ಶಿವಮೊಗ್ಗ: ರಾಜ್ಯ ರಾಜಕೀಯದಲ್ಲಿ ಮತಾಂತರ ನಿಷೇಧ ಮಸೂದೆ ಬಗ್ಗೆ ಚರ್ಚೆಯ ಕಾವು ಜೋರಾಗಿದೆ. ಒಂದೆಡೆ ಸರ್ಕಾರ ಮಸೂದೆ ಜಾರಿಗೆ ಸಜ್ಜಾಗಿದ್ದರೆ, ಮತ್ತೊಂದೆಡೆ ಪ್ರತಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿವೆ. ಇದರ ಮಧ್ಯೆ ಬೆಳಗಾವಿ ಅಧಿವೇಶನದಲ್ಲಿಯೇ ನೂರಕ್ಕೆ ನೂರರಷ್ಟು ಮತಾಂತರ ನಿಷೇಧ ಮಸೂದೆಯನ್ನು ಅಂಗೀಕರಿಸುತ್ತೇವೆಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
ಶಿವಮೊಗ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಳಗಾವಿಯಲ್ಲಿ ವಿಧಾನ ಮಂಡಲ ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲಿ ಉದ್ದೇಶ ಪೂರ್ವಕವಾಗಿ ಈ ರೀತಿಯ ಗಲಭೆ ಮಾಡುವ ಪ್ರಯತ್ನ ನಡೆಯುತ್ತಿದೆ. ಮಹಾತ್ಮರ ಪುತ್ಥಳಿ ಹಾಳು ಮಾಡಿರುವುದನ್ನು ಸಹಿಸಲು ಸಾಧ್ಯವಿಲ್ಲ. ಈ ಬಗ್ಗೆ ವಿಧಾನ ಮಂಡಲದಲ್ಲಿ ಸುದೀರ್ಘ ಚರ್ಚೆ ನಡೆಸುತ್ತೇವೆ ಎಂದರು. ಇದನ್ನೂ ಓದಿ: ಬಿ.ಎಸ್.ಯಡಿಯೂರಪ್ಪ, ಮತಾಂತರ ನಿಷೇಧ ಮಸೂದೆ, ಶಿವಮೊಗ್ಗ
Advertisement
Advertisement
ಮುಖ್ಯಮಂತ್ರಿ ಬೊಮ್ಮಾಯಿ ಅವರು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಈಗಾಗಲೇ ಗೃಹ ಸಚಿವರಿಗೆ ಸೂಚನೆ ನೀಡಿದ್ದಾರೆ. ಈ ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರೂ ಅವರನ್ನು ಬಂಧಿಸುವ ಕೆಲಸವಾಗಲಿದೆ. ಅಲ್ಲದೇ ಈಗಾಗಲೇ 27 ಮಂದಿಯನ್ನು ಬಂಧಿಸಿ, ಜೈಲಿಗೆ ಕಳುಹಿಸಲಾಗಿದೆ ಎಂದು ತಿಳಿಸಿದರು.
Advertisement
ವಿಧಾನ ಮಂಡಲದಲ್ಲಿ ವ್ಯಾಪಕ ಚರ್ಚೆ ಮಾಡಿ ಮುಂದಿನ ದಿನಗಳಲ್ಲಿ ಈ ರೀತಿಯ ಘಟನೆಗಳು ಮರುಕಳಿಸದಂತೆ ಎಚ್ಚರವಹಿಸಲು ಎಲ್ಲಾ ಕ್ರಮಕೈಗೊಳ್ಳುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ. ಅಪರಾಧಿಗಳು ಯಾರೇ ಇರಲಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಮತಾಂತರ ನಿಷೇಧ ಕಾಯ್ದೆ ಬಳಿಕ ಲವ್ ಜಿಹಾದ್ ನಿಷೇಧ ಕಾಯ್ದೆ: ಸುನಿಲ್ ಕುಮಾರ್
Advertisement
ಸಚಿವ ಸಂಪುಟ ವಿಸ್ತರಣೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಮಾಜಿ ಸಿಎಂ, ಈ ಬಗ್ಗೆ ನನಗೆ ಮಾಹಿತಿಯಿಲ್ಲ. ಇದರ ಬಗ್ಗೆ ಮುಖ್ಯಮಂತ್ರಿಗಳನ್ನು ಕೇಳಬೇಕು. ನನಗೆ ಗೊತ್ತಿರುವ ಪ್ರಕಾರ ಈವರೆಗೆ ಅಂತಹ ಯಾವುದೇ ಚರ್ಚೆ ಸಹ ನಡೆದಿಲ್ಲ. ಬಿ.ವೈ.ವಿಜಯೇಂದ್ರ ಅವರಿಗೆ ಸಂಪುಟ ಸೇರ್ಪಡೆ ಬಗ್ಗೆ ಕೂಡ ಚರ್ಚೆಯಾಗಿಲ್ಲ. ಅದು ಹೈಕಮಾಂಡ್ ಮತ್ತು ಮುಖ್ಯಮಂತ್ರಿಗಳಿಗೆ ಬಿಟ್ಟ ವಿಚಾರ ಎಂದು ಹೇಳಿದರು.