– ಖರ್ಗೆ, ಸೋನಿಯಾ ಗಾಂಧಿ, ಶರದ್ ಪವಾರ್, ಪ್ರಿಯಾಂಕಾ ಗಾಂಧಿ ಸಾಥ್
ನವದೆಹಲಿ: ಸುಪ್ರೀಂಕೋರ್ಟ್‌ನ ನಿವೃತ್ತ ನ್ಯಾಯಾಧೀಶರಾದ ನ್ಯಾಯಮೂರ್ತಿ ಬಿ ಸುದರ್ಶನ್ ರೆಡ್ಡಿ (B.Sudershan Reddy) ಅವರು ಸೆಪ್ಟೆಂಬರ್ 9ರಂದು ನಡೆಯಲಿರುವ ಉಪ ರಾಷ್ಟ್ರಪತಿ ಚುನಾವಣೆಗೆ (Vice President Election) ಇಂಡಿಯಾ ಬಣದ ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಸಿದರು.
ಎನ್‌ಡಿಎ ಮೈತ್ರಿಕೂಟದಿಂದ ಸಿ.ಪಿ.ರಾಧಾಕೃಷ್ಣನ್ (C.P Radhakrishnan) ವಿರುದ್ಧ ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಚುನಾವಣೆಗೆ ಅವರು ಕಣಕ್ಕಿದಿದ್ದಾರೆ. ನಾಮಪತ್ರ ಸಲ್ಲಿಕೆ ವೇಳೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಸೇರಿದಂತೆ ಇಂಡಿಯಾ ಒಕ್ಕೂಟದ ಮೈತ್ರಿ ನಾಯಕರು ಉಪಸ್ಥಿತರಿದ್ದರು.
As the Chairperson of the Rajya Sabha, the Vice President is tasked with upholding the highest traditions of Parliamentary Democracy.
The candidature of Shri B. Sudarshen Reddy garu is a message to the tyranny unleashed by the Modi Govt on every institution.
Our Joint… pic.twitter.com/s6Ap8vKwZ0
— Mallikarjun Kharge (@kharge) August 21, 2025
ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್, ಎಸ್‌ಪಿ ನಾಯಕ ರಾಮಗೋಪಾಲ್ ಯಾದವ್, ಡಿಎಂಕೆಯ ತಿರುಚಿ ಶಿವ, ಟಿಎಂಸಿಯ ಶತಾಬ್ದಿ ರಾಯ್, ಶಿವಸೇನೆಯ ಸಂಜಯ್ ರಾವತ್ ಹಾಗೂ ಮೈತ್ರಿಕೂಟದ ಹಲವಾರು ನಾಯಕರು ಉಪಸ್ಥಿತರಿದ್ದರು.
ಉಪ ರಾಷ್ಟ್ರಪತಿ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನಾಂಕವಾಗಿದ್ದು, ಆ.25 ರವರೆಗೆ ನಾಮಪತ್ರಗಳನ್ನು ಹಿಂಪಡೆಯಬಹುದು. ಸೆಪ್ಟೆಂಬರ್ 9 ರಂದು ಚುನಾವಣೆ ನಡೆಯಲಿದ್ದು, ಮತದಾನದ ದಿನದಂದೇ ಮತ ಎಣಿಕೆಯೂ ನಡೆಯಲಿದೆ.