ಬೆಂಗಳೂರು: ಬಹುಭಾಷಾ ನಟಿ ಬಿ.ಸರೋಜಾದೇವಿ (B.Sarojadevi) ಅವರು ಭಾರತೀಯ ಚಿತ್ರರಂಗದ ಇತಿಹಾಸದಲ್ಲಿ ಅತ್ಯಂತ ಯಶಸ್ವಿ ನಟಿಯರಲ್ಲಿ ಒಬ್ಬರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ಅವರು ಸಂತಾಪ ಸೂಚಿಸಿದ್ದಾರೆ.ಇದನ್ನೂ ಓದಿ: 1 ಲಕ್ಷ ಹಣ, ಉಂಗುರ ನೀಡಿ ಕಲಾವಿದರನ್ನು ಸನ್ಮಾನಿಸಿ ಪ್ರಚಾರದಿಂದ ದೂರ ಇರುತ್ತಿದ್ರು : ಗಿರಿಜಾ ಲೋಕೇಶ್
ಬಿ.ಸರೋಜಾದೇವಿ ಅವರು ಕನ್ನಡ, ತಮಿಳು, ತೆಲುಗು ಮತ್ತು ಹಿಂದಿ ಚಿತ್ರರಂಗಗಳಲ್ಲಿ ನಟಿಸಿ ಹೆಸರುವಾಸಿಯಾಗಿದ್ದು, 200ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದರು. ಅವರನ್ನು ಕನ್ನಡದಲ್ಲಿ `ಅಭಿನಯ ಸರಸ್ವತಿ’ ಎಂಬ ಉಪನಾಮದಿಂದ ಕರೆಯುತ್ತಿದ್ದರು. ಅವರಿಗೆ ಹತ್ತಾರು ಪ್ರಶಸ್ತಿಗಳೂ ಲಭಿಸಿದ್ದವು ಎಂದು ತಿಳಿಸಿದ್ದಾರೆ.
ಮೃತರ ಕುಟುಂಬಕ್ಕೆ, ಬಂಧುಮಿತ್ರರಿಗೆ ಮತ್ತು ಅಭಿಮಾನಿಗಳಿಗೆ ಅಗಲುವಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ಮೃತರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಪ್ರಾರ್ಥಿಸಿದ್ದಾರೆ.ಇದನ್ನೂ ಓದಿ: ಶಕ್ತಿಗೆ ಇಂದು 500 ಕೋಟಿ ಟಿಕೆಟ್ ಸಂಭ್ರಮ- ಕಂಡಕ್ಟರ್ ಆಗಿ ಟಿಕೆಟ್ ಹಂಚಿದ ಸಿಎಂ