ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಮನೆಗೆ ವಿಜಯೇಂದ್ರ ಭೇಟಿ – ಕುಟುಂಬಸ್ಥರಿಗೆ ಸಾಂತ್ವನ

Public TV
1 Min Read
vijayendra shivamogga

ಶಿವಮೊಗ್ಗ: ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಮನೆಯಲ್ಲಿ ನೂತನ ಶಾಸಕ ಬಿ.ವೈ.ವಿಜಯೇಂದ್ರ (Vijayendra) ಭೇಟಿ ನೀಡಿ ಸಾಂತ್ವನ ಹೇಳಿದರು.

ಶಿವಮೊಗ್ಗದ ಕುಂಸಿ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿತ್ತು. ಕಳೆದ ಗುರುವಾರ ಎರಡು‌ ಖಾಸಗಿ ಬಸ್‌ಗಳ‌ ನಡುವಿನ ಭೀಕರ ಅಪಘಾತವಾಗಿತ್ತು. ಘಟನೆಯಲ್ಲಿ ಮೂವರು ಮೃತಪಟ್ಟಿದ್ದರು. ಇದನ್ನೂ ಓದಿ: ಉಗ್ರರ ಸುರಂಗವನ್ನು ಭೇದಿಸಿದ ಭದ್ರತಾ ಪಡೆ – ಅನಂತ್‌ನಾಗ್‌ನಲ್ಲಿ ಗುಂಡಿನ ಚಕಮಕಿ

vijayendra shivamogga1

ಶಿಕಾರಿಪುರದ ಮೃತರ ಮನೆಗಳಿಗೆ ಬಿ.ವೈ.ವಿಜಯೇಂದ್ರ ಭೇಟಿ ನೀಡಿದರು. ಈಸೂರು ಗ್ರಾಮದ ಮೃತ ಅರುಣ, ಚಿಕ್ಕಜೋಗಿಹಳ್ಳಿಯ ಮಹೇಶ್ವರಪ್ಪ ಮನೆಗೆ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.

ಶಿಕಾರಿಪುರದಲ್ಲಿ ಬಿಜೆಪಿ ಪಕ್ಷದಿಂದ ಸ್ಪರ್ಧಿಸಿ ವಿಜಯೇಂದ್ರ ವಿಜಯ ಸಾಧಿಸಿದ್ದಾರೆ. ಇದರ ಬೆನ್ನಲ್ಲೇ ಕ್ಷೇತ್ರದಲ್ಲಿ ಕಾರ್ಯಪ್ರವೃತ್ತರಾಗಿದ್ದಾರೆ. ತನ್ನ ಕ್ಷೇತ್ರ ವ್ಯಾಪ್ತಿಯಲ್ಲಿ ಮೃತಪಟ್ಟವರ ಮನೆಗೆ ತೆರಳಿ ಮೃತರ ಕುಟುಂಬದವರಿಗೆ ಸಮಾಧಾನ ಹೇಳಿದ್ದಾರೆ. ಇದನ್ನೂ ಓದಿ: ಮತ್ತೆ ಎದ್ದು ಓಡುತ್ತೇನೆ, ಜನರಿಂದ ದೂರವಾಗುವ ಜಾಯಮಾನ ನಮ್ಮದಲ್ಲ – ನಿಖಿಲ್‌

Share This Article