– ಎರಡು ವಾರ ಕಠಿಣ ಪರಿಸ್ಥಿತಿ
ಹಾವೇರಿ: ರಾಜ್ಯದಲ್ಲಿ ಈವರೆಗೆ 260 ಜನರಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಅದರಲ್ಲಿ 71 ಜನ ಈಗಾಗಲೇ ಗುಣಮುಖರಾಗಿದ್ದಾರೆ. ಮುಂದಿನ ಎರಡು ವಾರಗಳ ಕಾಲ ಕಠಿಣ ಪರಿಸ್ಥಿತಿ ಇದೆ. ಅದನ್ನು ಎದುರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ತಿಳಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಲ್ಲೆಲ್ಲಿ ಸೂರ್ಯನ ಕಿರಣ ಹೆಚ್ಚು ಬೀಳುತ್ತಿವೆಯೋ ಅಲ್ಲಿ ಕೊರೊನಾ ಸೋಂಕಿನಿಂದ ಬಳಲುತ್ತಿರುವವರು ಹೆಚ್ಚು ಗುಣಮುಖರಾಗುತ್ತಿದ್ದಾರೆ. ಈವರೆಗೆ ರಾಜ್ಯದಲ್ಲಿ ಪ್ರಾಥಮಿಕ ಟೆಸ್ಟ್ ಮಾತ್ರ ಮಾಡುತ್ತಿದ್ದೆವು. ಈಗ ಎರಡನೇ ಹಂತದ ಟೆಸ್ಟ್ ಮಾಡಲು ಪ್ರಾರಂಭ ಮಾಡಿದ್ದೇವೆ. ಇತ್ತೀಚೆಗೆ ನಡೆದ ಕ್ಯಾಬಿನೇಟ್ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ ಎಂದರು.
Advertisement
ಇಂದು ಸಂಜೆ 5 ಗಂಟೆಯ ವರದಿಯಂತೆ, ಕರ್ನಾಟಕದಲ್ಲಿ ಒಟ್ಟಾರೆಯಾಗಿ 260 #COVID19 ಪ್ರಕರಣಗಳು ಖಚಿತವಾಗಿರುತ್ತದೆ. ಅವರ ಪೈಕಿ 71 ಜನರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿರುತ್ತಾರೆ. #IndiaFightsCorona #ಮನೆಯಲ್ಲೇಇರಿ
— B Sriramulu (@sriramulubjp) April 14, 2020
Advertisement
ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಾಡುತ್ತಿದ್ದೇನೆ. ಎಲ್ಲೆಲ್ಲಿ ಏನೇನು ಸ್ಥಿತಿಗತಿ ಇದೆ ಎನ್ನುವುದರ ಬಗ್ಗೆ ಸಿಎಂ ಯಡಿಯೂರಪ್ಪ ಮಾನಿಟರ್ ಮಾಡುತ್ತಿದ್ದಾರೆ. ಕೊರೊನಾ ಹರಡುವುದನ್ನು ತಡೆಯಲು ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತಿದ್ದೇವೆ ಎಂದರು.