ಬೆಂಗಳೂರು: ವಿಧಾನಪರಿಷತ್‌ನ ಒಂದು ಸ್ಥಾನಕ್ಕೆ ನಡೆಯಬೇಕಿದ್ದ ಉಪಚುನಾವಣೆಗೆ ಬೇರೆ ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸದ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಬಾಬುರಾವ್ ಚಿಂಚನಸೂರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸಿ.ಎಂ.ಇಬ್ರಾಹಿಂ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ಉಪಚುನಾವಣೆ ಘೋಷಿಸಲಾಗಿತ್ತು. ಆ.11ಕ್ಕೆ ಮತದಾನ ಹಾಗೂ ಅದೇ ದಿನ ಸಂಜೆ ಮತ ಎಣಿಕೆಗೆ ದಿನಾಂಕ ನಿಗದಿಪಡಿಸಲಾಗಿತ್ತು. ಇದನ್ನೂ ಓದಿ: ಸ್ನಾನ ಮಾಡುವಾಗ ಕಾಲು ಜಾರಿ ಬಿದ್ದು ಕಾಲು ಮುರಿದುಕೊಂಡ ಶಾಸಕ ಎಂ.ವೈ ಪಾಟೀಲ್
Advertisement
Advertisement
ಪರಿಷತ್ ಸದಸ್ಯ ಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಬಾಬುರಾವ್ ಚಿಂಚನಸೂರ್ ನಾಮಪತ್ರ ಸಲ್ಲಿಸಿದ್ದರು. ಆದರೆ ಬೇರೆ ಪಕ್ಷಗಳು ತಮ್ಮ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಲಿಲ್ಲ. ಹೀಗಾಗಿ ಬಿಜೆಪಿ ಅಭ್ಯರ್ಥಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಸಂಬಂಧ ಚುನಾವಣಾಧಿಕಾರಿ ಎಂ.ಕೆ.ವಿಶಾಲಾಕ್ಷಿಯವರಿಂದ ಅಧಿಕೃತ ಘೋಷಣೆ ಹೊರಡಿಸಿದ್ದಾರೆ.
Advertisement
Advertisement
ಕಾಂಗ್ರೆಸ್‍ನಿಂದ ವಿಧಾನಪರಿಷತ್ ಸದಸ್ಯರಾಗಿದ್ದ ಸಿ.ಎಂ.ಇಬ್ರಾಹಿಂ ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಸ್ಥಾನ ನೀಡಲಿಲ್ಲ ಎಂದು ತಮ್ಮ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಬಳಿಕ ಜೆಡಿಎಸ್ ಸೇರಿದರು. ಇದನ್ನೂ ಓದಿ: ಅಮಿತ್ ಶಾಗೆ ರಾಜಾಹುಲಿ ನೀಡಿದ ಫಸ್ಟ್ ರಿಪೋರ್ಟ್ ರಿವೀಲ್ – ಸಿದ್ದರಾಮೋತ್ಸವ ಎಫೆಕ್ಟ್!