ಪ್ರಭಾಸ್, ಕೃತಿ ಸನೋನ್ ನಟನೆಯ ‘ಆದಿಪುರುಷ್’ (Adipurush) ಸಿನಿಮಾ ಗಲ್ಲಾಪೆಟ್ಟಿಗೆಯಲ್ಲಿ ಮಕಾಡೆ ಮಲಗಿದೆ. ಚಿತ್ರದ ಬಗ್ಗೆ ಅಭಿಮಾನಿಗಳಿಂದ ಆಕ್ರೋಶ್ ವ್ಯಕ್ತವಾಗಿದೆ. ಆದಿಪುರುಷ್ ಬ್ಯಾನ್ ಮಾಡಿ ಅಂತಾ ಆಗ್ರಹ ಕೂಡ ಕೇಳಿ ಬರುತ್ತಿದೆ. ಇದರ ಬೆನ್ನಲ್ಲೇ ಬಾಹುಬಲಿ, ಆರ್‌ಆರ್‌ಆರ್ ಖ್ಯಾತಿಯ ರಾಜಮೌಳಿ ಮಹಾಭಾರತವನ್ನ ಸಿನಿಮಾ ಮಾಡುವುದಾಗಿ ಖ್ಯಾತ ಬರಹಗಾರ ವಿಜಯೇಂದ್ರ ಪ್ರಸಾದ್ ಸಿಹಿಸುದ್ದಿ ನೀಡಿದ್ದಾರೆ. ಇದನ್ನೂ ಓದಿ:ತಮಿಳಿನ ಕ್ಯಾಪ್ಟನ್ ಮಿಲ್ಲರ್ ಶೂಟಿಂಗ್ ಮುಗಿಸಿದ ಶಿವಣ್ಣ
Advertisement
ಬಾಹುಬಲಿಯಿಂದಾನೇ (Bahubali) ಪ್ಯಾನ್ ಇಂಡಿಯಾ ಸಿನಿಮಾಗಳಿಗೆ ಬೇಡಿಕೆ ಹೆಚ್ಚಾಗಿದೆ. ಹಾಗೇ ದಕ್ಷಿಣ ಭಾರತದ ಸೂಪರ್‌ಸ್ಟಾರ್‌ಗಳಿಗೂ ಪ್ಯಾನ್ ಇಂಡಿಯಾ ಇಮೇಜ್ ಸಿಕ್ಕಿದೆ. ಸಿನಿಮಾದಿಂದ ಸಿನಿಮಾಗೆ ರಾಜಮೌಳಿ (Rajamouli) ರೇಂಜ್ ಬದಲಾಗುತ್ತಲೇ ಇದೆ. ಈ ಮಧ್ಯೆ ರಾಜಮೌಳಿ ಮಹಾಭಾರತ ಸಿನಿಮಾ ಮಾಡುವ ಬಗ್ಗೆನೂ ಚರ್ಚೆ ಆರಂಭ ಆಗಿದೆ. ಇತ್ತೀಚೆಗಷ್ಟೇ ತೆರೆಕಂಡಿರೋ ಪೌರಾಣಿಕ ಸಿನಿಮಾ ಆದಿಪುರುಷ್ ಫ್ಲಾಪ್ ಆಗಿದೆ. ಇದೇ ಬೆನ್ನಲ್ಲೇ ರಾಜಮೌಳಿ ತಂದೆ ವಿಜಯೇಂದ್ರ ಪ್ರಸಾದ್ ಮಹಾಭಾರತದ ಬಗ್ಗೆ ಕೆಲವು ಆಸಕ್ತಿಕರ ಸಂಗತಿಗಳನ್ನು ಬಿಚ್ಚಿಟ್ಟಿದ್ದಾರೆ. ಸಂದರ್ಶನವೊಂದರಲ್ಲಿ ವಿಜಯೇಂದ್ರ ಪ್ರಸಾದ್ (Vijendra Prasad) ‘ಮಹಾಭಾರತ’ದ ಬಗ್ಗೆ ಹೇಳಿದ್ದೇನು?
