Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೋಗಸ್ ಎಫ್‍ಎಸ್‍ಎಲ್ ವರದಿ ತಯಾರಿಸುವ ಅನುಮಾನ: ವಿಜಯೇಂದ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬೋಗಸ್ ಎಫ್‍ಎಸ್‍ಎಲ್ ವರದಿ ತಯಾರಿಸುವ ಅನುಮಾನ: ವಿಜಯೇಂದ್ರ

Bengaluru City

ಬೋಗಸ್ ಎಫ್‍ಎಸ್‍ಎಲ್ ವರದಿ ತಯಾರಿಸುವ ಅನುಮಾನ: ವಿಜಯೇಂದ್ರ

Public TV
Last updated: March 2, 2024 3:05 pm
Public TV
Share
2 Min Read
Vijayendra
SHARE

ಬೆಂಗಳೂರು: ಬಾಂಬ್ ಸ್ಫೋಟ ವಿಷಯದಲ್ಲಿ (Rameshwaram Cafe Blast) ಬಿಜೆಪಿ ರಾಜಕಾರಣ ಮಾಡುವುದಿಲ್ಲ. ಒಂದು ಜವಾಬ್ದಾರಿಯುತ ವಿಪಕ್ಷವಾಗಿ ರಾಜ್ಯ ಸರ್ಕಾರಕ್ಕೆ ಸಂಪೂರ್ಣ ಸಹಕಾರ ಕೊಡುತ್ತೇವೆ ಎಂದು ಈಗಾಗಲೇ ಹೇಳಿದ್ದೇವೆ ಎಂದು ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (B.Y Vijayendra) ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಫ್ಎಸ್ಎಲ್ ವರದಿ ಬಂದಿದೆ. ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದು, ದೃಢಪಟ್ಟ ಮಾಹಿತಿ ನಮಗಿದೆ. ಎಲ್ಲೋ ಒಂದು ಕಡೆ ಈ ರಾಜ್ಯ ಸರ್ಕಾರದ ವಿಳಂಬ ನೀತಿ, ನಡವಳಿಕೆ ಈ ವಿಷಯವನ್ನು ಗಂಭೀರವಾಗಿ ತೆಗೆದುಕೊಂಡಿಲ್ಲ ಎಂಬಂತಿದೆ. ದೇಶದ್ರೋಹಿಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಬೋಗಸ್ ಎಫ್‍ಎಸ್‍ಎಲ್ ವರದಿ ತಯಾರಿಸುವ ಅನುಮಾನ ಕಾಡುವಂತಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಇಂತಹ ಸಂದರ್ಭದಲ್ಲಿ ರಾಜ್ಯ ಸರ್ಕಾರದ ಸಚಿವರ ಹೇಳಿಕೆಗಳು ಕೇವಲ ಬಿಜೆಪಿ ಮಾತ್ರವಲ್ಲ, ಸಾಮಾನ್ಯ ಜನರಿಗೂ ವಿಶ್ವಾಸ ಹುಟ್ಟಿಸುವಂತಿಲ್ಲ. ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂಬ ಘೋಷಣೆ ಕೂಗಿದ ದೇಶದ್ರೋಹಿಗಳ ಬಗ್ಗೆ ಸಚಿವರು `ಆ ರೀತಿ ಘೋಷಣೆ ಕೂಗಿಯೇ ಇಲ್ಲ’ ಎಂದಿದ್ದರು. `ಬಿಜೆಪಿಯವರಿಗೆ ಮಾಡುವುದಕ್ಕೆ ಕೆಲಸ ಇಲ್ಲ’ ಎಂದಿದ್ದರು. ವಿಧಾನಸೌಧಕ್ಕೆ ಧಾವಿಸಿದ ಪೊಲೀಸ್ ಅಧಿಕಾರಿಗಳು ಸಿಸಿಟಿವಿ ಫೂಟೇಜ್ ಗಮನಿಸಿ ಅರ್ಧ ಗಂಟೆಯಲ್ಲಿ ಅವರನ್ನೆಲ್ಲ ಹಿಡಿದು ಒಳಗೆ ಹಾಕಬೇಕಿತ್ತು. ಅದನ್ನೂ ಮಾಡಿಲ್ಲ ಎಂದು ಕಿಡಿಕಾರಿದ್ದಾರೆ.

