ಬೆಂಗಳೂರು: ಮಾಜಿ ಸಿಎಂ ಯಡಿಯೂರಪ್ಪ (B.S Yediyurappa) ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣ (POCSO case) ಸಂಬಂಧ ಸಿಐಡಿ (CID) ಅಧಿಕಾರಿಗಳು ಕೋರ್ಟ್‍ಗೆ 750 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.
ಯಡಿಯೂರಪ್ಪ ಸೇರಿದಂತೆ 4 ಜನರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ. 73 ಸಾಕ್ಷಿಗಳ ಪರಿಗಣಿಸಿ ದೋಷಾರೋಪ ಪಟ್ಟಿ ತಯಾರಿಸಲಾಗಿದೆ. ಯಡಿಯೂರಪ್ಪ, ಅರುಣ್, ರುದ್ರೇಶ್ ಮತ್ತು ಮರಿಸ್ವಾಮಿ ಎಂಬವರ ವಿರುದ್ಧ ಸಿಐಡಿ ಅಧಿಕಾರಿಗಳು 1ನೇ ತ್ವರಿತಗತಿ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಇದನ್ನೂ ಓದಿ: 6 ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ತಾತ – ತಂದೆ ಅರೆಸ್ಟ್
Advertisement
Advertisement
ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ನಿಡಿದ್ದಾರೆ ಎಂಬ ಆರೋಪದ ಮೇಲೆ ಸದಾಶಿವನಗರ ಠಾಣೆಯಲ್ಲಿ ಬಿಎಸ್‍ವೈ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ನೀಡಿತ್ತು. ತನಿಖೆಗೆ ಹಾಜರಾಗುವಂತೆ ಬಿಎಸ್‍ವೈಗೆ ನೋಟಿಸ್ ಕೊಟ್ಟದ್ದರಿಂದ ಅವರು ಕಾಲಾವಕಾಶ ಕೇಳಿದ್ದರು. ಬಳಿಕ ತನಿಖೆಗೆ ಹಾಜರಾಗಿಲ್ಲ ಎಂದು ಸಿಐಡಿ ಅಧಿಕಾರಿಗಳು, ಅವರ ಬಂಧನಕ್ಕೆ ಅರೆಸ್ಟ್ ವಾರೆಂಟ್ ಪಡೆದಿದ್ದರು. ಬಳಿಕ ಬಿಎಸ್‍ವೈ ಮಧ್ಯಂತರ ಜಾಮೀನು ಪಡೆದಿದ್ದರು.
Advertisement
Advertisement
ಜಾಮೀನು ಪಡೆದ ಬಳಿಕ ಬಿಎಸ್‍ವೈ ಕೋರ್ಟ್ ನಿರ್ದೇಶನದಂತೆ ಸಿಐಡಿ ಅಧಿಕಾರಿಗಳ ಎದುರು ತನಿಖೆಗೆ ಹಾಜರಾಗಿದ್ದರು. ಇದೀಗ ತನಿಖೆ ನಡೆಸಿರುವ ಸಿಐಡಿ ಕೋರ್ಟ್‍ಗೆ ದೋಷಾರೋಪ ಪಟ್ಟಿ ಸಲ್ಲಿಸಿದೆ. ಇದನ್ನೂ ಓದಿ: ಸುಳ್ಳು ಅತ್ಯಾಚಾರ ಕೇಸ್ – ದೂರುದಾರೆ ಸೇರಿ 13 ಜನರಿಗೆ ಜೈಲು