ಮುಂಬೈ: ಎಸ್.ಎಸ್. ರಾಜಮೌಳಿ ನಿರ್ದೇಶನದ ಪ್ರಭಾಸ್ ಅಭಿನಯದ ಬಾಹುಬಲಿ 2 ಚಿತ್ರ ಭಾರತದ ಬಾಕ್ಸ್ ಆಫೀಸ್‍ನಲ್ಲಿ 1000 ಕೋಟಿ ರೂ. ಹೆಚ್ಚು ಗಳಿಸಿದ ಮೊದಲ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
ಭಾರತದಲ್ಲಿ ಇದುವರೆಗೆ ಯಾವ ಚಿತ್ರವೂ ಬಾಕ್ಸ್ ಆಫೀಸ್‍ನಲ್ಲಿ 1000 ಕೋಟಿ ರೂ. ಗಳಿಸಿಲ್ಲ. ಈಗ ಬಾಹುಬಲಿ 1 ಸಾವಿರ ರೂ. ಕಲೆಕ್ಷನ್ ಮಾಡುವ ಮೂಲಕ ದಾಖಲೆ ಬರೆದಿದೆ.
ಇದನ್ನೂ ಓದಿ: ಬಾಹುಬಲಿ-2 ಚಿತ್ರದಿಂದ ಕರ್ನಾಟಕಕ್ಕೆ ಕೋಟಿ ಕೋಟಿ ಆದಾಯ
ಚಲನಚಿತ್ರ ಮಾರುಕಟ್ಟೆ ವಿಶ್ಲೇಷಕ ರಮೇಶ್ ಬಾಲಾ ಅವರು ಪ್ರಕಾರ ಹಿಂದಿ, ತಮಿಳು, ತೆಲುಗು ಮಲೆಯಾಳಂ ಹೀಗೆ ನಾಲ್ಕು ಭಾಷೆಗಳ ಚಿತ್ರಗಳಿಂದ 1000 ಕೋಟಿ ರೂ. ವನ್ನು ಗಳಿಸಿದೆ. ಇದರಲ್ಲಿ ಹಿಂದಿಯಿಂದ 481 ಕೋಟಿ, ತೆಲುಗು ತಮಿಳು ಮತ್ತು ಮಲೆಯಾಳಂ ಒಟ್ಟು 520 ಕೋಟಿ ರೂ. ಗಳಿಸಿದೆ ಎಂದು ಬಾಲಾ ಟ್ವೀಟ್ ಮಾಡಿದ್ದಾರೆ.
ಏಪ್ರಿಲ್ 28ರಂದು ಬಿಡುಗಡೆಯಾಗಿದ್ದ ಈ ಚಿತ್ರದಲ್ಲಿ ರಾಣಾ ದಗ್ಗುಬಾಟಿ, ಅನುಷ್ಕಾ ಶೆಟ್ಟಿ, ರಮ್ಯಾಕೃಷ್ಣ, ತಮನ್ನಾ ಮೊದಲಾದವರು ಅಭಿನಯಿಸಿದ್ದಾರೆ.
ಇದನ್ನೂ ಓದಿ: ಬಾಹುಬಲಿ ಪ್ರಭಾಸ್‍ಗೆ ವಧುಬೇಕಾಗಿದೆ!- ಈ ಅರ್ಹತೆ ನಿಮಗಿದ್ರೆ ನೀವು ಟ್ರೈ ಮಾಡಬಹುದು!
ಇದನ್ನೂ ಓದಿ: ಕನ್ನಡ ಸಿನಿಮಾಗಳಲ್ಲಿ ನಟಿಸುತ್ತೀರಾ? ಅಭಿಮಾನಿಯ ಪ್ರಶ್ನೆಗೆ ಅನುಷ್ಕಾ ಶೆಟ್ಟಿ ಕನ್ನಡದಲ್ಲಿ ಉತ್ತರಿಸಿದ್ದು ಹೀಗೆ
#Baahubali2 becomes the 1st Indian Movie to do ₹ 1,000 Cr Nett in #India
Hindi – ₹ 481 Crs
Telugu, Tamil & Mal (Incl ROI too) – ₹ 520 Crs
— Ramesh Bala (@rameshlaus) May 24, 2017