ಭಾರತಕ್ಕೆ ಬಂದ ಪಾಕ್‌ ತಂಡಕ್ಕೆ ಕೇಸರಿ ಶಾಲು ಹಾಕಿ ಸ್ವಾಗತ – ಬಾಬರ್‌ ಆಜಂ ಬಿಜೆಪಿ ಯುವನಾಯಕ ಎಂದು ಟ್ರೋಲ್‌

Public TV
3 Min Read
Babar Azam 2

ಹೈದರಾಬಾದ್‌: ಭಾರತದ ಆತಿಥ್ಯದಲ್ಲಿ ಇದೇ ಅಕ್ಟೋಬರ್‌ 5 ರಿಂದ ನಡೆಯಲಿರುವ ಏಕದಿನ ವಿಶ್ವಕಪ್‌ ಟೂರ್ನಿಯನ್ನಾಡಲು ಪಾಕಿಸ್ತಾನ ಕ್ರಿಕೆಟ್​ ತಂಡ ಬುಧವಾರ ತಡರಾತ್ರಿ ಹೈದರಾಬಾದ್​ಗೆ ಬಂದಿಳಿದಿದೆ. ಈ ವೇಳೆ ಪಾಕಿಸ್ತಾನ ತಂಡದ ಆಟಗಾರರಿಗೆ ವಿವಿಧ ರೀತಿಯ ಶಾಲುಗಳನ್ನ ಹೊದಿಸಿ ಸಾಂಪ್ರದಾಯಿಕವಾಗಿ ಸ್ವಾಗತಿಸಲಾಗಿದೆ.

ಈ ನಡುವೆ ಪಾಕಿಸ್ತಾನ ಕ್ರಿಕೆಟ್‌ ತಂಡದ ನಾಯಕ ಬಾಬರ್‌ ಆಜಂ ಸೇರಿದಂತೆ ಕೆಲವು ಆಟಗಾರರಿಗೆ ಕೇಸರಿ ಶಾಲು ಹಾಕಿ ಸ್ವಾಗತಿಸಿದ್ದು, ಇದೀಗ ಟ್ವಿಟರ್​ನಲ್ಲಿ ಸಖತ್‌ ಟ್ರೆಂಡ್​ ಆಗಿದೆ. ಹೈದರಾಬಾದ್​ ವಿಮಾನ ನಿಲ್ದಾಣಕ್ಕೆ ಬಂದ ಪಾಕಿಸ್ತಾನ ತಂಡದ ಆಟಗಾರರಿಗೆ ಕೇಸರಿ ಸಾಲು ಹಾಕಿ ಭವ್ಯ ಸ್ವಾಗತ ಕೋರಿ ಬರಮಾಡಿಕೊಳ್ಳಲಾಯಿತು. ಈ ವೇಳೆ ಭಾರೀ ಬಿಗಿ ಭದ್ರತೆಯನ್ನೂ ನಿಯೋಜನೆ ಮಾಡಲಾಗಿತ್ತು. ಇದನ್ನೂ ಓದಿ: Asian Games: ಮಹಿಳೆಯರ 60 ಕೆ.ಜಿ ವುಶು ಫೈನಲ್‍ನಲ್ಲಿ ಭಾರತಕ್ಕೆ ಬೆಳ್ಳಿ

ವಿಶ್ವಕಪ್ ಟೂರ್ನಿಗೂ ಮುನ್ನ ಪಾಕಿಸ್ತಾನವು ಸೆಪ್ಟೆಂಬರ್ 29ರಂದು ನ್ಯೂಜಿಲೆಂಡ್ ವಿರುದ್ಧ ಹೈದರಾಬಾದ್‌ನಲ್ಲಿ ಅಭ್ಯಾಸ ಪಂದ್ಯವನ್ನಾಡಲಿದೆ. ಅಕ್ಟೋಬರ್ 3 ರಂದು ಆಸ್ಟ್ರೇಲಿಯಾ ವಿರುದ್ಧ ಕೊನೆಯದ್ದಾಗಿ ಅಭ್ಯಾಸ ಪಂದ್ಯಗಳನ್ನಾಡಲಿದೆ. ಆ ನಂತರ ವಿಶ್ವಕಪ್‌ ಟೂರ್ನಿಯಲ್ಲಿ ಪಾಲ್ಗೊಳ್ಳಲಿದೆ. ಅದಕ್ಕಾಗಿ ಪಾಕ್‌ ತಂಡ ಸೆ.27ರ ತಡರಾತ್ರಿ ಹೈದರಾಬಾದ್‌ಗೆ ಬಂದಿಳಿದಿದೆ.

