– ಮಾಜಿ ಸಿಎಂ ವಿರುದ್ಧ ಗುಡುಗಿದ ಯಡಿಯೂರಪ್ಪ
ಹುಬ್ಬಳ್ಳಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯ ಪ್ಲಾನ್ ಬಿಚ್ಚಿಟ್ಟಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಚಿಂಚೋಳಿ ಹಾಗೂ ಕುಂದಗೋಳ ವಿಧಾನಸಭಾ ಉಪ ಚುನಾವಣೆ ಗೆಲ್ಲುತ್ತೇವೆ. ಇತ್ತ ಮೂವರು ಪಕ್ಷೇತರ ಶಾಸಕರು ನಮ್ಮ ಜೊತೆಗೆ ಬರುತ್ತಾರೆ. ಈ ಮೂಲಕ ನಮ್ಮ ಸಂಖ್ಯಾಬಲ 109 ಆಗುತ್ತದೆ ಹೀಗಾಗಿ ಬದಲಾವಣೆ ಆಗುತ್ತದೆ. ಹೀಗಾಗಿ ರಾಜ್ಯದಲ್ಲಿ ಬದಲಾವಣೆಯಾಗುತ್ತದೆ ಎಂದು ಹೇಳಿದ್ದಾರೆ.
Advertisement
Advertisement
ಚಿಂಚೋಳಿ ಹಾಗೂ ಕುಂದಗೋಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಹಣದ ಹೊಳೆ ಹರಿಸುತ್ತಿದೆ. ಆದರೆ ನಮಗೆ ಜನರ ಬೆಂಬಲವಿದ್ದು, ಎರಡೂ ಕ್ಷೇತ್ರದಲ್ಲಿಯೂ ನಾವು 20 ಸಾವಿರಕ್ಕಿಂತ ಹೆಚ್ಚು ಮತಗಳ ಅಂತರದಿಂದ ಗೆಲ್ಲುತ್ತೇವೆ. ರಾಜ್ಯದಲ್ಲಿ ಬದಲಾವಣೆ ತರಲು ಬಿಜೆಪಿ ಗೆಲ್ಲಿಸಬೇಕು ಅಂತ ಮತದಾರರಿಗೆ ಕೈ ಜೋಡಿಸಿ ಪ್ರಾರ್ಥನೆ ಮಾಡುವೆ ಎಂದು ತಿಳಿಸಿದರು.
Advertisement
ಮಾಜಿ ಸಿಎಂ ವೀರೇಂದ್ರ ಪಾಟೀಲ್ ಅವರಿಗೆ ಕಾಂಗ್ರೆಸ್ ಅವಮಾನ ಮಾಡಿದೆ. ಹೀಗಾಗಿ ವೀರಶೈವರ ಮತ ಕೇಳುವ ಹಕ್ಕು ಕಾಂಗ್ರೆಸ್‍ಗೆ ಇಲ್ಲ. ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಾತನಾಡಿದರೆ ದೊಡ್ಡವನಾಗುತ್ತೇನೆ ಎಂಬ ಭಾವನೆ ಮಾಜಿ ಸಿಎಂ ಸಿದ್ದರಾಮಯ್ಯನವರಿಗೆ ಬಂದಿದೆ ಎಂದು ಗುಡುಗಿದರು.
Advertisement
ಲೋಕಸಭೆಯಲ್ಲಿ ನಾವು 22 ಸ್ಥಾನ ಗೆಲ್ಲುತ್ತೇವೆ ಅಂತ ಮತ್ತೊಮ್ಮೆ ಹೇಳುತ್ತೇನೆ. ಇದೇ ರೀತಿ ಕಾಂಗ್ರೆಸ್‍ನವರು ಹೇಳಲಿ ನೋಡೋಣ. ನಾನು ಮುಖ್ಯಮಂತ್ರಿಯಾಗುತ್ತೇನೆ ಎಂದು ಎಲ್ಲಿಯೂ ಹೇಳಿಲ್ಲ. ವಿರೋಧ ಪಕ್ಷದಲ್ಲಿಯೇ ಮುಂದುವರಿಯಬಲ್ಲೆ. ನಾವು ಬೇರೆ ಪಕ್ಷದ ಅಭ್ಯರ್ಥಿಗಳ ಬಗ್ಗೆ ಯಾವುದೇ ಟೀಕೆ ಮಾಡುತ್ತಿಲ್ಲ. ಸಿದ್ದರಾಮಯ್ಯನವರ ಮಾತಿಗೆ ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ತಿರುಗೇಟು ನೀಡುತ್ತಿದ್ದಾರೆ ಅಷ್ಟೇ ಎಂದು ಹೇಳಿದರು.