ಬೆಂಗಳೂರು: ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ತುಮಕೂರಿಗೆ ಹೊರಟ್ಟಿದ್ದಾರೆ.
ಈ ಬಗ್ಗೆ ಮಾತನಾಡಿದ ಬಿಎಸ್‍ವೈ, “ಶ್ರೀಗಳ ಆರೋಗ್ಯದ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಬಂದಿದೆ. ಹಾಗಾಗಿ ನಾನು ತುಮಕೂರಿಗೆ ಹೊರಡುತ್ತಿದ್ದೇನೆ. ಇಂದು ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಬರ ಅಧ್ಯಯನ ಪ್ರವಾಸ ಇತ್ತು. ಶ್ರೀಗಳ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಪ್ರವಾಸ ರದ್ದು ಮಾಡಿದ್ದೇನೆ. ವೈದ್ಯರಿಗೂ ಸಂಪರ್ಕ ಮಾಡಿ ಮಾಹಿತಿ ಪಡೆದಿದ್ದೇನೆ. ಅದಕ್ಕೆ ತಕ್ಷಣ ತುಮಕೂರಿಗೆ ಹೊರಟಿದ್ದೇನೆ ಎಂದು ಡಾಲರ್ಸ್ ಕಾಲೋನಿಯಲ್ಲಿ ಹೇಳಿದ್ದಾರೆ.
Advertisement
ಈ ವೇಳೆ ಕಾಂಗ್ರೆಸ್ ನ ಶಾಸಕರು ಇನ್ನು ರೆಸಾರ್ಟ್ ನಲ್ಲೇ ಉಳಿದಿರುವುದಕ್ಕೆ ಬಿಎಸ್ ಯಡಿಯೂರಪ್ಪ ಪ್ರತಿಕ್ರಿಯೇ ನೀಡಲು ನಿರಾಕರಿಸಿದ್ದಾರೆ.
Advertisement
Advertisement
ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಸ್ವಲ್ಪ ಏರುಪೇರಾಗಿದ್ದು, ಹಳೆ ಮಠದಲ್ಲೇ ಶ್ರೀಗಳಿಗೆ ಚಿಕಿತ್ಸೆ ಮುಂದುವರಿದಿದೆ. ಡಾ.ಪರಮೇಶ್ ನೇತೃತ್ವದ ತಂಡ ಶ್ರೀಗಳಿಗೆ ಚಿಕಿತ್ಸೆ ನೀಡುತ್ತಿದ್ದು, ಶ್ರೀಗಳು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಭಕ್ತರು ಶ್ರೀಗಳು ಚಿಕಿತ್ಸೆ ಪಡೆಯುತ್ತಿದ್ದ ಕೋಣೆಯ ಕಿಟಿಕಿಯ ಮೂಲಕ ದರ್ಶನ ಪಡೆದು ಹೋಗುತ್ತಿದ್ದರು. ಬೆಳಗ್ಗಿನ ಜಾವ ಸುಮಾರು 4 ಗಂಟೆಗೆ ಶ್ರೀಗಳಿಗೆ ರಕ್ತದ ಒತ್ತಡ ಮತ್ತು ಉಸಿರಾಟದಲ್ಲಿ ಕೊಂಚ ಏರುಪೇರು ಕಂಡು ಬಂದಿದ್ದು, ತಕ್ಷಣ ಅವರಿಗೆ ಚಿಕಿತ್ಸೆ ನೀಡಲಾಗಿತ್ತು. ಆದರೂ ಮತ್ತೆ ಆರೋಗ್ಯದಲ್ಲಿ ಕೊಂಚ ಏರುಪೇರು ಕಂಡು ಬಂದಿದೆ. ಈಗ ಶ್ರೀಗಳಿಗೆ ಕೃತಕ ಉಸಿರಾಟ ನೀಡಲಾಗುತ್ತಿದೆ. ಆದರೆ ಶ್ರೀಗಳಿಗಳಿಗೆ ನಿಶ್ಯಕ್ತಿ ತುಂಬಾ ಕಡಿಮೆ ಇದ್ದು, ಕಳೆದ ದಿನ ಆಯುರ್ವೇದಿಕ್ ಚಿಕಿತ್ಸೆ ನೀಡಲಾಗಿದೆ. ಈಗ ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದಾರೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv