ಶಿವಮೊಗ್ಗ: ಪಬ್ಲಿಕ್ ಟಿವಿಯ (Public TV) ಶಿವಮೊಗ್ಗ (Shivamogga) ಜಿಲ್ಲಾ ವರದಿಗಾರ ಕೆ.ವಿ ಶಶಿಧರ್ (K.V Shashidhar) ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (BY Vijayendra) ಸಂತಾಪ ಸೂಚಿಸಿದ್ದಾರೆ.
ಪಬ್ಲಿಕ್ ಟಿವಿಯ ಶಿವಮೊಗ್ಗ ಜಿಲ್ಲಾ ವರದಿಗಾರ ಶ್ರೀ ಕೆ.ವಿ ಶಶಿಧರ್ ಅವರ ನಿಧನಕ್ಕೆ ಸಂತಾಪ ಕೋರುವೆ. ಕಳೆದ 16 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದ ಅವರ ಕುಟುಂಬ ವರ್ಗದವರಿಗೆ ಅವರ ಅಗಲಿಕೆಯ ದುಃಖ ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ಶಶಿಧರ್ ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ.
ಓಂ ಶಾಂತಿ 🙏 pic.twitter.com/y7upezgo1u
— Vijayendra Yediyurappa (@BYVijayendra) January 11, 2025
Advertisement
ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಕಳೆದ 16 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದ ಅವರ ಕುಟುಂಬ ವರ್ಗದವರಿಗೆ ಅವರ ಅಗಲಿಕೆಯ ದುಃಖ ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ಶಶಿಧರ್ ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಬರೆದುಕೊಂಡಿದ್ದಾರೆ.
Advertisement
Advertisement
ಅನಾರೋಗ್ಯದಿಂದ ಬಳಲುತ್ತಿದ್ದ ಶಶಿಧರ್ ಇಂದು (ಶನಿವಾರ) ಸಂಜೆ ಅಕಾಲಿಕ ನಿಧನ ಹೊಂದಿದ್ದಾರೆ. ಕಳೆದ 6 ವರ್ಷಗಳಿಂದ ಶಿವಮೊಗ್ಗ ಜಿಲ್ಲಾ ಹಿರಿಯ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದರು. ಶಶಿಧರ್ ಮೂಲತಃ ಅರಸೀಕೆರೆ ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದವರಾಗಿದ್ದು, 40 ವರ್ಷ ವಯಸ್ಸಾಗಿತ್ತು.