ಶಿವಮೊಗ್ಗ: ಸುಳ್ವಾಡಿ ಪ್ರಕರಣದಿಂದಾಗಿ ಎಲ್ಲಾ ದೇವಾಲಯದ ಪ್ರಸಾದ ಪರೀಕ್ಷಿಸುವಂತೆ ಧಾರ್ಮಿಕ ದತ್ತಿ ಇಲಾಖೆಗೆ ಸರ್ಕಾರ ಆದೇಶ ನೀಡಿರುವುದು ಸರಿಯಲ್ಲ ಎಂದು ವಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಚಾಮರಾಜನಗರದ ಸುಳ್ವಾಡಿ ಗ್ರಾಮದ ಕಿಚ್ಚುಗುತ್ತ್ ಮಾರಮ್ಮ ದೇವಸ್ಥಾನದಲ್ಲಿ ತಯಾರಿಸಿದ್ದ ಪ್ರಸಾದಕ್ಕೆ ದುಷ್ಕರ್ಮಿಗಳು ವಿಷ ಬೆರೆಸಿದ್ದರು. ಈ ಪ್ರಕರಣದ ಆರೋಪಿಗಳನ್ನು ಪತ್ತೆ ಹಚ್ಚುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಬೇಕೇ ಹೊರತು ಪ್ರಸಾದ ಪರೀಕ್ಷೆ ಮಾಡುವಂತೆ ಆದೇಶ ಹೊರಡಿಸಿರುವುದು ಸರಿಯಲ್ಲ ಎಂದು ಹೇಳಿದರು.
ಉತ್ತರ ಕರ್ನಾಟಕ ಅಭಿವೃದ್ಧಿ ಕುಂಠಿತ ಹಾಗೂ ನೀರಾವರಿ ಯೋಜನೆಗಳ ಚರ್ಚೆ ಅಗತ್ಯವಾಗಿದೆ. ಈ ಕುರಿತು ಸದನದಲ್ಲಿ ನಾಳೆ ಚರ್ಚೆ ಮಾಡಲಿದ್ದೇನೆ ಎಂದು ತಿಳಿಸಿದರು.
ರೈತರ ಸಾಲಮನ್ನಾ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಬಿಎಸ್‍ವೈ, ರಾಷ್ಟ್ರಿಕೃತ ಬ್ಯಾಂಕ್‍ಗಳು ಯಾವುದೇ ಕಾರಣಕ್ಕೂ ಋಣಮುಕ್ತ ಪತ್ರ ನೀಡಲು ಸಾಧ್ಯವಿಲ್ಲ ಎನ್ನುತ್ತಿವೆ. ಆದರೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಪ್ರಚಾರದಲ್ಲಿ ತೊಡಗಿದ್ದಾರೆಯೇ ಹೊರತು, ಅಭಿವೃದ್ಧಿಯತ್ತ ಗಮನಹರಿಸುತ್ತಿಲ್ಲ. ರಾಜ್ಯದಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಲೇ ಇವೆ ಎಂದು ಆರೋಪಿಸಿದ ಅವರು, ಪಂಚ ರಾಜ್ಯ ಚುನಾವಣೆ ಫಲಿತಾಂಶವು ಮುಂದಿನ ಸಾರ್ವತ್ರಿಕ ಲೋಕಸಭಾ ಚುನಾವಣೆ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಹೇಳಿದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv