– ಸಿದ್ದಿಕಿ ಹತ್ಯೆ ಹೊಣೆ ಹೊತ್ತುಕೊಂಡ ಬಿಷ್ಣೋಯ್ ಗ್ಯಾಂಗ್
– ಬಿಷ್ಣೋಯ್ ಗ್ಯಾಂಗ್‌ನಲ್ಲಿದ್ದಾರೆ 700 ಶೂಟರ್ಸ್: ಪೊಲೀಸ್
ಮುಂಬೈ: ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕಿ ಅವರ ಹತ್ಯೆಯ ಹೊಣೆಯನ್ನು ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ (Lawrence Bishnoi Gang) ಭಾನುವಾರ (ಇಂದು) ಹೊತ್ತುಕೊಂಡಿದೆ. 66 ವರ್ಷದ ಹಿರಿಯ ರಾಜಕಾರಣಿಯನ್ನು ಶನಿವಾರ ರಾತ್ರಿ ದಸರಾ ಆಚರಣೆಯ ಸಂದರ್ಭದಲ್ಲಿ ಮುಂಬೈನ (Mumbai) ಬಾಂದ್ರಾದಲ್ಲಿರುವ ಅವರ ಕಚೇರಿಯ ಹೊರಗೆ ಗುಂಡಿಕ್ಕಿ ಹತ್ಯೆಮಾಡಲಾಗಿತ್ತು.
2 ತಿಂಗಳ ಹಿಂದೆಯೇ ಸ್ಕೆಚ್:
ಸಿದ್ದಿಕಿ ಹತ್ಯೆಗೆ 2 ತಿಂಗಳ ಹಿಂದೆಯೇ ಸ್ಕೆಚ್ ಹಾಕಲಾಗಿತ್ತು. ಸತತವಾಗಿ ಅವರ ಚಲವಲಗಳ ಮೇಲೆ ಗ್ಯಾಂಗ್‌ನವರು ನಿಗಾ ಇರಿಸಿದ್ದರು ಎಂದು ಪೊಲೀಸ್ (Mumbai Police) ಮೂಲಗಳಿಂದ ತಿಳಿದುಬಂದಿದೆ. ಈ ಪ್ರಕರಣದಲ್ಲಿ ಹರಿಯಾಣ ಹಾಗೂ ಉತ್ತರ ಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನ ಬಂಧಿಸಲಾಗಿದ್ದು, ಮತ್ತೊಬ್ಬ ಆರೋಪಿಗಾಗಿ ವಿಶೇಷ ತಂಡಗಳ ಮೂಲಕ ಶೋಧ ನಡೆಸಲಾಗುತ್ತಿದೆ. ಇದನ್ನೂ ಓದಿ: ಭಾಗಮತಿ ಎಕ್ಸ್‌ಪ್ರೆಸ್ ರೈಲು ದುರಂತ – 18 ಗಂಟೆಗಳ ಬಳಿಕ ತೆರವು ಕಾರ್ಯಾಚರಣೆ ಯಶಸ್ವಿ
Advertisement
Advertisement
50,000ಕ್ಕೆ ಕಿಲ್ಲಿಂಗ್ ಕಾಂಟ್ರ್ಯಾಕ್ಟ್
ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿರುವ ಪೊಲೀಸರು ಸ್ಫೋಟಕ ವಿಚಾರಗಳನ್ನ ಬಯಲಿಗೆಳೆದಿದ್ದಾರೆ. ತನಿಖೆ ವೇಳೆ ಈ ಪ್ರಕರಣದ ಮಾಸ್ಟರ್ ಮೈಂಡ್ ಅಜ್ಞಾತ ಸ್ಥಳದಲ್ಲಿದ್ದುಕೊಂಡೇ ಹಂತಕರಿಗೆ ಹಣ ನೀಡುತ್ತಿದ್ದ ಎಂಬ ವಿಚಾರವೂ ಬೆಳಕಿಗೆ ಬಂದಿದೆ. ಮುಂಬೈ ಪೊಲೀಸ್ ಮೂಲಗಳ ಪ್ರಕಾರ, ಮೂವರು ಕೊಲೆ ಆರೋಪಿಗಳು ಪಂಜಾಬ್ ಜೈಲಿಯಲ್ಲಿ ಭೇಟಿಯಾಗಿದ್ದರು. ಕಳೆದ ಸೆಪ್ಟೆಂಬರ್ 2 ರಿಂದ ಕುರ್ಲಾದಲ್ಲಿ ತಿಂಗಳಿಗೆ 14,000 ರೂ.