ಬೆಂಗಳೂರು: ರಾಮಭಕ್ತರಿಗೆ ಯಾವುದೇ ಸಮಸ್ಯೆ ಆಗದಂತೆ ರಾಜ್ಯ ಸರ್ಕಾರ ಸಹಕಾರ ಕೊಡಬೇಕು ಎಂದು ಬಿಜೆಪಿ (BJP) ರಾಜ್ಯಾಧ್ಯಕ್ಷ ವಿಜಯೇಂದ್ರ (B.Y Vijayendra) ಅವರು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಕಾಂಗ್ರೆಸ್ (Congress) ನಾಯಕರ ಹೇಳಿಕೆಗಳು, ಕೋಲಾರದಲ್ಲಿ ಫ್ಲೆಕ್ಸ್ ಹರಿದ ಪ್ರಕರಣ ಇವೆಲ್ಲ ಆತಂಕಕ್ಕೆ ಕಾರಣವಾಗಿದೆ. ಅಲ್ಲದೇ ಕರಸೇವಕ ಶ್ರೀಕಾಂತ್ ಪೂಜಾರಿ ಬಂಧನದ ಘಟನೆ, ಇದೆಲ್ಲವನ್ನೂ ನೋಡಿದಾಗ ರಾಜ್ಯದಲ್ಲಿ ದೇಶದ್ರೋಹಿ ಚಟುವಟಿಕೆಗಳು ನಡೆಯದಂತೆ ಸರ್ಕಾರ ಕ್ರಮ ತೆಗೆದುಕೊಳ್ಳಬೇಕು. ಈ ವಿಚಾರದಲ್ಲಿ ಗೃಹ ಸಚಿವ ಪರಮೇಶ್ವರ್ ಹಾಗೂ ಸರ್ಕಾರ ಎಚ್ಚೆತ್ತುಕೊಳ್ಳಬೇಕು ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಅಗ್ನಿ ತೀರ್ಥ ಕಡಲತೀರದಲ್ಲಿ ನರೇಂದ್ರ ಮೋದಿ ಪವಿತ್ರ ಸ್ನಾನ
Advertisement
ರಾಮಮಂದಿರ (Ram Mandir) ಉದ್ಘಾಟನೆ ಸಮೀಪಿಸುತ್ತಿರುವಾಗ ರಾಜ್ಯದಲ್ಲಿ ಕಾಂಗ್ರೆಸ್ ಗೊಂದಲದಲ್ಲಿದೆ. ದೇಶದಲ್ಲಿ ರಾಮಜಪ ನಡೆಯುತ್ತಿದ್ದರೆ, ಕರ್ನಾಟಕದಲ್ಲಿ ದುರುದ್ದೇಶದಿಂದಲೇ ಶ್ರೀಕಾಂತ್ ಪೂಜಾರಿಯವರನ್ನು ಬಂಧಿಸಲಾಯಿತು. ವಾತಾವರಣ ಕಲುಷಿತಗೊಳಿಸಬೇಕೆಂಬ ದುರುದ್ದೇಶದಿಂದಲೇ ಬಂಧನ ಮಾಡಲಾಗಿತ್ತು ಎಂದು ಅವರು ಆರೋಪಿಸಿದ್ದಾರೆ.
Advertisement
Advertisement
ಕಾಂಗ್ರೆಸ್ ನಾಯಕರು ರಾಮಮಂದಿರ ಆಹ್ವಾನ ತಿರಸ್ಕರಿಸಿ ಬಹುಸಂಖ್ಯಾತರ ಭಾವನೆಗೆ ಘಾಸಿ ಮಾಡಿದ್ದಾರೆ. ಅಲ್ಪಸಂಖ್ಯಾತರಿಗೆ ನೋವಾಗುತ್ತದೆ ಎಂದು ಆಹ್ವಾನ ತಿರಸ್ಕರಿಸಿದರು. ಅಲ್ಪಸಂಖ್ಯಾತರಿಗೆ ದುಃಖ ಆದರೆ ಅದಕ್ಕಿಂತ ಹೆಚ್ಚು ದುಃಖ ಕಾಂಗ್ರೆಸ್‍ನವರಿಗೆ ಆಗುತ್ತದೆ ಎಂದು ಅವರು ವ್ಯಂಗ್ಯವಾಡಿದ್ದಾರೆ.
Advertisement
ಇದೇ ವೇಳೆ ರಾಜ್ಯ ಸರ್ಕಾರವನ್ನ ರಾಜ್ಯಪಾಲರ ಮೂಲಕ ಕಂಟ್ರೋಲ್ ಮಾಡಲಾಗುತ್ತಿದೆ ಎಂಬ ಸಚಿವ ಪ್ರಿಯಾಂಕ್ ಖರ್ಗೆ ಆರೋಪ ವಿಚಾರಕ್ಕೆ ಪ್ರತಿಕ್ರಿಯಿಸಿ, ಬಿ.ಕೆ.ಹರಿಪ್ರಸಾದ್ ಅವರನ್ನ ಕೇಂದ್ರ ಸರ್ಕಾರ ಟಾರ್ಗೆಟ್ ಮಾಡಿದೆಯೋ? ರಾಜ್ಯ ಸರ್ಕಾರ ಟಾರ್ಗೆಟ್ ಮಾಡಿದೆಯೋ? ಮುಂದಿನ ದಿನಗಳಲ್ಲಿ ಅದು ಗೊತ್ತಾಗಲಿದೆ ಎಂದಿದ್ದಾರೆ.
ಹರಿಪ್ರಸಾದ್ ಹೇಳಿಕೆ, ಕೋಲಾರ ಘಟನೆ ಹಾಗೂ ಶ್ರೀಕಾಂತ್ ಪೂಜಾರಿ ಅರೆಸ್ಟ್ ವಿಚಾರ ಇರಬಹುದು ಇದನ್ನೆಲ್ಲ ನೋಡಿದರೆ ಮುಂದೆ ಅಹಿತಕರ ಘಟನೆ ಆಗದಂತೆ ಎಚ್ಚರ ವಹಿಸಬೇಕು. ಒಂದು ವೇಳೆ ಅಹಿತಕರ ಘಟನೆ ನಡೆದರೆ ಕಾಂಗ್ರೆಸ್ ಸರ್ಕಾರ ಹೊಣೆನಾ? ಎಂಬ ಪತ್ರಕರ್ತರ ಪ್ರಶ್ನೆಗೆ, ಅದರ ಬಗ್ಗೆ ಅನುಮಾನವೇ ಬೇಡ ಎಂದಿದ್ದಾರೆ. ಇದನ್ನೂ ಓದಿ: ರಾಜ್ಯ ಸರ್ಕಾರ ಜನವರಿ 22ಕ್ಕೆ ರಜೆ ಘೋಷಣೆ ಮಾಡಲಿ: ವಿಜಯೇಂದ್ರ