ಲಖನೌ: ಬಾಬರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡರಾದ ಲಾಲ್ ಕೃಷ್ಣ ಅಡ್ವಾಣಿ, ಕೇಂದ್ರ ಸಚಿವೆ ಉಮಾಭಾರತಿ ಹಾಗೂ ಮುರಳಿ ಮನೋಹರ ಜೋಷಿ ಸೇರಿದಂತೆ ಪ್ರಕರಣದ 12 ಆರೋಪಿಗಳಿಗೆ ಸಿಬಿಐ ವಿಶೇಷ ನ್ಯಾಯಾಲಯ ಜಾಮೀನು ನೀಡಿದೆ.
ಉತ್ತರ ಪ್ರದೇಶದ ಲಖನೌನಲ್ಲಿರುವ ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ನ್ಯಾಯಮೂರ್ತಿ ಎಸ್ ಕೆ ಯಾದವ್ ನೇತೃತ್ವದಲ್ಲಿ ವಿಚಾರಣೆ ನಡೆಯಿತು. ಈ ಹಿಂದಿನ ವಿಚಾರಣೆಯಲ್ಲಿ ಆರೋಪಿಗಳು ಖುದ್ದಾಗಿ ಹಾಜರಾಗಬೇಕು. ಇಲ್ಲದಿದ್ದರೆ ಯಾವುದೇ ರೀತಿಯ ಮನವಿ ಮತ್ತು ಅರ್ಜಿಗಳನ್ನು ಸ್ಪೀಕರಿಸುವುದಿಲ್ಲ ಎಂದು ನ್ಯಾಯಮೂರ್ತಿ ಎಸ್.ಕೆ. ಯಾದವ್ ಸ್ಪಷ್ಟಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಎಲ್ಲ ಆರೋಪಿಗಳು ಇಂದು ವಿಚಾರಣೆಗೆ ಖುದ್ದು ಹಾಜರಾಗಿ, ಜಾಮೀನು ಅರ್ಜಿ ಸಲ್ಲಿಸಿದ್ದರು.
Advertisement
ಬಾಬರಿ ಮಸೀದಿ ಧ್ವಂಸಕ್ಕೆ ಸಂಚು ರೂಪಿಸಿದ್ದರು ಎಂಬ ಆರೋಪದ ಮೇಲೆ ಕಳೆದ ಏಪ್ರಿಲ್ 19ರಂದು ಪ್ರಕರಣ ದಾಖಲಿಸುವಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿತ್ತು. ಪ್ರಕರಣದ ತನಿಖೆಯನ್ನು ಲಖನೌನಲ್ಲಿ ನಡೆಸಿ 2 ವರ್ಷದಲ್ಲಿ ತೀರ್ಪು ನೀಡುವಂತೆ ಆದೇಶ ನೀಡಿತ್ತು.
Advertisement