡಬೇಕು ಅಥವಾ ಪೊಲೀಸ್ ಠಾಣೆ ಹಾಗೂ ಕೋರ್ಟ್‍ಗೆ ಅಲೆದಾಡುವಂತೆ ಮಾಡಬೇಕು ಎಂದು ಮಂಗಳೂರು ಮುಸ್ಲಿಂ ಫೇಸ್‍ಬುಕ್ ಖಾತೆಯಲ್ಲಿ ಈ ಹಿಂದೆ ಬರೆದ ಪೋಸ್ಟ್ ಅನ್ನು ಅಪ್ಲೋಡ್ ಮಾಡಿದ್ದಾರೆ. ಇದನ್ನೂ ಓದಿ: 2 ವರ್ಷದ ಹಿಂದೆಯೇ 10 ಲಕ್ಷಕ್ಕೆ ಸುಪಾರಿ ಕೊಟ್ಟಿದ್ದರು: ಮೃತನ ಸಂಬಂಧಿ ಹೇಳಿಕೆ

ನಡೆದಿದ್ದೇನು?: ಭಾನುವಾರ ರಾತ್ರಿ ಹರ್ಷ ಕ್ಯಾಂಟೀನ್ ಬಳಿ ಟೀ ಕುಡಿಯುತ್ತಾ ನಿಂತಿದ್ದ ವೇಳೆ ಕಾರಿನಲ್ಲಿ ಬಂದ ಯುವಕರ ಗುಂಪು ಏಕಾಏಕಿ ಹರ್ಷನ ಮೇಲೆ ದಾಳಿ ನಡೆಸಿದೆ. ನಂತರ ದಾಳಿ ನಡೆಸಿದ ತಂಡ ಸ್ಥಳದಿಂದ ಪರಾರಿಯಾಗಿದೆ. ಈ ವೇಳೆ ದಾಳಿಗೆ ಒಳಗಾದ ಹರ್ಷ ಸ್ಥಳದಲ್ಲೇ ಕುಸಿದು ಬಿದ್ದಿದ್ದಾನೆ. ನಂತರ ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ ತೀವ್ರವಾಗಿ ಹಲ್ಲೆಗೊಳಗಾಗಿದ್ದ ಹರ್ಷ ಮೆಗ್ಗಾನ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಈ ವಿಷಯ ತಿಳಿಯುತ್ತಿದ್ದಂತೆ ಎರಡು ಕೋಮಿನ ಯುವಕರ ಗುಂಪು ಮೆಗ್ಗಾನ್ ಆಸ್ಪತ್ರೆ ಬಳಿ ಜಮಾಯಿಸಿತು. ಹೀಗಾಗಿ ಮೆಗ್ಗಾನ್ ಆಸ್ಪತ್ರೆ ಬಳಿ ಬಿಗುವಿನ ವಾತಾವರಣ ಸೃಷ್ಟಿಯಾಗಿತ್ತು.

Share This Article
Leave a Comment

Leave a Reply

Your email address will not be published. Required fields are marked *