ಶಿವಮೊಗ್ಗ: ನವರಾತ್ರಿ ಹಾಗೂ ದಸರಾ ಹಬ್ಬದ ಹಿನ್ನಲೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ (B.S. Yediyurappa) ಅವರು ಸಾಗರ ತಾಲೂಕಿನ ಸಿಗಂದೂರು ಚೌಡೇಶ್ವರಿ ದೇವಾಲಯಕ್ಕೆ (Sigandur Chowdeshwari Temple) ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ನಾಡಿನ ಸಮೃದ್ಧಿ ಹಾಗೂ ಸರ್ವಾಂಗೀಣ ಅಭಿವೃದ್ಧಿ ಆಗುವಂತೆ ಚೌಡೇಶ್ವರಿ ದೇವಿಯಲ್ಲಿ ಬಿಎಸ್ ವೈ ಪ್ರಾರ್ಥಿಸಿದರು. ಇದೇ ವೇಳೆ ಸಿಗಂದೂರಿಗೆ ಸಂಪರ್ಕ ಕಲ್ಪಿಸಲು ಶರಾವತಿ ನದಿಗೆ ಕಟ್ಟುತ್ತಿರುವ ಸೇತುವೆ ಕಾಮಗಾರಿ ವೀಕ್ಷಣೆ ನಡೆಸಿದರು. ಇದನ್ನೂ ಓದಿ: ಮುಡಾದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ಆರೋಪ – 8 ಲಕ್ಷ ದಾಖಲಾತಿ ನೀಡುವಂತೆ ಜಸ್ಟಿಸ್ ದೇಸಾಯಿ ಆಯೋಗ ಸೂಚನೆ
ದೇವಿಯ ಆಶೀರ್ವಾದ ಪಡೆದು ಬಳಿಕ ತೆರಳಿದ್ದಾರೆ. ಈ ವೇಳೆ ಸಂಸದ ರಾಘವೇಂದ್ರ ಹಾಗೂ ಸ್ಥಳೀಯ ಮುಖಂಡರು ಬಿಎಸ್‍ವೈಗೆ ಸಾಥ್ ನೀಡಿದ್ದಾರೆ.
ಈ ಸೇತುವೆ ಕಾಮಗಾರಿ ಶೀಘ್ರವಾಗಿ ಮುಗಿದರೆ ಭಕ್ತರಿಗೆ ದೇವಸ್ಥಾನಕ್ಕೆ ಬಂದು ಹೋಗಲು ಅನುಕೂಲ ಆಗುತ್ತದೆ. ಕಾಮಗಾರಿ ಶೀಘ್ರವಾಗಿ ಮುಗಿಸುವಂತೆ ಅಧಿಕಾರಿಗಳಿಗೆ ಸೂಚಿಸುವಂತೆ ಸಂಸದ ಬಿ.ವೈ.ರಾಘವೇಂದ್ರ ಅವರಿಗೆ ತಿಳಿಸಿದರು. ಇದನ್ನೂ ಓದಿ: ನನ್ನ ಬದುಕು ಇರೋದು ನಿಮ್ಮ ಋಣ ತೀರಿಸೋಕೆ, ನಿಮ್ಮ ಮನೆ ಮಗನಿಗೆ ಹಾಲಾದ್ರೂ ಕೊಡಿ, ವಿಷವಾದ್ರೂ ಕೊಡಿ: ಹೆಚ್‌ಡಿಕೆ ಭಾವುಕ