Advertisement
Advertisement
ರಾಜಮೌಳಿಗೆ ಸಿನಿಮಾಗಳಲ್ಲಿ ಸಾಹಸ ದೃಶ್ಯಗಳನ್ನು ಹೆಚ್ಚು ಇಷ್ಟ. ಹಾಗಾಗಿ ಕಥೆಯಲ್ಲಿ ಹೆಚ್ಚೆಚ್ಚು ಸಾಹಸ ದೃಶ್ಯಗಳನ್ನೇ ಸೃಷ್ಟಿ ಮಾಡುತ್ತೇನೆಂದು ವಿಜಯೇಂದ್ರ ಪ್ರಸಾದ್ ಹೇಳಿದ್ದಾರೆ. ಹಾಗೇ ರಾಜಮೌಳಿ ಬಯಸಿದಂತೆ ಮಹಾಭಾರತ (Mahabharatha) ಸ್ಕ್ರಿಪ್ಟ್ ರೆಡಿ ಮಾಡಿದ್ದೇನೆ ಎಂದು ಹೇಳಿದ್ದಾರೆ. ಇದೇ ವೇಳೆ ಬಾಹುಬಲಿ ಸ್ಕ್ರಿಪ್ಟ್ ಮಾಡುವಾಗ ರಾಜಮೌಳಿ ತಂದೆ ಬಳಿ ಹೇಳಿಕೊಂಡ ಮಾತನ್ನು ನೆನಪಿಸಿಕೊಂಡಿದ್ದಾರೆ. ಬಾಹುಬಲಿ ಸ್ಕ್ರಿಪ್ಟ್ ಬರೆಯುತ್ತಿದ್ದಾಗ, ಒಂದು ರಾಜಮೌಳಿ ಬಂದು ನನ್ನ ಬಳಿ ಕೇಳಿದ್ದರು. ಅಪ್ಪ ನಾವ್ಯಾಕೆ ಈ ಸಿನಿಮಾ ಮಾಡುತ್ತಿದ್ದೇವೆ ಅಂತ ಗೊತ್ತಾ? ಅಂತ ಕೇಳಿದ್ದರು. ಆಗ ನಾನು ಯಾಕೆ ಎಂದು ಕೇಳಿದೆ. ಈ ಸಿನಿಮಾದಲ್ಲಿ ರಾಜರು, ಅರಮನೆಗಳು, ರಾಣಿಯರು, ಎದುರಾಳಿಗಳು ಹಾಗೆಯೇ ಅದ್ದೂರಿತನ ಎಲ್ಲವೂ ಇದೆ. ಈ ಸಿನಿಮಾ ಮೂಲಕ ಮುಂದಿನ ದಿನಗಳಲ್ಲಿ ನಾನು ಮಹಾಭಾರತವನ್ನು ಮಾಡಲು ಎಷ್ಟು ರೆಡಿಯಿದ್ದೇನೆ ಎಂದು ಪರೀಕ್ಷೆ ಮಾಡಿಕೊಳ್ಳಲು ಮಾಡುತ್ತಿದ್ದೇನೆ ಎಂದು ರಾಜಮೌಳಿ ಹೇಳಿದ್ದನ್ನು ನೆನಪಿಸಿಕೊಂಡಿದ್ದಾರೆ.
Advertisement
‘ಬಾಹುಬಲಿ’ ಸಿನಿಮಾ ಮಾಡುವಾಗ ಈ ಸಿನಿಮಾ ಗೆದ್ದರೆ, ಮಹಾಭಾರತ ಸಿನಿಮಾ ಮಾಡುತ್ತೇನೆ ರಾಜಮೌಳಿ ಎಂದಿದ್ದರು ಎಂದು ವಿಜಯೇಂದ್ರ ಪ್ರಸಾದ್ ಅವರು ಸಂದರ್ಶನದಲ್ಲಿ ಮಾತನಾಡಿದ್ದಾರೆ. ದೇವರ ದಯೆಯಿಂದ ಆ ಸಿನಿಮಾ ಸಿನಿಮಾ ಆಗುತ್ತೆ. ರಾಜಮೌಳಿ ಸಿನಿಮಾ ಮಾಡುತ್ತಾರೆ ಎಂದು ರಾಜಮೌಳಿ ತಂದೆ ಅಪ್‌ಡೇಟ್ ನೀಡಿದ್ದಾರೆ.
ಬಾಹುಬಲಿ, ಬಾಹುಬಲಿ 2, ಆರ್‌ಆರ್‌ಆರ್ ಸಿನಿಮಾಗಳನ್ನ ಕೊಟ್ಟಿರೋ ರಾಜಮೌಳಿ ಅವರ ಮಹಾಭಾರತ ಮಾಡುವ ಬಗ್ಗೆ ಸಿಹಿಸುದ್ದಿ ನೀಡಿರೋದು ಫ್ಯಾನ್ಸ್ಗೆ ಖುಷಿ ಕೊಟ್ಟಿದೆ. ಒಂದು ಸಿನಿಮಾಗೆ 3-4 ವರ್ಷ ಸಮಯ ಮೀಸಲಿಡುವ ರಾಜಮೌಳಿ ಅವರ ಸಿನಿಮಾ ಮೇಲಿನ ಪ್ರೀತಿ ಅಭಿಮಾನಿಗಳಿಗೆ ತಿಳಿದಿದೆ ಹಾಗಾಗಿ ‘ಮಹಾಭಾರತ’ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆಗಳನ್ನ ಇಟ್ಟುಕೊಂಡಿದ್ದಾರೆ.