ಎಫ್ಎಸ್ಎಲ್ ವರದಿ ಗಮನಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಗೃಹ ಸಚಿವರು ಹೇಳಿದ್ದಾರೆ. ಘಟನೆ ನಡೆದು ನಾಲ್ಕೈದು ದಿನ ಕಳೆದಿದೆ. ಇವತ್ತಿಗೂ ಎಫ್‍ಎಸ್‍ಎಲ್ ವರದಿ ಬಂದಿಲ್ಲ ಎಂದರೆ ಏನು ಅರ್ಥ ಎಂದು ಪ್ರಶ್ನಿಸಿದರು. ಎಫ್‍ಎಸ್‍ಎಲ್ ವರದಿ ಬಂದಿದೆ. ಪಾಕ್ ಪರ ಘೋಷಣೆ ದೃಢವಾಗಿದೆ ಎಂದು ಪತ್ರಿಕೆಗಳು, ಮಾಧ್ಯಮಗಳು ವರದಿ ಮಾಡಿವೆ. ಇದರ ಮಧ್ಯೆ ಮುಖ್ಯಮಂತ್ರಿಗಳು ಎಫ್‍ಎಸ್‍ಎಲ್ ವರದಿ ಬಂದೇ ಇಲ್ಲ ಎಂದು ಮೈಸೂರಿನಲ್ಲಿ ಹೇಳಿದ್ದಾರೆ ಎಂದರು.

ಇಂಥಹ ಘಟನೆಗಳಿಂದ ರಾಜ್ಯದ ಜನರಲ್ಲೂ ಆತಂಕ ಕಾಡುತ್ತಿದೆ. ಎಷ್ಟು ಗಂಭೀರವಾಗಿ ರಾಜ್ಯ ಸರ್ಕಾರ ತೆಗೆದುಕೊಳ್ಳಬೇಕೋ, ಇಂಥ ಘಟನೆ ನಡೆದಾಗ ಪೊಲೀಸ್ ಅಧಿಕಾರಿಗಳು ಎಷ್ಟು ಗಂಭೀರವಾಗಿ ವರ್ತಿಸಬೇಕೋ ಅಂಥ ಗಂಭೀರತೆ ಮೇಲ್ನೋಟಕ್ಕೆ ಕಾಣುತ್ತಿಲ್ಲ. ಪಾಕಿಸ್ತಾನ ಜಿಂದಾಬಾದ್ ಘಟನೆ ಕುರಿತು ನಿರ್ಧರಿಸಲು 5 ದಿನ ಬೇಕೇ? ಇದು ನಾಚಿಕೆಗೇಡಿನ ಸಂಗತಿ ಅಲ್ಲವೇ ಎಂದು ಅವರು ಪ್ರಶ್ನಿಸಿದ್ದಾರೆ.

ಹಾದಿಬೀದಿಯಲ್ಲಿ ಪಾಕಿಸ್ತಾನ ಜಿಂದಾಬಾದ್ ಕೂಗಿದ್ದಲ್ಲ. ವಿಧಾನಸೌಧದಲ್ಲಿ ಕೂಗಿರುವಾಗ ದೇಶದ್ರೋಹಿಗಳನ್ನು ಬಂಧಿಸಿಲ್ಲವೆಂದರೆ ನಿಮ್ಮ ಇಚ್ಛಾಶಕ್ತಿ ಕೊರತೆಯೇ? ಅಥವಾ ದೇಶದ್ರೋಹಿಗಳನ್ನು ರಕ್ಷಿಸುವ ಪ್ರಯತ್ನದ ಜೊತೆಗೆ, ಅಲ್ಪಸಂಖ್ಯಾತರ ಭಾವನೆಗೆ ಧಕ್ಕೆ ಆಗುವುದೆಂಬ ಭಯ ನಿಮ್ಮನ್ನು ಕಾಡುತ್ತಿದೆಯೇ? ಅದನ್ನು ಸ್ಪಷ್ಟವಾಗಿ ಹೇಳಿ ಎಂದು ಆಗ್ರಹಿಸಿದ್ದಾರೆ.