ನೀಡುವ ಮನೆ ಬಾಡಿಗೆ ಪಡೆದು ವಾಸವಿದ್ದರು. ಸಿದ್ದಿಕ್ಕಿ ಹತ್ಯೆಗೆ ಅಲ್ಲಿಯೇ ಸಂಚು ರೂಪಿಸಿದ್ದರು. ಮೂವರು ಆರೋಪಿಗಳು ತಲಾ 50 ಸಾವಿರ ರೂ.ಗೆ ಗುತ್ತಿಗೆ ಪಡೆದಿದ್ದರು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಚುನಾವಣಾ ಫಲಿತಾಂಶದ ದಿನ ವಾಟ್ಸಪ್ ಗ್ರೂಪ್‌ನಲ್ಲಿ ಹರಿಯಾಣ ಸಿಎಂಗೆ ಕೊಲೆ ಬೆದರಿಕೆ – ಆರೋಪಿ ಅರೆಸ್ಟ್
Advertisement
Advertisement
ಬಿಷ್ಣೋಯ್ ಗ್ಯಾಂಗ್‌ನಲ್ಲಿದ್ದಾರೆ 700 ಶೂಟರ್ಸ್:
ಡಜನ್ ಗಟ್ಟಲೇ ಕ್ರಿಮಿನಲ್ ಮೊಕದ್ದಮೆಗಳನ್ನು ಎದುರಿಸುತ್ತಿರುವ ಲಾರೆನ್ಸ್ ಬಿಷ್ಣೋಯ್ ಪ್ರಸ್ತುತ ಗುಜರಾತ್ ಜೈಲಿನಲ್ಲಿದ್ದಾನೆ. ಆದ್ರೆ ಅವನ ಗ್ಯಾಂಗ್‌ನಿಂದ ಉದ್ಯಮಿಗಳು, ಪ್ರಮುಖ ವ್ಯಕ್ತಿಗಳಿಗೆ ಬೆದರಿಕೆ ಕರೆಗಳು ಬರುತ್ತಲೇ ಇವೆ. ಸದ್ಯ ಬಿಷ್ಣೋಯ್ ಗ್ಯಾಂಗ್‌ನಲ್ಲಿ 700ಕ್ಕೂ ಹೆಚ್ಚು ಶೂಟರ್‌ಗಳಿದ್ದಾರೆ. ದೇಶಾದ್ಯಂತ ಅನೇಕ ಸಣ್ಣ ಮತ್ತು ದೊಡ್ಡ ಕ್ರಿಮಿನಲ್‌ಗಳು ಅವನಿಗಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಪೊಲೀಸ್ ಮೂಲಗಳು ಸೂಚಿಸುತ್ತವೆ.
ಬಾಂದ್ರಾ ಪೂರ್ವದ ಶಾಸಕರಾಗಿರುವ ಅವರ ಪುತ್ರ ಜೀಶಾನ್ ಅವರ ಕಚೇರಿಯಲ್ಲಿ ಶನಿವಾರ ರಾತ್ರಿ 9:30ರ ಸುಮಾರಿಗೆ ಸಿದ್ದಿಕಿ ಮೇಲೆ ಮೂರು ಗುಂಡುಗಳನ್ನು ಹಾರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಸಿದ್ದಿಕಿ ಮೇಲೆ ದುಷ್ಕರ್ಮಿಗಳು ಮೂರು ಗುಂಡುಗಳನ್ನು ಹಾರಿಸಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಮಾಜಿ ಸಚಿವರನ್ನು ಲೀಲಾವತಿ ಆಸ್ಪತ್ರೆಗೆ ಸಾಗಿಸಲಾಯಿತು. ಒಂದು ಗುಂಡು ಎದೆಗೆ ತಗುಲಿದ್ದರಿಂದ ಅವರು ಸಾವಿಗೀಡಾಗಿದ್ದಾರೆ.
