– ಮುಸ್ಲಿಮರ ಓಲೈಕೆಗಾಗಿ ಸಂವಿಧಾನ ವಿರೋಧಿ ನೀತಿ – ವಿಜಯೇಂದ್ರ ಕಿಡಿ
ಕಲಬುರಗಿ: ಮೀಸಲಾತಿ ಸಂಬಂಧ ಸಂವಿಧಾನಕ್ಕೆ ತಿದ್ದುಪಡಿ ಮಾಡುವುದಾಗಿ ಹೇಳಿಕೆ ನೀಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್ (D K Shivakumar) ಅವರ ಬಂಡವಾಳ ಬಯಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B Y Vijayendra) ಟೀಕಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ವೇಳೆ ದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಾವಣೆ ಮಾಡುತ್ತದೆ ಎಂದು ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಹಾಗೂ ಡಿಕೆಶಿ ಸಹಿತ ರಾಹುಲ್ ಗಾಂಧಿ (Rahul Gandhi) ಅಪಪ್ರಚಾರ ಮಾಡಿದ್ದರು. ಆದರೆ, ಸ್ವಾತಂತ್ರ‍್ಯ ಬಂದ ನಂತರ ಕಾಂಗ್ರೆಸ್ ಅಧಿಕಾರವಧಿಯಲ್ಲಿಯೇ ಸಂವಿಧಾನದಲ್ಲಿ ಅತೀ ಹೆಚ್ಚು ತಿದ್ದುಪಡಿ ಮಾಡಲಾಗಿದೆ ಕಿಡಿಕಾರಿದರು. ಇದನ್ನೂ ಓದಿ: 9 ತಿಂಗಳ ನಂತರ ವಿಮಾನ ಹತ್ತಿದ ದರ್ಶನ್
ಕೇವಲ ಅಲ್ಪಸಂಖ್ಯಾತರ ಓಲೈಕೆಗಾಗಿ ಕಾಂಗ್ರೆಸ್(Congress) ಪಕ್ಷದ ನಾಯಕರು ಸಂವಿಧಾನ ಬದಲಾವಣೆ ಮಾಡುವುದಾಗಿ ಹೇಳುತ್ತಾ ಬಂದಿದ್ದಾರೆ. ಇದರಿಂದ ಅಂಬೇಡ್ಕರ್ ಅವರಿಗೆ ಇವರು ಎಷ್ಟು ಗೌರವ ಕೊಡುತ್ತಾರೆ ಎಂಬುದು ಗೊತ್ತಾಗಿದೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಹೆಣ್ಣು ಮಗುವಿನ ತಂದೆಯಾದ ಕೆ.ಎಲ್. ರಾಹುಲ್, ಅತಿಯಾ
ಸಿಎಂ ಹಾಗೂ ಡಿಸಿಎಂ ಅವರು ಮುಸ್ಲಿಮರ ಓಲೈಕೆಗಾಗಿ ಸಂವಿಧಾನ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ. ಈ ದೇಶದ ಪ್ರಧಾನಿ ನರೇಂದ್ರ ಮೋದಿಯವರಿಗೆ (Narendra Modi) ಸಂವಿಧಾನ ಮತ್ತು ಅಂಬೇಡ್ಕರ್ ಅವರ ಕುರಿತಾಗಿ ಅಪಾರವಾದ ಗೌರವ ಇರುವ ಕಾರಣಕ್ಕಾಗಿ ಯಾವುದೇ ಕಾರಣಕ್ಕೂ ಸಂವಿಧಾನ ತಿದ್ದುಪಡಿಗೆ ಅವಕಾಶ ನೀಡುವುದಿಲ್ಲ. ಹಾಗಾಗಿ, ತಾವು ಡಿಕೆಶಿ ಹೇಳಿಕೆಯನ್ನು ಖಂಡಿಸುವುದಾಗಿ ಹೇಳಿದರು. ಇದನ್ನೂ ಓದಿ: ಅತ್ಯಾಚಾರಕ್ಕೆ ಯತ್ನ – ಕಾಮುಕನಿಂದ ತಪ್ಪಿಸಿಕೊಳ್ಳಲು ಚಲಿಸುತ್ತಿದ್ದ ರೈಲಿಂದ ಜಿಗಿದ ಮಹಿಳೆ
ಮೊದಲಿನಿಂದಲೂ ಈ ದೇಶದ ಶೋಷಿತ ಸಮುದಾಯದ ಮತಗಳನ್ನು ಕಾಂಗ್ರೆಸ್ ದುರುಪಯೋಗ ಮಾಡಿಕೊಳ್ಳುತ್ತಲೇ ಬಂದಿದೆ. ಈ ಹಿನ್ನೆಲೆಯಲ್ಲಿ ಪ್ರಸ್ತುತ ಡಿಕೆಶಿ ಅವರು ನೀಡಿರುವ ಹೇಳಿಕೆ ಅವರ ಸ್ವಂತದ್ದಂತು ಅಲ್ಲ. ಅವರು ರಾಹುಲ್ ಗಾಂಧಿ ಮತ್ತು ಸಿದ್ದರಾಮಯ್ಯನವರ ಮನಸ್ಥಿತಿಯನ್ನು ಮಾತ್ರ ಬಯಲು ಮಾಡಿದ್ದಾರೆ ಎಂದು ಲೇವಡಿ ಮಾಡಿದರು. ಇದನ್ನೂ ಓದಿ: ನಾನು ಸಿಎಂ ಆದ್ರೆ ಸಾವಿರ ಜೆಸಿಬಿ ಆರ್ಡರ್, ಪ್ರತಿ ತಾಲೂಕಿಗೆ 35 ಇಡ್ತೀನಿ: ಯತ್ನಾಳ್
ಬಿಜೆಪಿ ಯಾವತ್ತೂ ಅಂಬೇಡ್ಕರ್ ಮತ್ತು ಅವರು ರಚಿಸಿರುವ ಸಂವಿಧಾನಕ್ಕೆ ಗೌರವ ಕೊಡುತ್ತದೆ. ಕಾಂಗ್ರೆಸಿನವರು ಸಂವಿಧಾನವನ್ನು ತಮ್ಮ ಚಟಕ್ಕೆ ಬದಲಾವಣೆ ಮಾಡುವುದಾಗಿ ಹೇಳುತ್ತಿದ್ದಾರೆಯೇ ಹೊರತು. ಅದು ಅಸಾಧ್ಯ. ಅಧಿಕಾರಕ್ಕಾಗಿ ಕಾಂಗ್ರೆಸ್ ಪಕ್ಷದ ನಾಯಕರು ಯಾವ ಹಂತಕ್ಕೂ ಇಳಿಯಬಲ್ಲರು ಎಂಬುದನ್ನು ಇದು ಸಾಬೀತುಪಡಿಸಿದೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ:ನ್ಯಾ.ಯಶವಂತ್ ವರ್ಮಾ ನ್ಯಾಯಾಂಗ ಕರ್ತವ್ಯ ನಿರ್ವಹಣೆ ಮಾಡುವಂತಿಲ್ಲ: ದೆಹಲಿ ಹೈಕೋರ್ಟ್