ಮೈಸೂರು: ಸಿದ್ದರಾಮಯ್ಯ ಮೀರ್ ಸಾಧಿಕ್ ರಾಜಕಾರಣಿ. ಹಿಂದುಳಿದ ವರ್ಗಗಳ ಬಗ್ಗೆ ಅವರಿಗೆ ಕಾಳಜಿ ಇಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧ ಸಚಿವ ಬಿ. ಶ್ರೀರಾಮುಲು (B Sriramulu) ಟೀಕಿಸಿದರು.
ಮೈಸೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಘಟಾನುಘಟಿ ದಲಿತ ನಾಯಕರನ್ನು ಸಿದ್ದರಾಮಯ್ಯ ವ್ಯವಸ್ಥಿತವಾಗಿ ಮುಗಿಸಿದರು. ಮಲ್ಲಿಕಾರ್ಜುನ ಖರ್ಗೆ, ಶ್ರೀನಿವಾಸ ಪ್ರಸಾದ್, ಪರಮೇಶ್ವರ್ ಹೀಗೆ ಘಟಾನುಘಟಿ ನಾಯಕರನ್ನು ಸಿದ್ದರಾಮಯ್ಯ ರಾಜಕೀಯವಾಗಿ ಮುಗಿಸಿದರು ಎಂದರು. ಇದನ್ನೂ ಓದಿ: KPCC ಯಲ್ಲಿ ಭಿನ್ನಮತ ಸ್ಫೋಟ – ಪುಷ್ಪಾ ಅಮರನಾಥ್ ವಜಾಕ್ಕೆ ಆಗ್ರಹ
Advertisement
Advertisement
ಎಸ್ಸಿ-ಎಸ್ಟಿ ಮೀಸಲಾತಿ ಅನುಷ್ಠಾನ ವಿಚಾರದಲ್ಲಿ ಕಾಂಗ್ರೆಸ್ (Congress) ಹಾಗೂ ಜೆಡಿಎಸ್ (JDS) ಕ್ರೆಡಿಟ್ ವಾರ್ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಮೀಸಲಾತಿ ಹೆಚ್ಚಳ ಸಂಬಂಧ ಯಾರ ಕಾಲದಲ್ಲೋ ಸಮಿತಿ ರಚನೆ ಆಗಿರಬಹುದು. ಆದರೆ ಮೀಸಲಾತಿ ಹೆಚ್ಚಳ ಅನುಷ್ಠಾನಕ್ಕೆ ತಂದಿರುವುದು ನಮ್ಮ ಸರ್ಕಾರ. ಅವರಿಗೆ ರಾಜಕೀಯ ಇಚ್ಛಾಶಕ್ತಿಯ ಕೊರತೆಯಿದೆ. ಹೀಗಾಗಿ ಮೀಸಲಾತಿ ಹೆಚ್ಚಳ ಅನುಷ್ಠಾನಕ್ಕೆ ತಂದಿರಲಿಲ್ಲ. ನಮಗೆ ರಾಜಕೀಯ ಇಚ್ಛಾಶಕ್ತಿ ಇರುವುದರಿಂದ ಮೀಸಲಾತಿ ಹೆಚ್ಚಳ ಅನುಷ್ಠಾನಕ್ಕೆ ತಂದಿದ್ದೇವೆ. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಅವರ ಇಚ್ಛಾಶಕ್ತಿಯಿಂದ ಮೀಸಲಾತಿ ಹೆಚ್ಚಳ ಅನುಷ್ಠಾನಗೊಂಡಿದೆ ಎಂದರು. ಇದನ್ನೂ ಓದಿ: ಭಾರತ್ ಜೋಡೋ ಯಶಸ್ಸಿನ ಬಳಿಕ ರಾಜ್ಯದಲ್ಲಿ ಕಾಂಗ್ರೆಸ್ ನಾಯಕರಿಂದ ಟ್ರ್ಯಾಕ್ಟರ್ ಯಾತ್ರೆ