ಶಿವಮೊಗ್ಗ: ಬಿಎಸ್‍ವೈ ವಿರುದ್ಧ ಗುಂಪುಗಾರಿಕೆ ಮಾಡಿದರೆ ದ್ರೋಹ ಬಗೆದರೆ ತಂದೆ-ತಾಯಿಗೆ ದ್ರೋಹ ಬಗೆದಂತೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ನೆನೆದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಭಾವುಕರಾಗಿದ್ದಾರೆ.
Advertisement
ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದ ಅವರು, ನಾನು ಇವತ್ತು ಬೆಳೆಯುವುದಕ್ಕೆ ಕಾರಣ ಒಂದು ಸಂಘ, ಮತ್ತೊಂದು ಕಾರಣ ಯಡಿಯೂರಪ್ಪ ಅವರು. ನಾನು ಏನಾದರೂ ಯಡಿಯೂರಪ್ಪ ವಿರುದ್ಧ ಗುಂಪು ಕಟ್ಟಿದರೆ, ಅದು ನಮ್ಮ ತಂದೆ ತಾಯಿಗೆ ಮಾಡಿದ ದ್ರೋಹದಂತೆ ಎಂದು ಬಿಎಸ್‍ವೈ ಬಗ್ಗೆ ಭಾವುಕ ನುಡಿಗಳನ್ನಾಡಿದರು. ಇದನ್ನೂ ಓದಿ: ವಿದ್ಯಾರ್ಥಿಗಳಿಗೆ ಕೊರೊನಾ ಹರಡದಂತೆ ತಡೆಯಲು ನಿಗಾ ವಹಿಸಿ: ಕೆ.ಎಸ್.ಈಶ್ವರಪ್ಪ
Advertisement
Advertisement
ಮಾಧ್ಯಮಗಳಲ್ಲಿ ಕೆಲವು ಬಾರಿ ಯಡಿಯೂರಪ್ಪ ಬಣ, ಈಶ್ವರಪ್ಪ ಬಣ ಎಂಬುದಾಗಿ ಸುದ್ದಿ ಬರುತ್ತದೆ. ನಮ್ಮಲ್ಲಿ ಯಾವುದೇ ಗುಂಪು ಎಂಬುದಿಲ್ಲ. ನಾನು ಏನಾದರೂ ಯಡಿಯೂರಪ್ಪ ಅವರ ವಿರುದ್ಧ ಗುಂಪು ಕಟ್ಟಿದರೆ, ಅದು ನಮ್ಮ ತಂದೆ ತಾಯಿಗೆ ಮಾಡಿದ ದ್ರೋಹದ ರೀತಿ ಆಗುತ್ತದೆ ಎಂದು ಸಚಿವ ಈಶ್ವರಪ್ಪ ತಿಳಿಸಿದರು. ಇದನ್ನೂ ಓದಿ: NDRF ಟ್ವಿಟ್ಟರ್ ಖಾತೆ ಹ್ಯಾಕ್
Advertisement
ಈ ಕಾರ್ಯಕ್ರಮದ ಬಳಿಕ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೋವಿಡ್-19 ನಿಯಂತ್ರಣ ಕುರಿತು ವಿವಿಧ ಇಲಾಖಾ ಅಧಿಕಾರಿಗಳು ಹಾಗೂ ತಜ್ಞ ವೈದ್ಯರ ಸಭೆ ನಡೆಸಿ ಮಾತನಾಡಿದ ಅವರು, ಸರ್ಕಾರದ ಮಾರ್ಗಸೂಚಿ ಪ್ರಕಾರ ಶಾಲಾ ಕಾಲೇಜುಗಳನ್ನು ನಡೆಸಬೇಕು. ಪಾಸಿಟಿವ್ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ಕಂಡು ಬರುವ ಶಿಕ್ಷಣ ಸಂಸ್ಥೆಗಳಿಗೆ ಜಿಲ್ಲಾಧಿಕಾರಿ ಅವರ ಅನುಮತಿ ಪಡೆದ ಬಳಿಕ ರಜೆ ನೀಡಬಹುದಾಗಿದೆ. ಅನಾರೋಗ್ಯದಿಂದ ಗೈರು ಹಾಜರಾಗುವ ವಿದ್ಯಾರ್ಥಿಗಳಿಗೆ ಹಾಜರಾತಿಯನ್ನು ಕಡ್ಡಾಯಗೊಳಿಸಬಾರದು. ಶಾಲೆಗೆ ಆಗಮಿಸುವ ವಿದ್ಯಾರ್ಥಿಗಳ ಆರೋಗ್ಯದ ಬಗ್ಗೆ ನಿರಂತರ ನಿಗಾ ವಹಿಸಬೇಕು ಎಂದು ತಿಳಿಸಿದರು. ಇದನ್ನೂ ಓದಿ: UP Election – ಅಮಿತ್ ಶಾ ಮನೆ-ಮನೆ ಪ್ರಚಾರ
ಜಿಲ್ಲೆಯಲ್ಲಿ ಲಸಿಕೆ ಪಡೆದವರ ಪ್ರಮಾಣ ರಾಜ್ಯಮಟ್ಟಕ್ಕೆ ಹೋಲಿಸಿದರೆ ಕಡಿಮೆಯಿದೆ. ಅಭಿಯಾನದ ರೀತಿಯಲ್ಲಿ ಲಸಿಕೆಯನ್ನು ಪ್ರತಿಯೊಬ್ಬರಿಗೂ ನೀಡಬೇಕು. ಆರೋಗ್ಯ ಕಾರ್ಯಕರ್ತರಿಗೆ ಹಾಗೂ ಮುಂಚೂಣಿ ಕಾರ್ಯಕರ್ತರಿಗೆ ಮೂರನೇ ಡೋಸ್ ನೀಡುವ ಕಾರ್ಯವನ್ನು ಚುರುಕುಗೊಳಿಸಬೇಕು. ಜಿಲ್ಲೆಯಲ್ಲಿ ಪ್ರಸ್ತುತ ಪಾಸಿಟಿವ್ ವ್ಯಕ್ತಿಗಳ ಹೋಂ ಕ್ವಾರಂಟೈನ್ ಪ್ರಮಾಣ ಶೇ.95ರಷ್ಟಿದ್ದು, ಪ್ರಾಥಮಿಕ ಸಂಪರ್ಕಿತರಿಗೆ ಕನಿಷ್ಟ 3 ದಿನ ಹೋಂ ಕ್ವಾರಂಟೈನ್ ಖಾತ್ರಿಪಡಿಸಬೇಕು. ಹೋಂ ಕ್ವಾರಂಟೈನ್‍ನಲ್ಲಿ ಇರುವವರಿಗೆ ಅಗತ್ಯ ಔಷಧಿಗಳನ್ನು ಒಳಗೊಂಡ ಕಿಟ್ ಕಡ್ಡಾಯವಾಗಿ ಒದಗಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.