ಪಾಕ್​ ಆಟಗಾರರು ಕೇಸರಿ ಶಾಲು ಧರಿಸಿದ ಫೋಟೊ ಮತ್ತು ವೀಡಿಯೋ ಇದೀಗ ಜಾಲತಾಣದಲ್ಲಿ ಸಖತ್‌ ಸದ್ದು ಮಾಡುತ್ತಿದೆ. ಪಾಕ್​ ತಂಡದ ನಾಯಕ ಬಾಬರ್​ ಆಜಂ ಅವರನ್ನ ನೆಟ್ಟಿಗರು ತೆಲಂಗಾಣದ ಬಿಜೆಪಿ ಯುವ ಘಟಕದ ನಾಯಕ ಎಂದು ಟ್ರೋಲ್​ ಮಾಡಿದ್ದಾರೆ. ಇದನ್ನೂ ಓದಿ: ಬ್ಯಾಟಿಂಗ್‌ನಲ್ಲಿ ಕೈಕೊಟ್ಟರೂ ಬೌಲಿಂಗ್‌ನಲ್ಲಿ ಕೈಹಿಡಿದ ಮ್ಯಾಕ್ಸಿ – ಪಂದ್ಯ ಸೋತು ಸರಣಿ ಗೆದ್ದ ಭಾರತ

Babar Azam

ಪಾಕಿಸ್ತಾನ ತಂಡ ಕೆಲವು ದಿನಗಳ ಹಿಂದೆಯೇ ಭಾರತಕ್ಕೆ ಬರಬೇಕಿತ್ತು. ಆದರೆ ವೀಸಾ ಸಮಸ್ಯೆಯಿಂದ ಪ್ರಯಾಣ ಅಸಾಧ್ಯವಾಗಿತ್ತು. ಇದೇ ವಿಚಾರವಾಗಿ ಪಾಕ್​ ಕ್ರಿಕೆಟ್​ ಮಂಡಳಿ ವಿಶ್ವಕಪ್​ಗೆ ಪೂರ್ವ ತಯಾರಿ ನಡೆಸಲು ಸರಿಯಾದ ವ್ಯವಸ್ಥೆ ಇಲ್ಲವೆಂದು ಜಾಗತಿಕ ಸಂಸ್ಥೆಯೊಂದಿಗೆ ಕಳವಳ ವ್ಯಕ್ತಪಡಿಸಿತ್ತು. ಕೊನೆಗೆ ಐಸಿಸಿ ಮಧ್ಯಪ್ರವೇಶಿಸಿ ಈ ಸಮಸ್ಯೆಯನ್ನು ಬಗೆಹರಿಸಿ ಪಾಕಿಸ್ತಾನ ಕ್ರಿಕೆಟ್ ತಂಡದ ಸದಸ್ಯರಿಗೆ ಭಾರತೀಯ ವೀಸಾಗಳನ್ನು ನೀಡುವ ವ್ಯವಸ್ಥೆ ಮಾಡಿತ್ತು.

7 ವರ್ಷಗಳ ಬಳಿಕ ಭಾರತಕ್ಕೆ ಕಾಲಿಟ್ಟ ಪಾಕ್‌:
ಪಾಕಿಸ್ತಾನ ಕ್ರಿಕೆಟ್‌ ತಂಡ 7 ವರ್ಷಗಳ ಬಳಿಕ ಭಾರತಕ್ಕೆ ಕಾಲಿಟ್ಟಿದೆ. 2008ರಲ್ಲಿ ನಡೆದ ಮುಂಬೈ ದಾಳಿಯ ಬಳಿಕ ಭಾರತ ಮತ್ತು ಪಾಕಿಸ್ತಾನ ದ್ವಿಪಕ್ಷೀಯ ಸರಣಿ ಆಡುವುದನ್ನೇ ನಿಲ್ಲಿಸಿದೆ. ಆದ್ರೆ 2016ರಲ್ಲಿ ನಡೆದಿದ್ದ ಟಿ20 ವಿಶ್ವಕಪ್​ ಟೂರ್ನಿ ಆಡಲು ಕೊನೆಯ ಬಾರಿ ಪಾಕ್​ ತಂಡ ಭಾರತಕ್ಕೆ ಬಂದಿತ್ತು. ಅದಾದ ನಂತರ ಐಸಿಸಿ ಟೂರ್ನಿಯಲ್ಲಿ ಮಾತ್ರವೇ ಕಾಣಿಸಿಕೊಳ್ಳುತ್ತಿದ್ದವು. ಇದೀಗ 7 ವರ್ಷಗಳ ಬಳಿಕ ಪಾಕಿಸ್ತಾನ ತಂಡ ಭಾರತಕ್ಕೆ ಭೇಟಿ ನೀಡಿದೆ.

ಅಕ್ಟೋಬರ್‌ 14 ರಂದು ಹೈವೋಲ್ಟೇಜ್‌ ಕದನ:
ಅ.5ರಿಂದ ನ.19ರ ವರೆಗೆ ಭಾರತದ ವಿವಿಧ ಕ್ರೀಡಾಂಗಣದಲ್ಲಿ ವಿಶ್ವಕಪ್‌ ಟೂರ್ನಿ ನಡೆಯಲಿದೆ. ಭಾರತ ಮತ್ತು ಪಾಕ್​ ನಡುವಿನ ಹೈವೋಲ್ಟೇಜ್​ ಕದನ ಅಕ್ಟೋಬರ್​ 14ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಪಂದ್ಯ ಕಣ್ತುಂಬಿಕೊಳ್ಳಲು ಕ್ರಿಕೆಟ್​ ಅಭಿಮಾನಿಗಳು ಕಾತರದಿಂದ ಕಾಯ್ತಿದ್ದಾರೆ.

Web Stories

Share This Article