Thursday, 23rd May 2019

ಕೋಟಿ ರೂ.ಗೆ ಎಷ್ಟು ನೋಟು ಇರುತ್ತೆ ಅಂತ ನಮಗೆ ಗೊತ್ತಿಲ್ಲ: ಬಿಎಸ್‍ವೈ

– ನಾವು ಆಫರ್ ಮಾಡೋದಾದ್ರೆ ಕೈ ಶಾಸಕರು ಹರಾಜಿಗಿದ್ದಾರೇನು?

ರಾಯಚೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರು ಬೇಜವಾಬ್ದಾರಿ ಹೇಳಿಕೆ ನೀಡಬಾರದು. ನಮಗೆ ಕೋಟಿ ರೂ.ಗೆ ಎಷ್ಟು ನೋಟು ಇರುತ್ತವೆ ಅಂತ ಗೊತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವ್ಯಂಗ್ಯವಾಡಿದ್ದಾರೆ.

ರಾಯಚೂರಿನ ದೇವದುರ್ಗದ ಅರಕೇರಾದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕರಿಗೆ ಬಿಜೆಪಿಯಿಂದ 40, 50 ಕೋಟಿ ರೂ. ಆಫರ್ ನೀಡುತ್ತಿದ್ದಾರೆ ಎನ್ನುವ ಸಿದ್ದರಾಮಯ್ಯ ಅವರ ಆರೋಪವನ್ನ ತಳ್ಳಿಹಾಕಿದರು. ನಾವು ಆಫರ್ ಮಾಡುವುದಾದರೆ ಅವರ ಶಾಸಕರು ಹರಾಜಿಗೆ ಇದ್ದರೇನು ಎಂದು ಪ್ರಶ್ನಿಸಿದ ಅವರು ಆಡಳಿತ ಪಕ್ಷದ ಶಾಸಕರ ಅಸಮಾಧಾನದಲ್ಲಿ ನಮ್ಮ ಪಾತ್ರವಿಲ್ಲ ಎಂದು ಹೇಳಿದರು.

ಮೈತ್ರಿ ಸರ್ಕಾರದಲ್ಲಿ ಇಪ್ಪತ್ತು ಜನ ಶಾಸಕರು ಅಸಮಾಧಾನಗೊಂಡಿದ್ದಾರೆ. ಇದರಿಂದಾಗಿ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿಯಾಗುತ್ತಿಲ್ಲ. ಅತೃಪ್ತ ಶಾಸಕರು ಎಲ್ಲಿಗೆ ಹೋಗಿದ್ದಾರೋ ನಮಗೆ ಗೊತ್ತಿಲ್ಲ. ಅವರಿಗೂ ನಮಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿ ಆಪರೇಷನ್ ಕಮಲವನ್ನು ತಳ್ಳಿ ಹಾಕಿದರು.

ಬಜೆಟ್ ಮಂಡನೆಗೆ ಅವಕಾಶ ನೀಡುವ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿ ಶಾಸಕಾಂಗ ಸಭೆಯ ನಂತರ ನಿರ್ಧಾರ ಮಾಡುತ್ತೇವೆ. ಇಂದು ಅಧಿವೇಶ ಮಧ್ಯಾಹ್ನಕ್ಕೆ ಮುಕ್ತಾಯವಾಯಿತು. ಹೀಗಾಗಿ ದೇವದುರ್ಗದ ವೀರಗೋಟದಲ್ಲಿ 1.96 ಲಕ್ಷ ಜನರಿಂದ ಇಷ್ಟಲಿಂಗ ಪೂಜೆಯಲ್ಲಿ ನೋಡಲು, ದೇವರ ದರ್ಶನ ಪಡೆಯಲು ಇಲ್ಲಿಗೆ ಬಂದಿದ್ದೇನೆ ಎಂದು ತಿಳಿಸಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Leave a Reply

Your email address will not be published. Required fields are marked *