ಪಾಕಿಸ್ತಾನ್ ಜಿಂದಾಬಾದ್ ಘೋಷಣೆ, ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ ನಡವಳಿಕೆ ಮತ್ತು ಸಚಿವರ ಹೇಳಿಕೆಗಳು, ಶಿವಮೊಗ್ಗದ ಟಿಪ್ಪು ಜಯಂತಿ ಸಂದರ್ಭದಲ್ಲಿ ದೇಶದ್ರೋಹಿಗಳ ಅಟ್ಟಹಾಸ, ಕುಕ್ಕರ್ ಬ್ಲಾಸ್ಟ್‌ನಲ್ಲಿ ಅಪರಾಧಿಗಳನ್ನು ಅಮಾಯಕರೆಂದು ಬಿಂಬಿಸುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DK Shivakumar) ಹೇಳಿಕೆಗಳು ರಾಜ್ಯದಲ್ಲಿ ಅಶಾಂತಿ ಮೂಡಲು ಕಾರಣವಾಗುತ್ತಿದೆ. ಗೌರವಾನ್ವಿತ ಮುಖ್ಯಮಂತ್ರಿಗಳು, ಸರ್ಕಾರದ ಇಂಥ ಘಟನೆಗಳನ್ನು ಹೆಚ್ಚು ಜವಾಬ್ದಾರಿಯುತವಾಗಿ ನಿಭಾಯಿಸಬೇಕು. ಸಚಿವರು ಬೇಜವಾಬ್ದಾರಿ ಹೇಳಿಕೆ ಕೊಡುವುದನ್ನು ನಿಲ್ಲಿಸಬೇಕು. ಏನೂ ಆಗಿಯೇ ಇಲ್ಲ ಎಂಬಂತೆ ಸಚಿವರು ಮನಸೋ ಇಚ್ಛೆ ಹೇಳಿಕೆ ಕೊಡುತ್ತಿದ್ದಾರೆ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

TAGGED:B.Y vijayendrabjpcongressDK Shivakumarsiddaramaiahಕಾಂಗ್ರೆಸ್ಡಿ.ಕೆ.ಶಿವಕುಮಾರ್ಬಿಜೆಪಿವಿಜಯೇಂದ್ರ
Share This Article
Facebook Whatsapp Whatsapp Telegram

Cinema news

Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories
The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories

You Might Also Like

Mukesh Ambani Reliance Donald Trump
Latest

ಅಮೆರಿಕದಲ್ಲಿ ರಿಲಯನ್ಸ್‌ನಿಂದ ಹೊಸ ತೈಲ ಸಂಸ್ಕರಣಾ ಘಟಕ: ಟ್ರಂಪ್‌ ಘೋಷಣೆ

Public TV
By Public TV
9 minutes ago
Mandya Crime
Crime

ಹೆಂಡತಿಯ ಕಾಮದಾಟಕ್ಕೆ ಅರ್ಚಕ ಬಲಿ – ಪತ್ನಿಯ ಪ್ಲ್ಯಾನ್‌ನಂತೆ ಪ್ರಿಯಕರನಿಂದ ಕೊಲೆ, ಲವ್ವರ್ಸ್‌ ಅರೆಸ್ಟ್

Public TV
By Public TV
9 minutes ago
ಸಾಂದರ್ಭಿಕ ಚಿತ್ರ
Latest

ಇರಾನ್‌ನಿಂದ ಖಡಕ್‌ ಪ್ರತಿಕ್ರಿಯೆ – ತೈಲ ಟ್ಯಾಂಕರ್‌ ಕುರಿತ ಅಮೆರಿಕದ ಪೋಸ್ಟ್‌ ಡಿಲೀಟ್‌

Public TV
By Public TV
44 minutes ago
Punjab Accident Foreign Womem
Latest

ರಸ್ತೆ ದಾಟುವಾಗ ಕಾರು ಡಿಕ್ಕಿ – 14 ಅಡಿ ಎತ್ತರದಿಂದ ಹಾರಿ ಬಿದ್ದ ವಿದೇಶಿ ಯುವತಿ, ಸ್ಥಳದಲ್ಲೇ ಸಾವು

Public TV
By Public TV
1 hour ago
Siddaramaiah Zameer Ahmed SS Mallikarjun
Bengaluru City

ಡಿಸಿಎಂ ಡಿಕೆಶಿ ಔತಣಕೂಟದಲ್ಲಿ ಸಿಎಂ ಸಿದ್ದರಾಮಯ್ಯ ರಾಜಿ ಸಂಧಾನ!

Public TV
By Public TV
2 hours ago
LPG Gas Shortage
Bagalkot

ಕೊಲ್ಲಿ ಕಾಳಗ ಎಫೆಕ್ಟ್ – ರಾಜ್ಯದ ವಿವಿಧೆಡೆ LPG ವ್ಯತ್ಯಯ, ಹೋಟೆಲ್ ಉದ್ಯಮಕ್ಕೆ ಭಾರೀ ಹೊಡೆತ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?