ಸೌತ್‌ನ ಸಾಕಷ್ಟು ಸಿನಿಮಾಗಳ ಮೂಲಕ ಸಂಚಲನ ಮೂಡಿಸಿದ ನಾಯಕಿ ನಮಿತಾ, ಕನ್ನಡ ಸಿನಿಮಾಗಳಿಂದ ಕೂಡ ಕನ್ನಡ ಸಿನಿಪ್ರೇಕ್ಷಕರಿಗೆ ಹತ್ತಿರವಾಗಿದ್ದಾರೆ. ಸದ್ಯ ತಾಯ್ತನದ ಖುಷಿಯ ಕ್ಷಣಗಳನ್ನ ಕಳೆಯುತ್ತಿದ್ದಾರೆ. ಇತ್ತೀಚೆಗಷ್ಟೇ ನಟಿ ನಮಿತಾ ಸೀಮಂತದ ಶಾಸ್ತ್ರದ ಸಂಭ್ರಮ ಅದ್ದೂರಿಯಾಗಿ ನೆರವೇರಿತ್ತು. ಈಗ ನಟಿಯ ಬೇಬಿ ಬಂಪ್ ಫೋಟೋಶೂಟ್ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ.

View this post on Instagram
ಇತ್ತೀಚೆಗಷ್ಟೇ ಆಪ್ತರು, ಕುಟುಂಬಸ್ಥರ ಸಮ್ಮುಖದಲ್ಲಿ ಸೀಮಂತ ಶಾಸ್ತ್ರವನ್ನು ಅದ್ದೂರಿಯಾಗಿ ಆಚರಿಸಿಕೊಂಡಿದ್ದ ನಮಿತಾ ಅವರ ಹೊಸ ಬೇಬಿ ಬಂಪ್ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ. ತಿಳಿ ನೇರಳೆ ಬಣ್ಣದ ಡ್ರೆಸ್‌ನಲ್ಲಿ ನಮಿತಾ ಮುದ್ದಾಗಿ ಕಾಣಿಸಿಕೊಂಡಿದ್ದಾರೆ.
ಇನ್ನು ಮದುವೆಯ ಬಳಿಕವೂ ಚಿತ್ರರಂಗದಲ್ಲಿ ಆಕ್ಟೀವ್ ಆಗಿದ್ದ ಬಹುಭಾಷಾ ನಟಿ ನಮಿತಾ ಈಗ ಹೊಸ ಅತಿಥಿಯ ಬರುವಿಕೆಯ ಖುಷಿಯಲ್ಲಿದ್ದಾರೆ. ತುಂಬು ಗರ್ಭೀಣಿಯಾಗಿರುವ ನಟಿ ಸದ್ಯ ತಾಯ್ತನದ ಖುಷಿಯಲ್ಲಿದ್ದಾರೆ. ಸದ್ಯ ಬೇಬಿ ಬಂಪ್ ಫೋಟೋಶೂಟ್ ಮೂಲಕ ಗಮನ ಸೆಳೆಯುತ್ತಿದ್ದಾರೆ.


