ಬೆಂಗಳೂರು: ಸಂವಿಧಾನ ಧರ್ಮಕ್ಕಿಂತ ದೊಡ್ಡದು ಅಂತ ಹೈಕೋರ್ಟ್ ಈ ತೀರ್ಪು ಸಾಭೀತು ಪಡಿಸಿದೆ. ಸಂವಿಧಾನದ ಮೇಲೆ ನಂಬಿಕೆ ಇರುವವರು, ಎಲ್ಲರೂ ಉಚ್ಚನ್ಯಾಯಾಲಯದ ತೀರ್ಪು ಗೌರವಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.
Advertisement
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಂವಿಧಾನದ ಮೇಲೆ ನಂಬಿಕೆ ಇರುವವರು, ಎಲ್ಲರೂ ಉಚ್ಚನ್ಯಾಯಾಲಯದ ತೀರ್ಪು ಗೌರವಿಸಬೇಕು. ಈ ವಿಚಾರವನ್ನ ಅನಗತ್ಯವಾಗಿ ವಿವಾದ ಮಾಡದೆ, ಧರ್ಮ ನಿರಪೇಕ್ಷಿತವಾಗಿ ಸ್ವಾಗತಿಸಬೇಕು. ಎಲ್ಲರೂ ಇದನ್ನ ಗೌರವಿಸಿ, ಸ್ವಾಗತಿಸಬೇಕು ಎಂದು ಸಾರ್ವಜನಿಕರಲ್ಲಿ ಮನವಿ ಮಾಡುತ್ತೆನೆ ಎಂದು ಹೇಳಿದ್ದಾರೆ.
Advertisement
Advertisement
ಐತಿಹಾಸಿಕ ತೀರ್ಪು.?: ಹಿಜಬ್ ಇಸ್ಲಾಂ ಅಗತ್ಯವಾದ ಆಚರಣೆ ಅಲ್ಲ ಎಂದು ಹೈಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. ಅಷ್ಟೇ ಅಲ್ಲದೇ ಸರ್ಕಾರದ ಸಮವಸ್ತ್ರ ಆದೇಶವನ್ನು ಎತ್ತಿ ಹಿಡಿದಿದೆ. ಎಲ್ಲರೂ ಕೋರ್ಟ್ ಆದೇಶವನ್ನು ಪಾಲಿಸಬೇಕು ಎಂದು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾ. ಕೃಷ್ಣ ಎಸ್ ದೀಕ್ಷಿತ್ ಹಾಗೂ ಜೈಬುನ್ನೀಸಾ ಎಂ ಖಾಜಿ ನೇತೃತ್ವದ ಪೀಠ ಮನವಿ ಮಾಡಿದೆ. ಅಷ್ಟೇ ಅಲ್ಲದೇ ಸರ್ಕಾರದ ಆದೇಶವನ್ನು ಪ್ರಶ್ನಿಸಿ ತರಗತಿಗಳಲ್ಲಿ ಹಿಜಬ್ ಧರಿಸಲು ಅನುಮತಿ ಕೋರಿ ಸಲ್ಲಿಸಲಾಗಿದ್ದ ಎಲ್ಲ ಅರ್ಜಿಯನ್ನು ಪೀಠ ವಜಾ ಮಾಡಿದೆ.