ದಾವಣಗೆರೆ: ಗುಜಾರಾತ್ ಮಾದರಿಯಂತೆಯೇ ರಾಜ್ಯದಲ್ಲೂ ಗುಜರಾತ್ ಮಾದರಿ ಸಂಪುಟ ರಚನೆಯಾದ್ರೆ ಒಳ್ಳೆಯದೇ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರ ಸ್ಫೋಟಕ ಹೇಳಿಕೆ ನೀಡಿದ್ದಾರೆ.
Advertisement
ದಾವಣಗೆರೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ವಿಜಯೇಂದ್ರ, ರಾಜ್ಯದಲ್ಲೂ ಗುಜರಾತ್ ಮಾದರಿ ಸಂಪುಟ ರಚನೆಯಾದ್ರೆ ಒಳ್ಳೆಯದೇ. ಆ ನಿಟ್ಟಿನಲ್ಲಿ ರೇಣುಕಾಚಾರ್ಯ ತಮ್ಮ ಅನಿಸಿಕೆ ತಿಳಿಸಿದ್ದಾರೆ. ಅವರ ಹೇಳಿಕೆಯಲ್ಲಿ ದುರುದ್ದೇಶವಿಲ್ಲ. ಗುಜರಾತ್‍ನಲ್ಲಿ ಸಿಎಂ ವಿಜಯ್ ರೂಪಾನಿ ರಾಜೀನಾಮೆ ಬಳಿಕ ಹಳೆಯ ಎಲ್ಲಾ ಸಚಿವರನ್ನೂ ಕೈ ಬಿಟ್ಟು ಹೊಸ ಸಚಿವರ ಸೇರ್ಪಡೆ ಮಾಡಿಕೊಳ್ಳಲಾಗಿತ್ತು. ಕರ್ನಾಟಕದಲ್ಲೂ ಇದೇ ಮಾದರಿಯಲ್ಲಿ ಹಳೆಯ ಸಚಿವರನ್ನು ಕೈಬಿಡಲು ಪರೋಕ್ಷವಾಗಿ ಹೇಳಿದಂತಿರುವ ಹೇಳಿಕೆ ಅಚ್ಚರಿ ಮೂಡಿಸಿದೆ. ಇದನ್ನೂ ಓದಿ: ಬಿಜೆಪಿಗರನ್ನು ಕಾಂಗ್ರೆಸ್ ಸಂಪರ್ಕಿಸುತ್ತಿರುವುದು ನಿಜ: ಯಡಿಯೂರಪ್ಪ
Advertisement
Advertisement
ಬಿಜೆಪಿ ಕೋರ್ ಕಮಿಟಿಯಲ್ಲಿ ಚರ್ಚೆಯಾಗಿದ್ದು ಎಲ್ಲರಿಗೂ ಗೊತ್ತಿದೆ. ಹಾನಗಲ್, ಸಿಂದಗಿ ಉಪಚುನಾವಣೆ ಬಗ್ಗೆ ಚರ್ಚೆ ಮಾಡಿದ್ದೇವೆ. ಮೋದಿಯವರ ಅಭಿವೃದ್ಧಿ ಕೆಲಸಗಳ ಬಗ್ಗೆ ರಾಜ್ಯ ಜನರಿಗೆ ತಿಳಿಸುವುದು ನಮ್ಮ ಮುಂದಿನ ಗುರಿ. ಯಡಿಯೂರಪ್ಪನವರು ಪಕ್ಷ ಕಟ್ಟಲು ಸಾಕಷ್ಟು ಶ್ರಮ ಪಟ್ಟಿದ್ದಾರೆ. ಮುಂದಿನ ದಿನಗಳಲ್ಲಿ ರಾಜ್ಯ ಪ್ರವಾಸ ಕೈಗೊಂಡು ಸ್ಪಷ್ಟ ಬಹುಮತದಿಂದ ಪಕ್ಷ ಅಧಿಕಾರಕ್ಕೆ ತರಲು ಪ್ರಯತ್ನಿಸುತ್ತಾರೆ ಎಂದರು. ಇದನ್ನೂ ಓದಿ: ಐವರ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್- ಡೆತ್ ನೋಟ್‍ನಲ್ಲಿ ಅಪ್ಪನ ವಿರುದ್ಧವೇ ಮಕ್ಕಳ ಆರೋಪ
Advertisement
ದೇವಾಲಯಗಳ ಹೆಸರಿನಲ್ಲಿ ಕಾಂಗ್ರೆಸ್ ಮೊಸಳೆ ಕಣ್ಣೀರು ಹಾಕುತ್ತಿದೆ. ಅಧಿಕಾರಿಗಳು ಆತುರದ ನಿರ್ಧಾರ ತೆಗೆದುಕೊಂಡಿದ್ದಾರೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ತೆರವು ಕಾರ್ಯ ಮಾಡಬೇಕಿತ್ತು. ಕಾಂಗ್ರೆಸ್‍ಗೆ ಇದ್ದಕ್ಕಿದ್ದಂತೆ ಹಿಂದೂಗಳ ಮೇಲೆ ಪ್ರೀತಿ ಬಂದಿದೆ. ಮೋದಿರು ಹುಟ್ಟುಹಬ್ಬವನ್ನು ದೇಶದ ಪ್ರತಿಯೊಬ್ಬರು ಸಂಭ್ರಮದಿಂದ ಆಚರಿಸಿದರು. ಆದರೆ ಕಾಂಗ್ರೆಸ್ ನಿರುದ್ಯೋಗ ದಿನಾಚರಣೆ ಎಂದು ಆಚರಿಸಿದೆ. ಕಾಂಗ್ರೆಸ್ ನಲ್ಲಿ ಮಾತ್ರ ನಿರುದ್ಯೋಗಿಗಳು ಇದ್ದಾರೆ. ಮುಂದೆ ಬರುವ ಎಲ್ಲಾ ಚುನಾವಣೆಯಲ್ಲಿ ಹೇಳ ಹೆಸರಿಲ್ಲದೆ ಕಾಂಗ್ರೆಸ್ ಹೋಗುತ್ತದೆ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.