ತುಮಕೂರು: ಮೈಲಿಗೆ ಎಂದು ಬಾಣಂತಿ ಹಾಗೂ ಮಗುವನ್ನ ಕುಟುಂಬಸ್ಥರು ಊರ ಹೊರಗಿಟ್ಟಿದ್ದರಿಂದ ಮಗು ಅನಾರೋಗ್ಯಕ್ಕೆ ತುತ್ತಾಗಿ ಮೃತಪಟ್ಟ ದಾರುಣ ಘಟನೆ ಗೊಲ್ಲರಹಟ್ಟಿಯಲ್ಲಿ (Gollarahatti) ನಡೆದಿದೆ.
ಶೀತದಿಂದ ಬಳಲುತ್ತಿದ್ದ ಮಗುವನ್ನು ತುಮಕೂರು (Tumkur) ಜಿಲ್ಲಾಸ್ಪತ್ರೆಗೆ (Hospital) ದಾಖಲಿಸಲಾಗಿತ್ತು. ಮಗುವಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದೆ. ಮೈಲಿಗೆ ಎಂಬ ಕಾರಣದಿಂದ ಬಾಣಂತಿ ಹಾಗೂ ಮಗುವನ್ನು ಕುಟುಂಬಸ್ಥರು ಊರ ಹೊರಗಿಟ್ಟಿದ್ದರು ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಮೋದಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ
Advertisement
Advertisement
ವಿಪರೀತ ಗಾಳಿ, ಮಳೆ ಇದ್ದರೂ ಸಹ ಮಗು ಮತ್ತು ತಾಯಿಯನ್ನು ಊರ ಹೊರಗೆ ಇರಿಸಲಾಗಿತ್ತು. ಇದರಿಂದ ಮಗುವಿಗೆ ಅನಾರೋಗ್ಯ ಕಾನಿಸಿಕೊಂಡಿತ್ತು ಎನ್ನಲಾಗಿದೆ. ಗ್ರಾಮದ ಸಿದ್ದೇಶ್ ಮತ್ತು ವಸಂತಾ ದಂಪತಿಯ ಮಗು ಮೃತಪಟ್ಟಿದೆ. ಇದನ್ನೂ ಓದಿ: ಬದುಕಿದ್ದವನ ಹೆಸರಲ್ಲಿ ನಕಲಿ ಡೆತ್ ಸರ್ಟಿಫಿಕೇಟ್ ಸೃಷ್ಟಿಸಿ 35 ಎಕರೆಗೆ ಸ್ಕೆಚ್ – ಐವರು ಅರೆಸ್ಟ್
Advertisement
Web Stories