ಬೆಂಗಳೂರು: ಇಂದು ಭಾರತ (India) ಮತ್ತು ಆಸ್ಟ್ರೇಲಿಯಾ (Australia) ನಡುವಿನ ವಿಶ್ವಕಪ್ ಫೈನಲ್‌ಗೆ (World Cup Final) ಕ್ಷಣಗಣನೆ ಆರಂಭವಾಗಿದ್ದು, ಪಂದ್ಯ ವೀಕ್ಷಣೆಗಾಗಿ ಕ್ರಿಕೆಟ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಈ ಹಿನ್ನೆಲೆ ರಾಜ್ಯದ ಅನೇಕ ಜಿಲ್ಲೆಯ ಅಭಿಮಾನಿಗಳು ವಿವಿಧ ರೀತಿಯಲ್ಲಿ ಟೀಂ ಇಂಡಿಯಾಗೆ ಶುಭಕೋರಿದ್ದಾರೆ.
ವಿಶ್ವಕಪ್ ಹಿನ್ನೆಲೆ ಸಂಸದ ಬಿವೈ ರಾಘವೇಂದ್ರ (BY Raghavendra) ಶಿವಮೊಗ್ಗದ (Shivamogga) ನೆಹರು ಕ್ರೀಡಾಂಗಣದಲ್ಲಿ ಲೆದರ್ ಬಾಲ್ ಮೇಲೆ ಸಹಿ ಮಾಡಿ ಭಾರತ ತಂಡಕ್ಕೆ ಶುಭ ಕೋರಿದ್ದಾರೆ. ಮೂರನೇ ಬಾರಿ ಭಾರತ ತಂಡ ವಿಶ್ವಕಪ್ ಗೆಲ್ಲುವ ವಿಶ್ವಾಸ ಹೊಂದಿದ್ದು, ಮೋದಿ ಅವರ ತವರಿನಲ್ಲಿ ಈ ಪಂದ್ಯ ನಡೆಯುತ್ತಿದೆ. ಈ ರೋಚಕ ಪಂದ್ಯಕ್ಕಾಗಿ ಇಡೀ ವಿಶ್ವವೇ ಕಾತುರದಿಂದ ಕಾಯುತ್ತಿದೆ ಎಂದಿದ್ದಾರೆ. ಇದನ್ನೂ ಓದಿ: ವಿಶ್ವಕಪ್ 2023- ಜೀತೆಗಾ ಹಿಂದೂಸ್ತಾನ್ ಜೀತೆಗಾ ಎಂದ ಜಿಲ್ಲೆಯ ಕ್ರೀಡಾಭಿಮಾನಿಗಳು
Advertisement
Advertisement
ಇನ್ನು ಏಕದಿನ ವಿಶ್ವಕಪ್ ಮ್ಯಾಚ್‌ನಲ್ಲಿ ಭಾರತದ ಗೆಲುವಿಗಾಗಿ ಅಯ್ಯಪ್ಪ ಮಾಲಾಧಾರಿಗಳು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕೇರಳದ ಗುರುವಾಯೂರಿನಲ್ಲಿ ಕರ್ನಾಟಕದ ಅಯ್ಯಪ್ಪ ಭಕ್ತರು ಟೀಂ ಇಂಡಿಯಾ ಗೆಲುವಿಗೆ ಪಾರ್ಥನೆ ಮಾಡಿದ್ದಾರೆ. ಚಾಮರಾಜನಗರ ಜಿಲ್ಲೆ ಹನೂರಿನ ಅಯ್ಯಪ್ಪ ಭಕ್ತರು ಶಬರಿಮಲೆ ಯಾತ್ರೆ ಹೊರಟಿದ್ದು, ಗುರುವಾಯೂರು ಕೃಷ್ಣ ಚೋಟಾನಿಕೆರೆ ಭಗವತಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಅಲ್ಲದೇ ಭಾರತ ಗೆದ್ದರೆ ಟೀಂ ಇಂಡಿಯಾ ಹೆಸರಿನಲ್ಲಿ ಶಬರಿಮಲೆಯಲ್ಲಿ ವಿಶೇಷ ಪೂಜೆ ಮಾಡಿಸುವುದಾಗಿ ಹರಕೆ ಹೊತ್ತಿದ್ದಾರೆ. ಇದನ್ನೂ ಓದಿ: World Cup 2023 – ಚಿನ್ನದಲ್ಲಿ ವಿಶ್ವಕಪ್ ತಯಾರಿಸಿದ ಬೆಂಗಳೂರಿನ ಅಕ್ಕಸಾಲಿಗ
Advertisement
Advertisement
ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದ ಅವಜೀಕರ ಮಠದಲ್ಲಿ ಮಠದ ಕಿರಿಯ ಪೀಠಾಧಿಪತಿ ಅಭಿನವ ಶ್ರೀಗಳು ವಿಶೇಷ ಪೂಜೆ ಮಾಡಿದ್ದಾರೆ. ಟೀಂ ಇಂಡಿಯಾ ಗೆಲುವಿಗಾಗಿ ಅವಜೀಕರ ಗದ್ದುಗೆ ಹಾಗೂ ಆಂಜನೇಯನಿಗೆ ಶ್ರೀಗಳು ವಿಶೇಷ ಪೂಜೆ ಸಲ್ಲಿಸಿದ್ದು, ಭಾರತ ಗೆದ್ದು ಬರಲಿ ಎಂದು ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ಕೆಲವೇ ಕ್ಷಣಗಳಲ್ಲಿ ವಿಶ್ವಕಪ್ ಫೈನಲ್ ಪಂದ್ಯ ನಡೆಯುವ ಹಿನ್ನೆಲೆ ಕೋಲಾರದಲ್ಲಿ ಯುವಕರು ಟೀಂ ಇಂಡಿಯಾಗೆ ಶುಭಾಶಯ ಕೋರಿದ್ದಾರೆ. ಯುವಕರಿಂದ ಚಿಯರ್ ಅಪ್, ಕ್ರಿಕೆಟ್ ಅಭಿಮಾನಿಗಳಿಂದ ರೋಹಿತ್ ಪಡೆಗೆ ಶುಭಾಶಯ ಕೋರಿದ್ದು, ಫೈನಲ್ ಕ್ರಿಕೆಟ್ ಮ್ಯಾಚ್ ವೀಕ್ಷಣೆಗೆ ಸಜ್ಜಾಗಿದ್ದಾರೆ. ಇದನ್ನೂ ಓದಿ: 13 ವಿಶ್ವಕಪ್‍ನಲ್ಲಿ 8ನೇ ಬಾರಿ ಫೈನಲ್- 5 ಬಾರಿ ಚಾಂಪಿಯನ್ ಆಗಿರೋ ಆಸ್ಟ್ರೇಲಿಯಾ
ಇನ್ನು ದಾವಣಗೆರೆಯ ಆಂಜನೇಯ ದೇವಸ್ಥಾನದಲ್ಲಿ ಸ್ಕೂಲ್ ಮಕ್ಕಳು ಆಂಜನೇಯನಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಶಾಮನೂರು ತಿಮ್ಮಾರೆಡ್ಡಿ ಶಾಲಾ ಮಕ್ಕಳು ದೇವರ ಮೊರೆ ಹೋಗಿದ್ದು, ಶಾಲಾ ಆಡಳಿತ ಮಂಡಳಿ ಮತ್ತು ಮಕ್ಕಳು ಆಂಜನೇಯ ಪಾದದ ಬಳಿ ವರ್ಲ್ಡ್ಕಪ್ ಇಟ್ಟು ಪೂಜೆ ಸಲ್ಲಿಸಿದ್ದಾರೆ. ತಂಡ ಸತತವಾಗಿ 10 ಮ್ಯಾಚ್ ಗೆದ್ದು ಪೈನಲ್ ತಲುಪಿದೆ. ವಿಶ್ವಕಪ್ ಗೆಲ್ಲುವ ಫೇವರಿಟ್ ತಂಡ ಭಾರತ. ಆದರು ಕೂಡ ದೈವದ ಅನುಗ್ರಹ ಇರಲಿ ಅಂತ ವಿಶೇಷ ಪೂಜೆ ಸಲ್ಲಿಸಲಾಗಿದೆ. ಇನ್ನು ದಾವಣಗೆರೆಯಲ್ಲಿ ಕ್ರಿಕೆಟ್ ಕ್ರೇಜ್ ಜೋರಾಗಿದ್ದು, ತಿಮ್ಮಾರೆಡ್ಡಿ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್‌ನಲ್ಲಿ 30 ಅಡಿ ಎತ್ತರದ ದೊಡ್ಡ ಎಲ್‌ಇಡಿ ಪರದೆ ಅಳವಡಿಸುವ ಮೂಲಕ ಇಂದು ಫೈನಲ್ ಫೈಟ್ ವೀಕ್ಷಿಸಲು ಶಾಲಾ ಆಡಳಿತ ಮಂಡಳಿಯಿಂದ ಬಿಗ್ ಸ್ಕ್ರೀನ್ ವ್ಯವಸ್ಥೆ ಮಾಡಲಾಗಿದೆ. ಇದನ್ನೂ ಓದಿ: World Cup 2023: ರಾಜ್ಯದ ಎಲ್ಲಾ ಜಿಲ್ಲಾ ಕ್ರೀಡಾಂಗಣಗಳಲ್ಲಿ ದೊಡ್ಡ ಪರದೆಯಲ್ಲಿ ನೇರಪ್ರಸಾರದ ವ್ಯವಸ್ಥೆ
ಅದೇ ರೀತಿ ಭಾರತ ವಿಶ್ವಕಪ್ ಗೆಲುವಿಗಾಗಿ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಸಿಗಂಧೂರು ಚೌಡೇಶ್ವರಿ ದೇವಾಲಯದಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಚಂಡಿಕಾ ಹೋಮ ನಡೆಸಿದ್ದು, ಭಾರತದ ಗೆಲುವಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಗಿದೆ. ಇದನ್ನೂ ಓದಿ: ಶಮಿ ಕೈಯಲ್ಲಿ ಬೆಂಕಿ ಚೆಂಡು- ಕಾಂಗರೂಗಳ ನಿದ್ದೆಗೆಡಿಸಿರೋ ಸ್ವಿಂಗ್ ಮಾಸ್ಟರ್