ಚಾಮರಾಜನಗರ: ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ನಾ ಮುಂದು, ತಾ ಮುಂದು ಎಂಬಂತೆ ಇರುವ ಐದಾರು ಮಂದಿ ಟಿಕೆಟ್ ಆಕಾಂಕ್ಷಿಗಳಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶಾಕ್ ನೀಡಿದ್ದು, ಚುನಾವಣೆಗೆ ಇನ್ನೂ ಒಂದು ವರ್ಷವಿರುವಾಗಲೇ ಅಭ್ಯರ್ಥಿ ಹೆಸರನ್ನು ಅಂತಿಮಗೊಳಿಸಿದ್ದಾರೆ.
ಹೌದು, ಧಾರ್ಮಿಕ ಕಾರ್ಯಕ್ರಮಕ್ಕಾಗಿ ಯಳಂದೂರು ತಾಲೂಕಿನ ಗೌಡಹಳ್ಳಿ ಗ್ರಾಮಕ್ಕೆ ಆಗಮಿಸಿದ್ದ ಯಡಿಯೂರಪ್ಪ ಮಾತನಾಡಿ, ಕಳೆದ ಬಾರಿ ಮಹೇಶ್ ಅವರನ್ನು ಶಾಸನಸಭೆಗೆ ಕಳುಹಿಸಿದಂತೆ ಮುಂದಿನ ಬಾರಿಯೂ ಅವರನ್ನು ಆರಿಸಿ ಕಳುಹಿಸಿಕೊಡಿ ಎಂದು ಜನತೆಯಲ್ಲಿ ಮನವಿ ಮಾಡುವ ಮೂಲಕ ಎನ್.ಮಹೇಶ್ ಅವರೇ ಬಿಜೆಪಿ ಅಭ್ಯರ್ಥಿ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನಂಬಿಕೊಂಡವರನ್ನು ಯಡಿಯೂರಪ್ಪ ಎಂದಿಗೂ ಕೈಬಿಟ್ಟಿಲ್ಲ: ಶಾಸಕ ಎನ್.ಮಹೇಶ್
ಯಡಿಯೂರಪ್ಪ ಅವರ ಹೇಳಿಕೆಯಿಂದ ಈಗಾಗಲೇ ಟಿಕೆಟ್ ಮೇಲೆ ಕಣ್ಣಿಟ್ಟಿದ್ದ ಮಾಜಿ ಶಾಸಕ ಜಿ.ಎನ್.ನಂಜುಂಡಸ್ವಾಮಿ, ಸಂಸದ ವಿ.ಶ್ರೀನಿವಾಸಪ್ರಸಾದ್ ಅಳಿಯ ಡಾ.ಮೋಹನ್, ಚಾಮರಾಜನಗರ ಸಿಪಿಐ ಬಿ.ಪುಟ್ಟಸ್ವಾಮಿ, ಕಿನಕಹಳ್ಳಿ ರಾಚಯ್ಯ ಅವರಿಗೆ ಬಿಎಸ್‌ವೈ ಹೇಳಿಕೆಯಿಂದ ಬೇಸರವಾಗಿದ್ದರೂ ಅಚ್ಚರಿಯಿಲ್ಲ.
ಮುಂದಿನ ಚುನಾವಣೆಗೆ ಕೊಳ್ಳೇಗಾಲ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯಾರು ಎಂಬ ಹತ್ತಾರು ಮಾತುಗಳಿಗೆ ಯಡಿಯೂರಪ್ಪ ಇಂದು ಪೂರ್ಣ ವಿರಾಮ ಹಾಕಿದ್ದಾರೆ. ಮಹೇಶ್ ಅವರೇ ಮುಂದಿನ ಬಿಜೆಪಿ ಅಭ್ಯರ್ಥಿ ಎಂದು ಘೋಷಿಸಿದ್ದಾರೆ. ಇದನ್ನೂ ಓದಿ: ಬ್ಯಾಂಕ್, ಎಟಿಎಂ ಬಾಗಿಲಿನಲ್ಲಿ ಮಲ ವಿಸರ್ಜನೆ ಮಾಡಿ ವಿಕೃತಿ