ಮುಂಬೈ: ಮಹಾರಾಷ್ಟ್ರದ (Maharashtra) ಮಾಜಿ ಸಚಿವ ಬಾಬಾ ಸಿದ್ದಿಕಿ ಹತ್ಯೆ ಪ್ರಕರಣ (Baba Siddique Murder Case) ಸಂಬಂಧ ಓರ್ವ ಕೊಲೆ ಆರೋಪಿಯನ್ನು ಅ.21 ರವರೆಗೆ ಪೊಲೀಸ್ ಕಸ್ಟಡಿಗೆ ಮುಂಬೈ ಕೋರ್ಟ್ (Mumbai Case) ಒಪ್ಪಿಸಿದೆ
ಬಂಧಿತ ಆರೋಪಿಗಳನ್ನು ಹರಿಯಾಣ ಮೂಲದ ಗುರ್ಮೈಲ್ ಸಿಂಗ್ ಹಾಗೂ ಉತ್ತರ ಪ್ರದೇಶ ಮೂಲದ ಧರ್ಮರಾಜ್ ಸಿಂಗ್ ಕಶ್ಯಪ್ ಎಂದು ಗುರುತಿಸಲಾಗಿದೆ. ಇಂದು (ಅ.13) ಬೆಳಗ್ಗೆ ಮುಂಬೈ ಪೊಲೀಸರು ಕೊಲೆ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಮುಂಬೈನ ಎಸ್ಪ್ಲೇನೇಡ್ ಕೋರ್ಟ್‌ಗೆ (Esplanade Court) ಹಾಜರುಪಡಿಸಿದ್ದಾರೆ.ಇದನ್ನೂ ಓದಿ: ತೆಲಂಗಾಣ ಡಿಎಸ್‌ಪಿ ಆಗಿ ಅಧಿಕಾರ ವಹಿಸಿಕೊಂಡ ಸಿರಾಜ್ – ಪೊಲೀಸ್ ಡ್ರೆಸ್‌ನಲ್ಲಿ ವೇಗಿ
- Advertisement
ಇಬ್ಬರು ಆರೋಪಿಗಳ ಪೈಕಿ ಗುರ್ಮೈಲ್ ಸಿಂಗ್‌ನನ್ನು ಅ.21ರವರೆಗೆ ಮುಂಬೈ ಕ್ರೈಂ ಬ್ರ್ಯಾಂಚ್ ಕಸ್ಟಡಿಗೆ ವಹಿಸಿ ಆದೇಶ ಹೊರಡಿಸಿದೆ. ಆರೋಪಿ ಧರ್ಮರಾಜ್ ಸಿಂಗ್ ಕಶ್ಯಪ್ ತಾನು ಅಪ್ರಾಪ್ತ ಎಂದು ಹೇಳಿಕೊಂಡಿದ್ದ. ಅದಕ್ಕೆ ಕೋರ್ಟ್, ಆತನಿಗೆ ಮೂಳೆ ಪರೀಕ್ಷೆಯ ಬಳಿಕ ಮತ್ತೆ ಕೋರ್ಟ್‌ಗೆ ಹಾಜರುಪಡಿಸುವಂತೆ ಸೂಚಿಸಿದೆ.
- Advertisement
ಆಸಿಫೀಕೇಶನ್ ಪರೀಕ್ಷೆ (Ossification Test) (ಮೂಳೆ ಪರೀಕ್ಷೆ) ಎಂದರೆ ಮೂಳೆಗಳ ಸಮ್ಮಿಲನದ ಆಧಾರದ ಮೇಲೆ ವಯಸ್ಸಿನ ಪತ್ತೆ ಹಚ್ಚುವಿಕೆ ಪರೀಕ್ಷೆಯಾಗಿರುತ್ತದೆ. ಸಾಮಾನ್ಯವಾಗಿ ಯಾವುದೇ ಪ್ರಕರಣದಲ್ಲಿ ವಯಸ್ಸು ಪತ್ತೆ ಹಚ್ಚಲು ಈ ಪರೀಕ್ಷಾ ವಿಧಾನವನ್ನು ಬಳಸುತ್ತಾರೆ.
ಆರೋಪಿ ಸಿದ್ದಾರ್ಥ ಅಗರವಾಲ್‌ನ ವಕೀಲರು ಮಾತನಾಡಿ, ಪೊಲೀಸರು ಆರೋಪಿಗಳನ್ನು ಹಾಜರುಪಡಿಸಿದ್ದಾರೆ. ನಾವು ಕೆಲವು ಆಧಾರಗಳನ್ನು ನೀಡಿದ್ದೇವೆ. ಅವುಗಳ ಆಧಾರದ ಮೇಲೆ ಓರ್ವ ಆರೋಪಿಗೆ ಪೊಲೀಸ್ ಕಸ್ಟಡಿಗೆ ವಹಿಸಿದೆ. ಇನ್ನೋರ್ವ ಆರೋಪಿಯನ್ನು ಆಸಿಫೀಕೇಶನ್ ಪರೀಕ್ಷೆಗೆ ಕಳಿಸಿದ್ದಾರೆ.
ಮುಂಬೈ ಪೊಲೀಸರ ಮಾಹಿತಿ ಪ್ರಕಾರ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೋರ್ವ ಆರೋಪಿಯನ್ನು ಗುರುತಿಸಲಾಗಿದ್ದು, ಮೊಹಮ್ಮದ್ ಜೀಶನ್ ಅಖ್ತರ್ ಎಂದು ಪತ್ತೆಹಚ್ಚಲಾಗಿದೆ. ಸದ್ಯ ಈ ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಲಾಗಿದ್ದು, ತನಿಖೆ ನಡೆಯುತ್ತಿದೆ.ಇದನ್ನೂ ಓದಿ: ಮುಂಬೈ ಇಂಡಿಯನ್ಸ್ ಮುಖ್ಯ ಕೋಚ್ ಆಗಿ ಮಹೇಲಾ ಜಯವರ್ಧನೆ ಮರುನೇಮಕ