ಚೆನ್ನೈ: ಬಾಹುಬಲಿ ಕಟ್ಟಪ್ಪ ಸತ್ಯರಾಜ್ ಕನ್ನಡಿಗರಲ್ಲಿ ಕ್ಷಮೆ ಕೇಳಿದ್ದು, ಚಿತ್ರ ಬಿಡುಗಡೆಗೆ ಅಡ್ಡಿಪಡಿಸಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ.
ನಾನು ಕನ್ನಡ ಹಾಗೂ ಕರ್ನಾಟಕದ ವಿರೋಧಿಯಲ್ಲ. ಅಂದಿನ ಹೇಳಿಕೆಯನ್ನು ವಿರೋಧಿಸಿ ಇಂದು ಬಾಹುಬಲಿ-2 ಚಿತ್ರಕ್ಕೆ ಅಡ್ಡಿಪಡಿಸಬೇಡಿ ಎಂದು ಕನ್ನಡಿಗರಲ್ಲಿ ಸತ್ಯರಾಜ್ ಮನವಿ ಮಾಡಿದ್ದಾರೆ.
Advertisement
ಕಾವೇರಿ ಬಿಕ್ಕಟ್ಟಿನ ಸಂದರ್ಭದಲ್ಲಿ ನಾನು ಆವೇಶದಲ್ಲಿ ಮಾತನಾಡುವಾಗ ಆ ರೀತಿಯ ಹೇಳಿಕೆ ನೀಡಿದ್ದೆ. ಈ ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದರೆ ನಾನು ಕ್ಷಮೆ ಕೇಳುತ್ತೇನೆ ಎಂದು ವಿಡಿಯೋದಲ್ಲಿ ಕೇಳಿಕೊಂಡಿದ್ದಾರೆ.
Advertisement
ಸತ್ಯರಾಜ್ ಕನ್ನಡಿಗರ ವಿರುದ್ಧ ಮಾತನಾಡಿದ್ದಕ್ಕೆ ಬಾಹುಬಲಿ ಚಿತ್ರದ ಬಿಡುಗಡೆಗೆ ಕನ್ನಡ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದವು. ಈ ನಡುವೆ ಗುರುವಾರ ನಿರ್ದೇಶಕ ರಾಜಮೌಳಿ ಅವರು ಕನ್ನಡದಲ್ಲಿ ಮಾತನಾಡಿ ಸತ್ಯರಾಜ್ ಅವರ ಹೇಳಿಕೆಗೂ ಬಾಹುಬಲಿ ಚಿತ್ರ ತಂಡಕ್ಕೂ ಯಾವುದೇ ಸಂಬಂಧ ಇಲ್ಲ. ಈ ವಿಚಾರದಲ್ಲಿ ನಮಗೆ ಸಂಬಂಧ ಕಲ್ಪಿಸಬೇಡಿ ಎಂದು ಕನ್ನಡಿಗರಲ್ಲಿ ಮನವಿ ಮಾಡಿದ್ದರು.
Advertisement
Advertisement
An appeal to all the Kannada friends… pic.twitter.com/5rJWMixnZF
— rajamouli ss (@ssrajamouli) April 20, 2017