ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮೊಮ್ಮಗಳು ಸೌಂದರ್ಯ, ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಗುವಾದ ಬಳಿಕ ಅವರು ಡಿಪ್ರೆಷನ್‌ಗೆ (ಮಾನಸಿಕ ಖಿನ್ನತೆ) ಒಳಗಾಗಿದ್ದೇ ಆತ್ಮಹತ್ಯೆಗೆ ಕಾರಣ ಎನ್ನಲಾಗಿದೆ.
ಮಾಜಿ ಸಿಎಂ ಯಡಿಯೂರಪ್ಪ ಅವರ ಮೊಮ್ಮಗಳ ಪಾರ್ಥಿವ ಶರೀರವನ್ನು ಬೌರಿಂಗ್ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಇಂದು ಮಧ್ಯಾಹ್ನ 12 ಗಂಟೆ ವೇಳೆಗೆ ಸೌಂದರ್ಯ ಅವರನ್ನು ಆಸ್ಪತ್ರೆಗೆ ಕರೆತಂದಿದ್ದರು. ಆದರೆ ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದರು ಎಂದು ವೈದ್ಯರು ತಿಳಿಸಿದ್ದಾರೆ. ಸದ್ಯ ಬೌರಿಂಗ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಯುತ್ತಿದ್ದು ಮಾಜಿ ಸಿಎಂ ಮೊಮ್ಮಗಳ ಸಾವಿಗೆ ಕಾರಣ ಏನೆಂಬುದು ವರದಿಯಿಂದ ತಿಳಿದುಬರಲಿದೆ. ಇದನ್ನೂ ಓದಿ:
Advertisement
Advertisement
ಬಿಎಸ್‌ವೈ ಮೊಮ್ಮಗಳು ಸೌಂದರ್ಯ ಅವರು ರಾಮಯ್ಯ ಆಸ್ಪತ್ರೆಯಲ್ಲಿ ರೇಡಿಯಾಲಜಿಸ್ಟ್ ಆಗಿದ್ದರು. ಅವರ ಪತಿ ಡಾ. ನಿರಂಜನ್ ಕೂಡ ಅದೇ ಆಸ್ಪತ್ರೆಯಲ್ಲಿ ರೇಡಿಯಾಲಜಿಸ್ಟ್ ಆಗಿದ್ದರು. ದಂಪತಿಗೆ 9 ತಿಂಗಳ ಗಂಡು ಮಗು ಇದೆ. ರಾಮಯ್ಯದಲ್ಲಿ ವೈದ್ಯಕೀಯ ಶಿಕ್ಷಣ ಮುಗಿಸಿ ಬೌರಿಂಗ್‌ನಲ್ಲೇ ಸರ್ಜನ್ ಆಗಿದ್ದ ಸೌಂದರ್ಯ ಅವರು ಮಗುವಾದ ನಂತರ ಕೆಲಸ ಬಿಟ್ಟಿದ್ದರು. ನಂತರ ಡಿಪ್ರೆಷನ್‌ಗೆ ಒಳಗಾಗಿದ್ದರು. ಕಳೆದ ಮೂರು ತಿಂಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು ಎಂದು ತಿಳಿದುಬಂದಿದೆ.
Advertisement
ಸೌಂದರ್ಯ ಹಾಗೂ ಪತಿ ಡಾ. ನಿರಂಜನ್ ಅವರು ಧವಳಗಿರಿ ಅಪಾರ್ಟ್ಮೆಂಟ್‌ನಲ್ಲಿ ವಾಸವಾಗಿದ್ದರು. ಆದರೆ ಇಂದು ಡಾಲರ್ಸ್ ಕಾಲೋನಿಯ ಲೆಗೆಸ್ಸಿ ಅಪಾರ್ಟ್ಮೆಂಟ್ ಫ್ಲಾಟ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಗುವನ್ನು ಪಕ್ಕದ ರೂಮ್‌ನಲ್ಲಿ ಮಲಗಿಸಿ ತಾನು ಬೇರೊಂದು ರೂಮ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಳಗ್ಗೆ 11 ಗಂಟೆಗೆ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
Advertisement
ಘಟನೆ ಸಂಬAಧ ಮಾಹಿತಿ ತಿಳಿಯುತ್ತಿದ್ದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾಜಿ ಸಿಎಂ ಯಡಿಯೂರಪ್ಪ ಅವರೊಂದಿಗೆ ಚರ್ಚೆ ನಡೆಸಿದ್ದಾರೆ. ಈ ವೇಳೆ ಕೆಲವರು ಸಚಿವರೂ ಭಾಗಿಯಾಗಿದ್ದರು. ಸದ್ಯ ಯಡಿಯೂರಪ್ಪ ನಿವಾಸದ ಬಳಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಪೊಲೀಸರು ಆತ್ಮಹತ್ಯೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.