ರಾಷ್ಟ್ರ ಪ್ರಶಸ್ತಿ ವಿಜೇತ ‘ಅಕ್ಷಿ’ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ನಲ್ಲಿ ಗಮನ ಸೆಳೆದ ನಿರ್ದೇಶಕ ಮನೋಜ್ ಕುಮಾರ್ ನಿರ್ದೇಶನದ ‘ಪ್ರೇಮದ ಊರಲಿ’ ಸಿನಿಮಾ ಇದೀಗ ಹಾಡುಗಳ ಮೂಲಕ ಸದ್ದು ಮಾಡುತ್ತಿದೆ. ಚಿತ್ರದ ಟೈಟಲ್ ಟ್ರ್ಯಾಕ್ ಸೇರಿದಂತೆ ಈಗಾಗಲೇ ಬಿಡುಗಡೆಯಾಗಿರುವ ಹಾಡುಗಳಿಗೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದ್ದು, ಇದೀಗ ಮತ್ತೊಂದು ಸುಮಧುರ ಗೀತೆ ಬಿಡುಗಡೆಯಾಗಿದೆ.
ಚಿತ್ರದ ‘ಬಾನಲಿ ಜಾರಿದ…’ ಎಂಬ ಪ್ರಣಯ ಯುಗಳ ಗೀತೆಯಲ್ಲಿ ನಾಯಕ ಶ್ರೀರಾಮ್ (ಸಂತೋಷ್) ಹಾಗೂ ನಾಯಕಿ ತಪಸ್ವಿನಿ ಪೂಣಚ್ಚ (ರುಕ್ಮಿಣಿ) ಜೋಡಿಯಾಗಿ ಕಾಣಿಸಿಕೊಂಡಿದ್ದಾರೆ. ಪ್ರೀತಿಯಲ್ಲಿ ಬೀಳುವ ಸುಂದರ ಕ್ಷಣಗಳನ್ನು ಕಾವ್ಯಾತ್ಮಕವಾಗಿ ಕಟ್ಟಿಕೊಟ್ಟಿರುವ ಈ ಹಾಡು ನೋಡುಗರ ಗಮನ ಸೆಳೆಯುತ್ತಿದೆ. ವಿಶೇಷವಾಗಿ ತಪಸ್ವಿನಿ ಪೂಣಚ್ಚ ಅವರ ಮುದ್ದಾದ ಅಭಿನಯಕ್ಕೆ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಈ ಹಾಡಿಗೆ ಅಭಿಜಿತ್ ತೀರ್ಥಹಳ್ಳಿ ಸಾಹಿತ್ಯ ಬರೆದಿದ್ದು, ಸುನಾದ ಗೌತಮ್ ಸಂಗೀತ ನೀಡಿದ್ದಾರೆ. ನಿನಾದ ನಾಯಕ್ ಹಾಗೂ ರಜತ್ ಹೆಗ್ಡೆ ಹಾಡಿಗೆ ಧ್ವನಿಯಾಗಿದ್ದಾರೆ.
‘ಪ್ರೇಮದ ಊರಲಿ’ ಚಿತ್ರದಲ್ಲಿ ಶ್ರೀರಾಮ್ ನಾಯಕನಾಗಿ ನಟಿಸಿದ್ದು, ಅವರಿಗೆ ತಪಸ್ವಿನಿ ಪೂಣಚ್ಚ ಹಾಗೂ ರಮಿಕಾ ಶಿವು ನಾಯಕಿಯರಾಗಿ ಸಾಥ್ ನೀಡಿದ್ದಾರೆ. ಹಿರಿಯ ನಟ ರಂಗಾಯಣ ರಘು ನಾಯಕನ ತಂದೆಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇದನ್ನೂ ಓದಿ: ಬೇಬಿಮೂನ್ ಖುಷಿಯಲ್ಲಿ ಸಮಂತಾ
ವೆನಿಲ್ಲಾ ಎಂಟರ್‌ಟೈನ್ಮೆಂಟ್ಸ್ ಹಾಗೂ ಜಾನಕಮ್ಮ ಪ್ರೊಡಕ್ಷನ್ಸ್ ಬ್ಯಾನರ್‌ನಲ್ಲಿ ಮಮತಾ ದೇವೇಂದ್ರ ಎಂ., ಪ್ರಶಾಂತ ಡಿ.ಎಸ್. ಹಾಗೂ ರಮೇಶ್ ಎನ್. ಚಿತ್ರವನ್ನು ನಿರ್ಮಿಸಿದ್ದಾರೆ. ರಾಜಕಾಂತ್ ಎಸ್.ಕೆ. ಛಾಯಾಗ್ರಹಣ, ಹರ್ಷಿತ್ ಪ್ರಭು ಸಂಕಲನದ ಜವಾಬ್ದಾರಿ ವಹಿಸಿಕೊಂಡಿದ್ದಾರೆ.
ಹಾಡುಗಳ ಮೂಲಕ ಈಗಾಗಲೇ ಪ್ರೇಕ್ಷಕರ ಗಮನ ಸೆಳೆದಿರುವ ‘ಪ್ರೇಮದ ಊರಲಿ’ ಸಿನಿಮಾ ಸದ್ಯದಲ್ಲೇ ಅದ್ಧೂರಿಯಾಗಿ ತೆರೆಗೆ ಬರಲು ಸಜ್ಜಾಗಿದೆ. ಇದನ್ನೂ ಓದಿ: ಕೋರ್ಟ್‌ಗೆ ಯಾಕೆ ಬಂದಿದ್ದೀರಿ ಎಂದಿದ್ದಕ್ಕೆ ‘ಬರ್ತ್‌ಡೇ ಆಚರಿಸಲು’ ಎಂದ ಗೋವಿಂದ ಪತ್ನಿ ಸುನೀತಾ