ಬಾಂದ್ರಾ ಪಶ್ಚಿಮದಿಂದ ಮೂರು ಬಾರಿ ಶಾಸಕರಾಗಿದ್ದ ಸಿದ್ದಿಕಿ ಅವರು 48 ವರ್ಷಗಳ ಕಾಲ ಕಾಂಗ್ರೆಸ್‌ನೊಂದಿಗೆ ಗುರುತಿಸಿಕೊಂಡಿದ್ದರು. ಫೆಬ್ರವರಿಯಲ್ಲಿ ಪಕ್ಷವನ್ನು ತೊರೆದು ಅಜಿತ್ ಪವಾರ್ ಅವರ ಎನ್‌ಸಿಪಿಗೆ ಸೇರಿದ್ದರು. ಜೀಶನ್ ಸಿದ್ದಿಕಿ ಅವರನ್ನು ಆಗಸ್ಟ್‌ನಲ್ಲಿ ಕಾಂಗ್ರೆಸ್‌ನಿಂದ ಉಚ್ಛಾಟಿಸಲಾಗಿತ್ತು. ಇದನ್ನೂ ಓದಿ: ಮಾಜಿ ಸಚಿವ ಸಿದ್ದಿಕಿ ಹತ್ಯೆ – ಬಿಕ್ಕಿ ಬಿಕ್ಕಿ ಕಣ್ಣೀರಿಟ್ಟ ಶಿಲ್ಪಾಶೆಟ್ಟಿ, ಆಸ್ಪತ್ರೆಗೆ ಬಾಲಿವುಡ್ ತಾರಾ ದಂಡೇ ದೌಡು
ಏನಾಗಿತ್ತು?
ಮುಂಬೈನ ಬಾಂದ್ರಾ ಪೂರ್ವದ ಶಾಸಕರಾಗಿರುವ ಅವರ ಪುತ್ರ ಜೀಶಾನ್ ಅವರ ಕಚೇರಿಯಲ್ಲಿ ಶನಿವಾರ ರಾತ್ರಿ 9:30ರ ಸುಮಾರಿಗೆ ಸಿದ್ದಿಕಿ ಮೇಲೆ ಮೂರು ಗುಂಡುಗಳನ್ನು ಹಾರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಸಿದ್ದಿಕಿ ಮೇಲೆ ದುಷ್ಕರ್ಮಿಗಳು ಮೂರು ಗುಂಡುಗಳನ್ನು ಹಾರಿಸಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಮಾಜಿ ಸಚಿವರನ್ನು ಲೀಲಾವತಿ ಆಸ್ಪತ್ರೆಗೆ ಸಾಗಿಸಲಾಯಿತು. ಒಂದು ಗುಂಡು ಎದೆಗೆ ತಗುಲಿದ್ದರಿಂದ ಅವರು ಸಾವಿಗೀಡಾಗಿದ್ದಾರೆ. ಬಾಂದ್ರಾ ಪಶ್ಚಿಮದಿಂದ ಮೂರು ಬಾರಿ ಶಾಸಕರಾಗಿದ್ದ ಸಿದ್ದಿಕಿ ಅವರು 48 ವರ್ಷಗಳ ಕಾಲ ಕಾಂಗ್ರೆಸ್‌ನೊಂದಿಗೆ ಗುರುತಿಸಿಕೊಂಡಿದ್ದರು. ಫೆಬ್ರವರಿಯಲ್ಲಿ ಪಕ್ಷವನ್ನು ತೊರೆದು ಅಜಿತ್ ಪವಾರ್ ಅವರ ಎನ್‌ಸಿಪಿಗೆ ಸೇರಿದ್ದರು. ಜೀಶನ್ ಸಿದ್ದಿಕಿ ಅವರನ್ನು ಆಗಸ್ಟ್‌ನಲ್ಲಿ ಕಾಂಗ್ರೆಸ್‌ನಿಂದ ಉಚ್ಛಾಟಿಸಲಾಗಿತ್ತು.