Connect with us

ಬಿಎಸ್‍ವೈ ದುರ್ಬಲ ಸಿಎಂ, ದುರ್ಬಲ ಬಿಜೆಪಿ ಹೈಕಮಾಂಡ್: ಸಿದ್ದರಾಮಯ್ಯ ವ್ಯಂಗ್ಯ

ಬಿಎಸ್‍ವೈ ದುರ್ಬಲ ಸಿಎಂ, ದುರ್ಬಲ ಬಿಜೆಪಿ ಹೈಕಮಾಂಡ್: ಸಿದ್ದರಾಮಯ್ಯ ವ್ಯಂಗ್ಯ

ಬೆಂಗಳೂರು: ಸಿಎಂ ಯಡಿಯೂರಪ್ಪ ದುರ್ಬಲ ಮುಖ್ಯಮಂತ್ರಿ, ಬಿಜೆಪಿ ಹೈಕಮಾಂಡ್ ದುರ್ಬಲ ಹೈಕಮಾಂಡ್ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಬದಲಾವಣೆ ಇಲ್ಲ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ. ಆದರೆ ಬೆಂಕಿ ಇಲ್ಲದೇ ಹೊಗೆಯಾಡುವುದಿಲ್ಲ. ಯಡಿಯೂರಪ್ಪ ಅವರನ್ನು ಬದಲಿಸಿ ಎಂದು ನಾವ್ಯಾರೂ ಒತ್ತಾಯ ಮಾಡಿಲ್ಲ. ಆ ಬಗ್ಗೆ ದೆಹಲಿಯಲ್ಲಿ ಚರ್ಚೆ ನಡೆಯುತ್ತಿದೆ ಎಂದು ಹೇಳಿದ್ದೆ. ಒಂದು ವೇಳೆ ಮುಖ್ಯಮಂತ್ರಿ ಬದಲಾವಣೆ ಇಲ್ಲ ಎಂದಾದರೆ ಶಾಸಕರಾದ ಬಸನಗೌಡ ಯತ್ನಾಳ್, ಅರವಿಂದ ಬೆಲ್ಲದ್, ವಿಶ್ವನಾಥ್, ರೇಣುಕಾಚಾರ್ಯ ಹಾಗೂ ಸಚಿವ ಯೋಗೇಶ್ವರ್ ವಿರುದ್ಧ ಬಿಜೆಪಿ ಹೈಕಮಾಂಡ್ ಯಾಕೆ ಕ್ರಮ ಕೈಗೊಂಡಿಲ್ಲ ಎಂದು ಪ್ರಶ್ನಿಸಿದರು.

ಬಿಜೆಪಿಯಲ್ಲಿ ಮುಖ್ಯಮಂತ್ರಿ ಹಾಗೂ ಹೈಕಮಾಂಡ್ ಎರಡೂ ದುರ್ಬಲ. ಅರುಣ್ ಸಿಂಗ್ ಬದಲಾವಣೆ ಬಗ್ಗೆ ಮಾತನಾಡಬೇಡಿ ಎಂದಿದ್ದಾರೆ. ಹಾಗಾದರೆ ಬದಲಾವಣೆ ಆಗಬೇಕು ಎಂದವರ ವಿರುದ್ಧ ಏಕೆ ಕ್ರಮವಿಲ್ಲ. ಇದರಿಂದ ರವಾನೆಯಾಗುವ ಸಂದೇಶ ಏನು? ಯಡಿಯೂರಪ್ಪ ಅವರೇ ಕಳಪೆ ಮುಖ್ಯಮಂತ್ರಿ. ಇನ್ನು ಬೇರೆಯವರು ಹೇಗಿರಬೇಕು ಎಂದು ಸಿದ್ದರಾಮಯ್ಯ ಅವರು ಪ್ರಶ್ನಿಸಿದರು. ಇದನ್ನೂ ಓದಿ:  ಚಿತೆಗೆ ಹಚ್ಚಿದ ಜ್ವಾಲೆ ಆರಿಲ್ಲ -ಬಿಜೆಪಿ ನಾಯಕತ್ವ ಕಿತ್ತಾಟಕ್ಕೆ ಮಾಜಿ ಸಿಎಂ ಎಚ್‌ಡಿಕೆ ಕಿಡಿ

ಅರುಣ್ ಸಿಂಗ್ ಹೇಳಿದ್ದೇನು?: ಯಡಿಯೂರಪ್ಪ ಬದಲಾವಣೆ, ರಾಜ್ಯಾಧ್ಯಕ್ಷರ ಬದಲಾವಣೆಯೂ ಇಲ್ಲ ಎಂದು ಸ್ಪಷ್ಟಪಡಿಸುವ ಪ್ರಯತ್ನ ಮಾಡಿದರು. ಸ್ಥಾನ ಬದಲಾವಣೆ ಕೇವಲ ಕಾಲ್ಪನಿಕ. ಯಡಿಯೂರಪ್ಪ ಉತ್ತಮ ಕೆಲಸ ಮಾಡುತ್ತಿದ್ದಾರೆ. ಯಡಿಯೂರಪ್ಪ ಬದಲಾವಣೆ ಬಗ್ಗೆ ಹೈಕಮಾಂಡ್ ನಿರ್ಧಾರ ಮಾಡಿಲ್ಲ ಎಂದರು. ಇದನ್ನೂ ಓದಿ: ನಾಯಕತ್ವ ಬದಲಾವಣೆಯನ್ನು ಪರೋಕ್ಷವಾಗಿ ಒಪ್ಪಿಕೊಂಡ ಸಚಿವ ಯೋಗೇಶ್ವರ್ 

Advertisement
Advertisement